Homeಮುಖಪುಟ'ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ': ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಿಂದ ಬಿಡುಗಡೆಗೊಂಡಿದ್ದರೂ, ಇತರ ಪ್ರಕರಣಗಳಲ್ಲಿ ಸಿಲುಕಿಸಲ್ಪಟ್ಟಿರುವ ಹಲವರ ಭವಿಷ್ಯ ಈಗಲೂ ಅನಿಶ್ಚಿತವಾಗಿರುವುದರ ಬಗ್ಗೆ ನನಗೆ ದುಃಖವಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಾಖಾ ಹೇಳಿದ್ದಾರೆ.

ವಿಚಾರಣಾಧೀನ ಕೈದಿಗಳಾಗಿ ನಮ್ಮ ಜೀವನದ ಅಮೂಲ್ಯವಾದ ವರ್ಷಗಳನ್ನು ಕಸಿದುಕೊಳ್ಳಲಾಗಿದೆ, ಈ ವಿಚಾರಣೆಯು ಮುಕ್ತಾಯಗೊಳ್ಳಲು ಹಲವಾರು ವರ್ಷಗಳನ್ನೇ ತೆಗೆದುಕೊಳ್ಳಲಿದೆ ಎಂದು ಬಿಡುಗಡೆ ಕುರಿತು ಬರೆದ ಪತ್ರದಲ್ಲಿ ಗೌತಮ್ ನವಲಾಖಾ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮೇ 14ರಂದು ಸುಪ್ರೀಂ ಕೋರ್ಟ್ ಗೌತಮ್ ನವಲಾಖಾಗೆ ಜಾಮೀನು ಮಂಜೂರು ಮಾಡಿದೆ. ಗೃಹಬಂಧನದ ಸಮಯದಲ್ಲಿ ಅವರ ಭದ್ರತೆಯ ವೆಚ್ಚದ 20 ಲಕ್ಷ ರೂ.ಪಾವತಿ ಷರತ್ತಿನ ಬಳಿಕ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಇದು ದೀರ್ಘ ಕಾಯುವಿಕೆಯಾಗಿತ್ತು ಮತ್ತು ಅನಿವಾರ್ಯವಾಗಿತ್ತು ಎಂದು ನವ್ಲಾಖಾ ಬರೆದಿದ್ದಾರೆ. ವಿಚಾರಣಾಧೀನ ಕೈದಿಗಳ ಕುಟುಂಬಗಳು ತಮ್ಮ ಪ್ರೀತಿಪಾತ್ರರಿಂದ ದೂರವಾಗಿ ನೋವನ್ನು ಅನುಭವಿಸುತ್ತಾರೆ ಮತ್ತು ಅವರ ಬದುಕು ಅಸ್ತವ್ಯಸ್ತಗೊಳುತ್ತದೆ. ಇದು ಅಪರೂಪಕ್ಕೆ ಒಪ್ಪಿಕೊಳ್ಳಲಾಗಿರುವ ಕಟು ವಾಸ್ತವವಾಗಿದೆ. ಪ್ರಜಾಪ್ರಭುತ್ವದ ಹಕ್ಕುಗಳ ಕಾರ್ಯಕರ್ತನಾಗಿ ನನಗೆ ನ್ಯಾಯವು ದೂರದ ಕನಸಾಗಿ ಗೋಚರಿಸುತ್ತದೆ. ಅತಿಯಾದ ಹೊರೆಯು ನ್ಯಾಯಾಂಗದ ತ್ವರಿತ, ನ್ಯಾಯೋಚಿತ ವಿಚಾರಣೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಒಂದೇ ದಿನದ ಸ್ವಾತಂತ್ರ್ಯ ಹರಣವೂ ಅತಿ ಹೆಚ್ಚು ಎಂಬ ಉದಾತ್ತ ಹೇಳಿಕೆಯನ್ನು ನ್ಯಾಯಾಂಗವು ನೀಡಬಹುದು ಎಂದು ಓರ್ವ ಕೈದಿಯಾಗಿ ನಾನು ಆಗಾಗ್ಗೆ ಆಶಿಸುತ್ತಿದ್ದೆ. ಏಕೆಂದರೆ ಇಂತಹ ಹೇಳಿಕೆ ವಿಚಾರಣಾಧೀನ ಕೈದಿಗಳಿಗೆ ಭರವಸೆಯ ಆಶಾಕಿರಣವಾಗುತ್ತಿತ್ತು ಎಂದು ಬರೆದಿದ್ದಾರೆ.

ಸ್ವತಂತ್ರವಾಗಲು ಮತ್ತು ಅಂತಿಮವಾಗಿ ನನ್ನ ಕುಟುಂಬವನ್ನು ಮತ್ತು ಆತ್ಮೀಯರನ್ನು ಭೇಟಿಯಾಗಲು ನಾನು ಸಂತೋಷಪಡುತ್ತಿರುವಾಗ, ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ನರಳುತ್ತಿದ್ದಾರೆ ಎಂಬ ದುಃಖವಿದೆ ಎಂದು ಗೌತಮ್ ನವಲಾಖಾ  ಹೇಳಿದ್ದಾರೆ.

ಜನವರಿ 2018ರಲ್ಲಿ ಪುಣೆ ಬಳಿಯ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಆರೋಪ ಹೊರಿಸಿ ಬಂಧಿಸಲಾದ 16 ಶಿಕ್ಷಣ ತಜ್ಞರು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ವಕೀಲರಲ್ಲಿ 70 ವರ್ಷದ ಗೌತಮ್ ನವಲಾಖಾ ಕೂಡ ಸೇರಿದ್ದರು.

ಗೌತಮ್ ನವಲಾಖಾ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಕಾರಣದಿಂದ ಅವರನ್ನು ಜೈಲಿನಿಂದ ಸ್ಥಳಾಂತರಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ ನಂತರ ಅವರನ್ನು ನವೆಂಬರ್ 2022 ರಲ್ಲಿ ಗೃಹಬಂಧನದಲ್ಲಿ ಇರಿಸಲಾಯಿತು.

ಡಿಸೆಂಬರ್‌ನಲ್ಲಿ ಭಯೋತ್ಪಾದನಾ-ವಿರೋಧಿ ಕಾನೂನಿನಿಂದ ವ್ಯಾಖ್ಯಾನಿಸಲಾದ ಭಯೋತ್ಪಾದಕ ಕೃತ್ಯವನ್ನು ಅವರು ಎಸಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಬಾಂಬೆ ಹೈಕೋರ್ಟ್ ನವಲಾಖಾ ಅವರಿಗೆ ಜಾಮೀನು ನೀಡಿತ್ತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಜಾಮೀನು ಆದೇಶಕ್ಕೆ ತಡೆ ನೀಡಿತ್ತು.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...