Homeಕರ್ನಾಟಕನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್...

ನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್ ಖಂಡ್ರೆ

- Advertisement -
- Advertisement -

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕದ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರು. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು, ಆ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತುಂಬುವ ವ್ಯಕ್ತಿಯಾಗಿಯೇ ಚಿರಪರಿಚಿತ. ಸದ್ಯ ಅವರು ಸಿದ್ದರಾಮಯ್ಯನವರ ಸಂಪುಟದಲ್ಲಿ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಖಂಡ್ರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ಕರ್ನಾಟಕ ವಿಧಾನಸಭೆಗೆ ಖಂಡ್ರೆ ಕುಟುಂಬದಿಂದ ಆಯ್ಕೆಯಾದವರಲ್ಲಿ ಈಶ್ವರ್ ಖಂಡ್ರೆ ಅವರು ಮೂರನೇ ಸದಸ್ಯರಾಗಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಕ್ಷೇತ್ರ ಹೊಸದಾಗಿರಲಿಲ್ಲ. ಈಶ್ವರ್ ಖಂಡ್ರೆ ಅವರ ತಂದೆ ಮಾಜಿ ಸಚಿವರಾಗಿದ್ದರು ಮತ್ತು ಈ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾಗಿದ್ದರು. ತಂದೆಯ ನಂತರ ಈಶ್ವರ್ ಸಹೋದರ ವಿಜಯಕುಮಾರ್ ಖಂಡ್ರೆ ಅವರು ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ತಂದೆಯ ಹಾದಿಯಲ್ಲಿ ಮುಂದುವರಿಯುತ್ತಿರುವ ಇವರು ಅದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾ ಗೆಲುವು ಕಾಣುತ್ತಿದ್ದಾರೆ.

ಭೀಮಣ್ಣ ಖಂಡ್ರೆ

ಪೂರ್ತಿ ಹೆಸರು ಈಶ್ವರ ಭೀಮಣ್ಣ ಖಂಡ್ರೆ. 1962 ಜನವರಿ 15ರಂದು ಖಂಡ್ರೆ ಅವರು ಭಾಲ್ಕಿಯಲ್ಲಿ ಜನಿಸಿದರು. ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಮತ್ತು ತಾಯಿ ಲಕ್ಷ್ಮೀಬಾಯಿ. ಇಬ್ಬರು ಮಕ್ಕಳಲ್ಲಿ ಈಶ್ವರ ಖಂಡ್ರೆ ಎರಡನೆಯವರು. ಅವರು 1985ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದರು. ಇಂಜಿನಿಯರಿಂಗ್ ಮುಗಿಸಿ ಕೃಷಿ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು. ಆರಂಭದಲ್ಲಿ ಈಶ್ವರ್ ಖಂಡ್ರೆ ಅವರಿಗೆ ರಾಜಕೀಯ ಪ್ರವೇಶ ಮಾಡುವುದು ಸುತರಾಂ ಇಷ್ಟವಿರಲಿಲ್ಲ ಎನ್ನಲಾಗುತ್ತದೆ; ಸರ್ಕಾರಿ ಆಡಳಿತದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸಿನಲ್ಲಿದ್ದರು. ಆದರೆ, ತಂದೆ ಭೀಮಣ್ಣ ಖಂಡ್ರೆ ಹಾಗೂ ಸಹೋದರ ದಿವಂಗತ ಡಾ.ವಿಜಯಕುಮಾರ ಖಂಡ್ರೆ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಪರ ಕೆಲಸ ಕೈಗೊಂಡಿದ್ದರು. ಹಾಗಾಗಿ ಅವರ ನಂತರ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬರುವಂತೆ ಮಾಡಿತು.

ಈಶ್ವರ್ ಖಂಡ್ರೆ ಅವರು ನಡೆದುಬಂದ ರಾಜಕೀಯ ಹಾದಿ

1979ರಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿ ಸೇರಿದರು.

1985ರಲ್ಲಿ ಕೋಲ್ಕತ್ತದಲ್ಲಿ ನಡೆದ ಕಾಂಗ್ರೆಸ್ ಸೇವಾದಳದ ಶಿಬಿರದಲ್ಲಿ ಪಾಲ್ಗೊಂಡಿದ್ದರು. 1987ರಲ್ಲಿ ಭಾಲ್ಕಿ ಪಟ್ಟಣದಲ್ಲಿ ಜಿಲ್ಲಾಮಟ್ಟದ ಸೇವಾದಳ ಕ್ಯಾಂಪ್ ಆಯೋಜಿಸಿ ಅಂದಿನ ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಅವರನ್ನು ಆಹ್ವಾನಿಸಿದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

1989ರಲ್ಲಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ನಾಮನಿರ್ದೇಶನಗೊಂಡರು. ಅದೇ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡಿದ್ದರು.

1998ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾಲ್ಕಿಗೆ ಆಹ್ವಾನಿಸಿ ಕಿಸಾನ್ ರ್‍ಯಾಲಿ ನಡೆಸಿದರು. ಈಶ್ವರ್ ಖಂಡ್ರೆ ಅವರು ಮೊದಲ ಬಾರಿಗೆ 2004ರಲ್ಲಿ ಭಾಲ್ಕಿ ವಿಧಾನಸಭೆಯಿಂದ ಸ್ಪರ್ಧಿಸಿ ಸೋಲು ಕಂಡರು.

