Homeಕರ್ನಾಟಕ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ - ಡಿಕೆ ಶಿವಕುಮಾರ್‌

‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

- Advertisement -
- Advertisement -

ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜ ಸುಟ್ಟಿಲ್ಲ, ಸಚಿವ ನಾಗೇಶ್ ಮನೆಗೆ ನುಗ್ಗಿಲ್ಲ ಎಂದು ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಶಿಕ್ಷಣ ಸಚಿವ ನಾಗೇಶ್ ಅವರ ಮೂಲಕ ರಾಜ್ಯ ಹಾಗೂ ದೇಶದ ಇತಿಹಾಸ ತಿರುಚಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪಠ್ಯಪುಸ್ತಕದಲ್ಲಿ ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುಗಳಿಗೆ ಅಪಮಾನ ಮಾಡುತ್ತಿರುವುದು ಸರಿಯಲ್ಲ. ದೇಶದ ಸಂಸ್ಕೃತಿ, ಅನೇಕ ಮಹಾನ್ ನಾಯಕರ ವಿಚಾರ ತಿರುಚುವುದು ಸರಿಯಿಲ್ಲ ಎಂದು ಹಲವು ಮಠಾಧೀಶರು, ಸಾಹಿತಿಗಳು ವಿರೋಧಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿ ನಾಯಕರು ನಾಗೇಶ್ ಅವರ ಮನೆ ಮುಂದೆ ಹೋಗಿ ಚಡ್ಡಿ ಸುಟ್ಟಿರಬಹುದು, ಧಿಕ್ಕಾರ ಕೂಗಿರಬಹುದು. ಆದರೆ ಅವರು ಮನೆಯೊಳಗೆ ನುಗ್ಗಿಲ್ಲ. ಕಾರ್ಯಕರ್ತರು ಕೆಲ ಕಾಗದ ಸುಟ್ಟಿರಬಹುದು. ನಾವು ಅನೇಕ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕಾಗದ ಹರಿದಿದ್ದೇವೆ. ಆದರೆ ನಮ್ಮ ಹುಡುಗರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ಪ್ರತಿಭಟನೆಯಲ್ಲಿ ಸಾಂಕೇತಿಕವಾಗಿ ಇವರೇ ಚಡ್ಡಿ ತೆಗೆದುಕೊಂಡು ಹೋಗಿ ಸುಟ್ಟಿದ್ದಾರೆ. ಅವರು ನಾಗೇಶ್ ಅವರ ಮನೆ ಅಥವಾ ಬೇರೆಯವರ ಮನೆಯ ಚಡ್ಡಿ ತಂದು ಸುಟ್ಟಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಸಾಂವಿಧಾನಿಕ ಹಕ್ಕಿದೆ” ಎಂದು ಅವರು ತಮ್ಮ ಪಕ್ಷದ ವಿದ್ಯಾರ್ಥಿ ಸಂಘದ ಕಾರ್ಯಕರ್ತರನ್ನು ಸಮರ್ಥಿಸಿಕೊಂಡಿದ್ದಾರೆ.

“ಮೊನ್ನೆ ರೈತ ನಾಯಕ ಟಿಕಾಯತ್ ಅವರ ಮೇಲೆ ಬೆಂಗಳೂರಿನಲ್ಲಿ ಕೆಲವರು ಮೋದಿ ಅವರಿಗೆ ಜೈಕಾರ ಕೂಗುತ್ತಾ ಹಲ್ಲೆ ಮಾಡಿದ್ದಾರೆ. ಸರ್ಕಾರ ಇವರ ವಿರುದ್ಧ ಯಾವ ಸೆಕ್ಷನ್ ಹಾಕಿದೆ? ನಮ್ಮ ವಿದ್ಯಾರ್ಥಿ ನಾಯಕರಿಗೆ ಜಾಮೀನು ಸಿಗಬಾರದು ಎಂದು 143, 147, 448, 443, 332 ಸೇರಿದಂತೆ ಹಲವು ಗಂಭೀರ ಸೆಕ್ಷನ್ ಹಾಕಿ ಪ್ರಕರಣ ದಾಖಲಿಸಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಜಿಲ್ಲೆಯಲ್ಲಿ ಇಬ್ಬರು ದಲಿತರು ಸತ್ತಾಗ ಸಚಿವರು ಎಲ್ಲಿ ಹೋಗಿದ್ದರು? ಇಲ್ಲಿನ ಶಾಸಕರು, ಜಿಲ್ಲಾ ಮಂತ್ರಿಗಳು ಹೋಗಿ ದಲಿತರ ರಕ್ಷಣೆ ಮಾಡಿದ್ದಾರಾ? ಎರಡು ದಿನವಾದರೂ ಉಸಿರು ಎತ್ತಿರಲಿಲ್ಲ. ಆದರೆ ಈಗ ವಿದ್ಯಾರ್ಥಿ ನಾಯಕರನ್ನು ಅರ್ಧ ಗಂಟೆಯಲ್ಲೇ ಬಂಧಿಸಿದ್ದಾರೆ” ಎಂದು ಡಿಕೆಶಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

