Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...