ವಿಜಯಕುಮಾರ್ ಖಂಡ್ರೆ

2008ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಸ್ಪರ್ಧಿಸಿದ ಈಶ್ವರ ಖಂಡ್ರೆ ಅವರು ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪವೇಶಿಸಿದರು. 2013ರ ಚುನಾವಣೆಯಲ್ಲಿಯೂ ಗೆದ್ದು 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಖಂಡ್ರೆ ಅವರನ್ನು ಅದೇ ವರ್ಷ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಶ್ವರ ಖಂಡ್ರೆ ಅವರು 22 ತಿಂಗಳ ಕಾಲ ಪೌರಾಡಳಿತ ಇಲಾಖೆ ಸಚಿವ ಹಾಗೂ ಬೀದರ್ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದರು.

2018ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಈಶ್ವರ ಖಂಡ್ರೆ ಅವರನ್ನು ಎರಡನೇ ಅವಧಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತು. 2023ರಲ್ಲಿ ಸತತ ನಾಲ್ಕನೇ ಬಾರಿ ಖಂಡ್ರೆ ಅವರು ವಿಧಾನಸಭೆಗೆ ಆಯ್ಕೆಯಾದರು ಇದೀಗ ಸಂಪುಟ ದರ್ಜೆಯ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಸ್ಪೀಕರ್ ಕಾಗೇರಿ ವಿರುದ್ಧ ಹೋರಾಟ

2023ರ ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನದ ವೇಳೆ ಸಿದ್ದರಾಮಯ್ಯನವರನ್ನು ಟಿಪ್ಪುವಿನಂತೆ ಇಲ್ಲವಾಗಿಸಿ ಎಂಬರ್ಥದಲ್ಲಿ ಬಹಿರಂಗ ಸಭೆಯಲ್ಲಿ ಕರೆನೀಡಿದ್ದ ಅಂದಿನ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ್ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ರೋಷಾವೇಶದಿಂದ ಮಾತನಾಡಿದ್ದರು. ಇದರಿಂದ ಕೋಪಗೊಂಡಿದ್ದ ಆಗಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ನಿಮ್ಮಂತಹವರು ಶಾಸಕರಾಗಿ ಆಯ್ಕೆಯಾಗಿ ಬರುವುದು ಸದನಕ್ಕೆ ಅಗೌರವ, ಯಾರು ನಿಮ್ಮನ್ನು ಆಯ್ಕೆ ಮಾಡಿದ್ದು?” ಎಂದು ಅವಹೇಳನ ಮಾಡಿದ್ದರು. ಆಗ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಒಂದು ಪಕ್ಷದ ವಕ್ತಾರರಂತೆ ಮಾತನಾಡುತ್ತಾರೆ, ಪಕ್ಷಪಾತ ಮಾಡುತ್ತಾರೆ ಎಂದು ಖಂಡ್ರೆ ಪರವಾಗಿ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಭಾಲ್ಕಿ ಪಟ್ಟಣ ಬಂದ್ ಮಾಡಲಾಗಿತ್ತು. ಅಲ್ಲದೇ ಚುನಾವಣೆಯಲ್ಲಿ ಖಂಡ್ರೆಯವರನ್ನು ದೊಡ್ಡ ಅಂತರದಲ್ಲಿ ಅಲ್ಲಿನ ಜನ ಮತ್ತೊಮ್ಮೆ ಗೆಲ್ಲಿಸಿ ಕಳುಹಿಸಿದರು. ಆದರೆ ಈ ಚುನಾವಣೆಯಲ್ಲಿ ಕಾಗೇರಿಯವರು ಸೋಲಬೇಕಾಗಿ ಬಂತು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ ಅನುಭವವಿರುವ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಾಣಲು ಸಾಧ್ಯವಾಗಿರುವುದಕ್ಕೆ ಅವರ ಕೊಡುಗೆಯೂ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸಮುದಾಯದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಲು ಕೂಡ ಕಾರಣರಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಭಾಲ್ಕಿ ಕ್ಷೇತ್ರದಲ್ಲಿನ ಅರಣ್ಯೀಕರಣಕ್ಕೆ ಆದ್ಯತೆ, ರೈತರಿಗೆ ಕಾರಂಜಾದಿಂದ ನೀರು ಪೂರೈಕೆಗೆ ಪೂರ್ಣಪ್ರಮಾಣದ ವ್ಯವಸ್ಥೆ, ಪ್ರವಾಸಿತಾಣಗಳ ಅಭಿವೃದ್ಧಿ, ಕಾರಂಜಾ ಸಂತ್ರಸ್ತರಿಗೆ ಪರಿಹಾರ, ಗೋದಾವರಿ ನದಿ ನೀರಿನ ಸದ್ಬಳಕೆಗೆ ಯೋಜನೆ, ಬೆಳೆ ಹಾನಿ ಪರಿಹಾರ, ರೈತ ಪರ ನೀರಾವರಿ ಯೋಜನೆಗಳ ಜಾರಿ ಸೇರಿದಂತೆ ರಾಜ್ಯದ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಜವಾಬ್ದಾರಿ ಅವರ ಮೇಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...