“ಪಠ್ಯಕ್ರಮ ಬದಲಾವಣೆ ವಿಚಾರವಾಗಿ ನಿರ್ಮಲಾನಂದ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು, ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪ್ರೇರಣೆಯಿಂದ ರಾಜ್ಯದಲ್ಲಿ ಧರ್ಮ ದ್ವೇಷ ಹೆಚ್ಚುತ್ತಿರುವುದು, ಶಾಂತಿ ಭಂಗವಾಗುತ್ತಿರುವುದು, ಇತಿಹಾಸ ತಿರುಚಲು ಯತ್ನಿಸುತ್ತಿರುವುದನ್ನು ಖಂಡಿಸಿ ಈ ಹುಡುಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹುಡುಗರಿಗೆ ಜಾಮೀನು ತಿರಸ್ಕಾರಗೊಂಡಿದ್ದು, ಇದು ಅಪಮಾನವಲ್ಲ. ನಾವು ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ರಾಜಕೀಯ ದುರುದ್ದೇಶದಿಂದ ಇಂತಹ ಪ್ರಕರಣ ದಾಖಲಿಸಲಾಗುತ್ತಿದೆ. ಬಿಜೆಪಿ ನಾಯಕರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಸಚಿವರು ಶವಯಾತ್ರೆ ಮಾಡಿದ್ದರೂ, ಬಿಜೆಪಿ ನಾಯಕರು ಜನರನ್ನು ಸೇರಿಸಿ ಜಾತ್ರೆ, ಹುಟ್ಟುಹಬ್ಬ ಆಚರಿಸಿದ್ದರು. ಆದರೆ ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ರಾಜಕಾರಣಿಗಳ ಮಾತು ಕೇಳಿ ಅನಗತ್ಯವಾಗಿ ಸೆಕ್ಷನ್ ಹಾಕುತ್ತಿರುವ ಅಧಿಕಾರಿಗಳು ಒಂದು ದಿನ ಇದಕ್ಕೆಲ್ಲಾ ಉತ್ತರ ನೀಡಿ, ಇದರ ಪರಿಣಾಮ ಅನುಭವಿಸಬೇಕಾಗುತ್ತದೆ. ನಮ್ಮ ಹುಡುಗರು ಮನೆಯೊಳಗೆ ನುಗಿಲ್ಲ. ಅವರು ಆವರಣದಲ್ಲಿ ಚಡ್ಡಿ ಸುಟ್ಟಿದ್ದಾರೆ. ಆರ್ ಎಸ್ ಎಸ್ ನವರು ಈಗ ಪ್ಯಾಂಟ್ ಹಾಕುತ್ತಿದ್ದು ಅದನ್ನು ಅವರ ಸಮವಸ್ತ್ರ ಎಂದು ಹೇಗೆ ಹೇಳಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ನರೇಂದ್ರ ಮೋದಿ ಸರ್ಕಾರದ ವಿಚ್ಛಿದ್ರಕಾರಿ ಸಾಧನೆಗಳು

“ನಮ್ಮ ಹುಡುಗರ ಮೇಲೆ ರೌಡಿ ಶೀಟರ್ ಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಾವು ದೂರು ಕೊಟ್ಟರೂ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಲ್ಲ. ಚಿಂತನ ಮಂಥನ ಸಭೆಯಲ್ಲಿದ್ದ ಕಾರಣ ನಾವು ಬರಲು ಸಾಧ್ಯವಾಗಿರಲಿಲ್ಲ. ಇಲ್ಲದಿದ್ದರೆ ನಾವು ಬರುತ್ತಿದ್ದೆವು. ಬಿಜೆಪಿ ಸಂಸದರು ಚಡ್ಡಿ ನಮ್ಮ ಬ್ರ್ಯಾಂಡ್ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಮಾತ್ರ ಚಡ್ಡಿ ಹಾಕುತ್ತಾರಾ? ನಾವು ಹಾಕುವುದಿಲ್ಲವೇ? ಪ್ರತಿಭಟನೆ ಪ್ರತೀಕವಾಗಿ ಚಡ್ಡಿ ಸುಟ್ಟಿದ್ದಾರೆ. ಅವರು ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿಲ್ಲ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...