Homeಕರ್ನಾಟಕನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

- Advertisement -
- Advertisement -

ಯಡಿಯೂರಪ್ಪ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಪ್ರಭಾವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಸೋಲಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಆರ್.ಬಿ.ತಿಮ್ಮಾಪೂರ ಅವರಿಗೆ ಮತ್ತೊಮ್ಮೆ ಮಂತ್ರಿ ಭಾಗ್ಯ ಒಲಿದುಬಂದಿದೆ. ಅಬಕಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿ.ಎಂ ಸಿದ್ದರಾಮಯ್ಯ ಆಪ್ತರಾಗಿರುವ ದಲಿತ ಮುಖಂಡ ತಿಮ್ಮಾಪೂರ ಅವರು, ಸೋತರೂ ಗೆದ್ದರೂ ಛಲ ಬಿಡದಂತೆ ಪಕ್ಷಕ್ಕಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದಾಗ ಇವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಸೋತಾಗಲೂ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಆರ್.ಬಿ ತಿಮ್ಮಾಪೂರ್ ಅವರನ್ನು ಅದೃಷ್ಟವಂತ ರಾಜಕಾರಣಿ ಅಂತಲೇ ಕರೆಯುತ್ತಾರೆ.

ಎಸ್ಸಿ (ಎಡಗೈ) ಸಮುದಾಯದ ಪ್ರಬಲ ನಾಯಕ ಆರ್.ಬಿ. ತಿಮ್ಮಾಪೂರ (ರಾಮಣ್ಣ ಬಾಲಪ್ಪ ತಿಮ್ಮಾಪೂರ) ಅವರು ಮೂಲತಃ ಬಾದಾಮಿ ತಾಲೂಕಿನ ಕಾಡರಕೊಪ್ಪ ಗ್ರಾಮದವರು. ಬಿ.ಎ, ಎಲ್‌ಎಲ್‌ಬಿ ಪದವೀಧರರಾಗಿರುವ ಅವರು ಕಾಲೇಜು ದಿನಗಳಲ್ಲಿ ಕುಸ್ತಿಯ ಆಟದಲ್ಲಿ ಪೈಲ್ವಾನ್ ಎನಿಸಿಕೊಂಡವರು. ಈಗಲೂ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಪಟ್ಟುಗಳನ್ನು ಪ್ರಯೋಗಿಸುತ್ತ, ಸೋತರೂ ಗೆದ್ದರೂ ಛಲದಂಕ ಮಲ್ಲನಂತೆ ಕಣದಲ್ಲಿ ಪೈಪೋಟಿ ನೀಡುತ್ತಲೇ ಬಂದಿದ್ದಾರೆ.

ತಿಮ್ಮಾಪೂರರವರ ರಾಜಕೀಯ ಪಯಣ

1989ರಲ್ಲಿ ಆರ್.ಬಿ ತಿಮ್ಮಾಪೂರ ಅವರು ಮೊದಲ ಬಾರಿಗೆ ಮುಧೋಳ ಮೀಸಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ, ಆಗ ರಾಜ್ಯದಲ್ಲೇ ಅತ್ಯಂತ ಕಿರಿಯ (27ನೇ ವಯಸ್ಸಿಗೆ) ಶಾಸಕರಾದ ಖ್ಯಾತಿ ಪಡೆದವರು. ಒಟ್ಟು ಏಳು ಬಾರಿ ಮುಧೋಳ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ನಾಲ್ಕು ಬಾರಿ ಸೋಲು ಕಂಡಿದ್ದಾರೆ.

ಸ್ಪರ್ಧಿಸಿದ ಪ್ರತಿ ಚುನಾವಣೆಯಲ್ಲೂ ಪ್ರಬಲ ಪೈಪೋಟಿಯನ್ನೇ ಕೊಟ್ಟಿರುವ ತಿಮ್ಮಾಪೂರ ಅವರು, ಕ್ಷೇತ್ರದಲ್ಲೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನಸಂಪರ್ಕದಿಂದ ಯಾವತ್ತೂ ದೂರ ಉಳಿದಿಲ್ಲ. ಇಷ್ಟೊಂದು ಸೋಲುಕಂಡ ಬಳಿಕವೂ ಛಲಬಿಡದೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ ಕಣಕ್ಕಿಳಿದಿದ್ದರು. ತಿಮ್ಮಾಪೂರ ಅವರಿಗೆ ಸತತ ಸೋಲುಗಳಿಂದಾಗಿ ಜನರ ಅನುಕಂಪವೂ ಇದ್ದದ್ದು ಈ ಬಾರಿ ಗೆಲುವಿಗೆ ಸಹಕಾರಿಯಾಗಿದೆ.

