Homeಕರ್ನಾಟಕನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

ನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

- Advertisement -
- Advertisement -

ಉದ್ಯಮ ಹಾಗೂ ರಾಜಕಾರಣವನ್ನು ಜೊತೆ ಜೊತೆಯಾಗಿಯೇ ಮುನ್ನಡೆಸುವ ಹಾಗೂ ಎರಡರಲ್ಲೂ ಯಶಸ್ಸು ಕಾಣುವ ಮುಖಂಡರ ಪೈಕಿ ಕೆ.ಜೆ ಜಾರ್ಜ್ ಮುಂಚೂಣಿಯ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿ, ಯಾರೇ ಮುಖ್ಯಮಂತ್ರಿಯಾಗಲಿ ಕೆ.ಜೆ ಜಾರ್ಜ್ ಅವರಿಗೆ ಪ್ರಮುಖ ಖಾತೆ ಖಚಿತ ಎಂಬ ಮಾತು ಸಾಮಾಜಿಕ ವಲಯದಲ್ಲಿ ಜನಜನಿತವಾಗುವಷ್ಟು ಅವರು ತಮ್ಮ ವರ್ಚಸ್ಸನ್ನು ಕಳೆದ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವೃದ್ಧಿಸಿಕೊಂಡಿದ್ದರು. ಈ ಹಿಂದಿನ ಸರ್ಕಾರದಲ್ಲಿ ಅವರು ಪ್ರಮುಖ ಗೃಹ ಇಲಾಖೆಯ ನಂತರ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈಗ ಇಂಧನ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರು ಬಾರಿ ಶಾಸಕರಾಗಿದ್ದರೂ, ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಲ್ಲಿ 2003ರಿಂದ ಸತತ ನಾಲ್ಕು ಬಾರಿ ಪುನರಾಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಕೆ.ಜೆ ಜಾರ್ಜ್ ಅವರ ಬದುಕು ಮತ್ತು ಕರ್ನಾಟಕ ರಾಜಕೀಯದಲ್ಲಿ ಅವರು ಕಂಡ ಯಶಸ್ಸು ಸಾಕಷ್ಟು ರೋಚಕ.

ಕೆ.ಜೆ ಜಾರ್ಜ್ ಅವರ ಪೂರ್ಣ ಹೆಸರು ಕೇಳಚಂದ್ರ ಜೋಸೆಫ್ ಜಾರ್ಜ್. ನನಾಯ ಸಿರಿಯನ್ ಜಾಕೋಬೈಟ್ ಕ್ರಿಶ್ಚಿಯನ್ ಸಮುದಾಯದ ಜೋಸೆಫ್ ಕೇಳಚಂದ್ರ ಚಾಕೋ ಮತ್ತು ಮರಿಯಮ್ಮ ದಂಪತಿ ಪುತ್ರನಾಗಿ 1946ರಂದು ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಆಗಸ್ಟ್ ತಿಂಗಳಲ್ಲಿ ಅವರು ಜನಿಸಿದರು. ಈ ಕುಟುಂಬ 1960ರ ಸುಮಾರಿಗೆ ಕೊಡಗಿಗೆ ಬಂದು ನೆಲೆಸಿತ್ತು.

ಬಾಲ್ಯವನ್ನು ಕೊಡಗಿನಲ್ಲೇ ಕಳೆದ ಜಾರ್ಜ್ 1968ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಗೋಣಿಕೊಪ್ಪಲು ಪಟ್ಟಣದಿಂದ ಆರಂಭಿಸಿದರು. 1969ರಲ್ಲಿ ಗೋಣಿಕೊಪ್ಪಲು ಪಟ್ಟಣದ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದರು. 1971-77ರವರೆಗೆ ಇಲ್ಲಿನ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದರು.

1975-78ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಖಜಾಂಚಿಯಾಗಿ, 1982-85ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು. ತಮ್ಮ 37ನೇ ವಯಸ್ಸಿನಲ್ಲಿ 1983ರ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಭಾರತಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾರ್ಜ್ ಸ್ಪರ್ಧಿಸಿದ್ದರು. ಆದರೆ ಮೊದಲ ಚುನಾವಣೆಯಲ್ಲೇ ಅವರಿಗೆ ಸೋಲು ಎದುರಾಯಿತು. ಜಾರ್ಜ್ ಫರ್ನಾಂಡಿಸ್ ಸಹೋದರ ಜನತಾ ಪಾರ್ಟಿಯ ಮೈಕಲ್ ಫರ್ನಾಂಡಿಸ್ ವಿರುದ್ಧ ಅವರು ಸೋಲು ಕಂಡರು.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊದಲ ಸ್ಪೀಕರ್ ಯು.ಟಿ. ಖಾದರ್

1985ರಲ್ಲಿ ನಡೆದ ಚುನಾವಣೆಯಲ್ಲಿ ಬೆಂಗಳೂರಿನ ಇದೇ ಭಾರತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದರು. 1989-94ರವರೆಗೆ ಮತ್ತೊಂದು ಅವಧಿಗೆ ಭಾರತಿನಗರ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸಿ ಗೆದ್ದರು. ಕಳೆದ ಐದು ದಶಕಗಳ ರಾಜಕೀಯ ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಸಹ ಕೆಜೆ ಜಾರ್ಜ್ ಕಂಡಿದ್ದಾರೆ. ಹಲವು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಎಸ್.ಬಂಗಾರಪ್ಪ ಸರ್ಕಾರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಕೆಜೆ ಜಾರ್ಜ್ ಅವರಿಗಿದೆ.

1994ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಸೇರಿದ್ದ ಜಾರ್ಜ್ ಮತ್ತೊಮ್ಮೆ ಸೋಲು ಕಾಣುವಂತಾಗಿತ್ತು. ಈ ಸೋಲಿನಿಂದ ಶೀಘ್ರವೇ ಸುಧಾರಿಸಿದ್ದ ಜಾರ್ಜ್ ಮತ್ತೆ ಮಾತೃ ಪಕ್ಷಕ್ಕೆ ಹಿಂತಿರುಗಿದ್ದರು. ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡರು. ಅವರ ಕುಟುಂಬಕ್ಕೂ ಹತ್ತಿರವಾಗುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಜಾತಶತ್ರುವಾಗಿ ಬೆಳೆದುನಿಂತಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಿದಾಗ ಕೆ.ಜೆ ಜಾರ್ಜ್ ಅವರಿಗೆ ಮಹತ್ವದ ಗೃಹ ಇಲಾಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ವೇಳೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಗಣಪತಿ ಆತ್ಮಹತ್ಯೆಗೆ ಜಾರ್ಜ್ ಅವರೇ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಅವರ ರಾಜೀನಾಮೆಗೂ ಒತ್ತಾಯಿಸಿದ್ದರು. ಹೀಗಾಗಿ ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಪೊಲೀಸರು ಕೊನೆಗೂ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ನೀಡಿತ್ತು. ಅದೇ ಸರ್ಕಾರದಲ್ಲಿ ನಂತರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2018ರ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಜಾರ್ಜ್ ಅವರಿಗೆ ಪ್ರಸಕ್ತ ಸಂಪುಟದಲ್ಲಿ ಇಂಧನ ಖಾತೆ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...