Homeಮುಖಪುಟನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ರೈತರ ಪ್ರತಿಭಟನೆಗೆ ಬಂದ ಬೆಂಬಲವನ್ನು ವಿಮರ್ಶಿಸಿ ಮತ್ತು ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಮಾಡಿದ ಟ್ವೀಟ್‌ಗಳ ಸುತ್ತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಂಗಳವಾರ ತೀಕ್ಷ್ಣವಾದ ಮಾತುಗಳ ಮೂಲಕ ಪರಸ್ಪರ ದಾಳಿ ನಡೆಸಿದ್ದಾರೆ.

ಅಲಿಗಢ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನ್ ವಿಚಾರಣೆ ಮಾಡುವುದನ್ನು ಬಿಟ್ಟು ಇಬ್ಬರು ಭಾರತರತ್ನ ಪ್ರಶಸ್ತಿ ಪುರಸ್ಕೃತರ ವಿರುದ್ಧ ಆಡಳಿತಾರೂಢ ಶಿವಸೇನೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಫಡ್ನವೀಸ್ ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಗೃಹಸಚಿವ ದೇಶಮುಖ್, “ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ, ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಣೆ ಮಾಡುತ್ತಿದ್ದೇವೆ” ಎಂದಿದ್ದಾರೆ,

ಇತ್ತೀಚಿನ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಭಾಷಣ ಮಾಡುವಾಗ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ’ ಭಾಷಣವನ್ನು ಶರ್ಜಿಲ್ ಉಸ್ಮಾನ್ ಮಾಡಿದ್ದಾರೆ ಎಂದು ಆರೋಪಿಸಿರುವ ಫಡ್ನವೀಸ್, ಮಹಾರಾಷ್ಟ್ರ ಸರ್ಕಾರಕ್ಕೆ ಉಸ್ಮಾನ್ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

“ಉಸ್ಮಾನ್ ಹಿಂದೂಗಳನ್ನು ಅವಮಾನಿಸುತ್ತಾರೆ ಮತ್ತು ನೀವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎಲ್ಗಾರ್ ಪರಿಷತ್ ಸದಸ್ಯರು ಸಹ ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾರೆ, ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಯಾವುದೇ ಧೈರ್ಯವಿಲ್ಲ. ಆದರೆ ನೀವು ಭಾರತರತ್ನ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರುತ್ತೀರಿ’ ಎಂದು ಫಡ್ನವೀಸ್ ಅಸೆಂಬ್ಲಿಯಲ್ಲಿ ಹೇಳಿದರು.

“ಒಂದು ವೇಳೆ ನಾನು ಅವರನ್ನು ಆ ರೀತಿ ಟ್ವೀಟ್ ಮಾಡಲು ಕೇಳಿದೆ ಎಂದು ಭಾವಿಸೋಣ … ಹಾಗಾದರೆ ಇಲ್ಲಿ ನನ್ನ ಮೇಲಿನ ಆರೋಪ ಏನು? ಭಾರತವನ್ನು ಬೆಂಬಲಿಸಿ ಟ್ವೀಟ್ ಮಾಡಲು ನನ್ನ ಪಕ್ಷವು ಅವರನ್ನು ಕೇಳಿದ್ದರೆ, ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಫಡ್ನವೀಸ್ ಘೋಷಿಸಿದ್ದರು, “ನಾವು ನಿಮ್ಮ ವಿಚಾರಣೆಗೆ ಹೆದರುವುದಿಲ್ಲ’ ಎಂದು ಗೃಹ ಸಚಿವ ದೇಶಮುಖ್‌ಗೆ ಸವಾಲು ಹಾಕಿದರು.

ಈ ದಾಳಿಗೆ ಗೃಹ ಸಚಿವರು ಉತ್ತರಿಸಿದ್ದು, “ನಾವು ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಿಸುತ್ತಿದ್ದೇವೆ. ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಿಸುತ್ತಿಲ್ಲ … ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ನಮ್ಮ ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.

“ನೀವು ರಾಷ್ಟ್ರವನ್ನು ಬೆಂಬಲಿಸುವ ಜನರ ವಿರುದ್ಧ ವಿಚಾರಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಇದು ನಿಮ್ಮ ದೇಶಪ್ರೇಮವನ್ನು ತೋರಿಸುತ್ತದೆ’ ಎಂದು ಫಡ್ನವೀಸ್ ವ್ಯಂಗ್ಯ ಮಾಡಿದರು.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಕಾಂಗ್ರೆಸ್ ಸಚಿನ್ ಅಥವಾ ರೇಖಾ ಅವರನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ನಾವು ಅವರನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಇಂದು ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಸೆಲೆಬ್ರಿಟಿಗಳನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಿ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಬಾಲಿವುಡ್ ಮತ್ತು ಕ್ರಿಕೆಟ್ ಸೆಲೆಬ್ರಿಟಿಗಳು ಪಾಪ್ ತಾರೆ ರಿಹಾನ್ನಾ ಅವರ ರೈತರ ಪರ ಟ್ವೀಟ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರವನ್ನು ಬೆಂಬಲಿಸಿದ್ದರು.

ಈ ಹಲವಾರು ಟ್ವೀಟ್‌ಗಳು ಒಂದಕ್ಕೊಂದು ಹೋಲುತ್ತಿದ್ದವು, ಇದು, ಅವುಗಳು ಕೇಂದ್ರದಿಂದ ರಚಿಸಲ್ಪಟ್ಟವು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿತ್ತು ಮತ್ತು ಟ್ವೀಟ್ ಮಾಡಿದವರಲ್ಲಿ ಅನೇಕರು ಸರ್ಕಾರದ ‘ನಿರ್ದೇಶನದ’ ಮೇರೆಗೆ ಟ್ವೀಟ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ, ಕೇಂದ್ರವು ತೆಂಡೂಲ್ಕರ್ ಮತ್ತು ಮಂಗೇಶ್ಕರ್ ಅವರಂತಹವರನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕೆ ಮಾಡಿದ್ದರು.

ಗೃಹ ಸಚಿವ ದೇಶಮುಖ್ ಅವರು ಈ ಟ್ವೀಟ್‌ಗಳ ಹಿಂದಿನ ರಾಜಕೀಯದ ಕುರಿತು ತನಿಖೆಗೆ ಆದೇಶಿಸಿದ್ದರು. ‘ಬಿಜೆಪಿಯ ವಿರುದ್ಧ ಮಾತನಾಡಿದರೆ ರಾಜಕಾರಣಿಗಳಿಗೆ ಇ.ಡಿ ಅಥವಾ ಸಿಬಿಐ ತನಿಖೆಯ ಬೆದರಿಕೆ ಹಾಕುತ್ತಾರೆ… ಸೆಲೆಬ್ರಿಟಿಗಳ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ, ನಾವು ಖಂಡಿತವಾಗಿಯೂ ಆ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದರು.


ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...