ಮುಧೋಳ ಮೀಸಲು ಕ್ಷೇತ್ರದಲ್ಲಿ ತಿಮ್ಮಾಪೂರ ಅವರು ಪ್ರತಿಬಾರಿಯೂ ದಲಿತ ಸಮುದಾಯದ ಮತಗಳನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳುತ್ತಾ ಬಂದಿದ್ದಾರೆ. ಆದರೆ ರೆಡ್ಡಿ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಾವಾಗಲೂ ಹಿಂದೆ ಬಿದ್ದಿದ್ದರು. ಇದಕ್ಕೆ ಮುಖ್ಯ ಕಾರಣ, ಅವರು ಎಂದಿಗೂ ಮತಕ್ಕಾಗಿ ದೊಡ್ಡ ಜಾತಿಗಳ ವ್ಯಕ್ತಿಗಳ ಎದುರು ಕೈಕಟ್ಟಿ ನಿಲ್ಲಲಿಲ್ಲ, ಸ್ವಾಭಿಮಾನದಿಂದಲೇ ಚುನಾವಣೆಗಳನ್ನು ಎದುರಿಸುತ್ತಾ ಬಂದವರು ಎಂದು ಗುರುತಿಸಲಾಗುತ್ತದೆ. ಹಾಗಾಗಿ ದೊಡ್ಡ ಸಮುದಾಯಗಳ ಮತಗಳು ತಮ್ಮ ಎದುರಾಳಿಯ ಪಾಲಾಗುತ್ತಿದ್ದರಿಂದ ನಾಲ್ಕು ಬಾರಿ ಸೋಲು ಕಾಣಬೇಕಾಯಿತು. ಈ ಚುನಾವಣೆಯಲ್ಲಿ ಸಂಘಪರಿವಾರದ ಬೆಂಬಲದಿಂದ ಸ್ಪರ್ಧಿಸಿದ ಪಕ್ಷೇತರ ಅಭ್ಯರ್ಥಿಯು ಬಿಜೆಪಿಯ ಬುಟ್ಟಿಯಲ್ಲಿದ್ದ ಮತಗಳನ್ನು ಬಾಚಿಕೊಂಡಿದ್ದರಿಂದ ತಿಮ್ಮಾಪೂರ ಗೆಲುವು ಸುಲಭವಾಯಿತೆಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

1989ರಲ್ಲಿ ಮೊದಲ ಬಾರಿಗೆ ಮುಧೋಳ ಕ್ಷೇತ್ರದಿಂದ ಆಯ್ಕೆಯಾದ ತಿಮ್ಮಾಪೂರ ಅವರು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

1999ರ ಉಪ ಚುನಾವಣೆಯಲ್ಲಿ ಮರು ಆಯ್ಕೆಯಾಗಿ ಎಪಿಎಂಸಿ ಸಚಿವರಾಗಿ ಕಾರ್ಯನಿರ್ವಹಿಸಿದರು.

2002ರಲ್ಲಿ ಎಸ್.ಎಂ.ಕೃಷ್ಣ ಸಿ.ಎಂ ಆಗಿದ್ದ ಅವಧಿಯಲ್ಲಿ ಯೋಜನೆ, ಸಾಂಖ್ಯಿಕ ಖಾತೆ ಸಚಿವರಾದರು.

2003ರಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಪಕ್ಷ ಯಾವುದೇ ಜವಾಬ್ದಾರಿಯನ್ನು ವಹಿಸಿದರೂ ನಿಷ್ಠೆಯಿಂದ ಪಾಲಿಸಿದ ಹೆಗ್ಗಳಿಕೆ ಅವರದ್ದಾಗಿದೆ.

2013ರಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳರ ವಿರುದ್ಧ ಸೋಲು ಕಂಡರೂ, ಆಗ ಕಾಂಗ್ರೆಸ್ ಪಕ್ಷದ ಮುಖಂಡರು ಪಕ್ಷದಲ್ಲಿ ಇವರ ಹಿರಿತನ ಮತ್ತು ಮಾಡಿದ ಕೆಲಸ ಗುರುತಿಸಿ 2016ರಲ್ಲಿ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕಗೊಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷವಿಟ್ಟ ವಿಶ್ವಾಸದಿಂದ ತಿಮ್ಮಾಪೂರ ಮತ್ತೆ ಸಚಿವ ಸ್ಥಾನ ಪಡೆದರು.

2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವ ಸ್ಥಾನ ಒಲಿದು ಬಂದಿತು. ನಂತರ ಸಕ್ಕರೆ, ಬಂದರು ಹಾಗೂ ಒಳನಾಡು ಮೀನುಗಾರಿಕೆ ಖಾತೆ ದೊರೆಯಿತು.

2023ರ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿ, ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಸೋಲಿಸುವ ಮೂಲಕ ತಿಮ್ಮಾಪೂರ ಶಾಸಕರಾಗಿ ಈಗ ಅಬಕಾರಿ ಮಂತ್ರಿಯೂ ಆಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಸರಕಾರಗಳ ಅವಧಿಯಲ್ಲಿ ಮುಧೋಳ ಕ್ಷೇತ್ರದಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನಿಶ್ಚಿತ ಎನ್ನುವ ವಾಡಿಕೆಯಿದೆ. ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಆರ್.ಬಿ.ತಿಮ್ಮಾಪೂರ ಪ್ರತಿ ಬಾರಿಯೂ ಸಚಿವ ಸ್ಥಾನ ಪಡೆದಿದ್ದಾರೆ. ಇದು ಈ ಬಾರಿಯೂ ಮುಂದುವರಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...