Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

ನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಸಂದರ್ಭ; ಎಂಟನೇ ತರಗತಿಯಷ್ಟೇ ಓದಿದ್ದ ಹಾಗೂ ಖ್ಯಾತ ನ್ಯಾಷನಲ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕರೂ ಆಗಿದ್ದಂತಹ ಉದ್ಯಮಿ ಜಮೀರ್ ಅಹ್ಮದ್ ಖಾನ್ ಎಂಬ ವ್ಯಕ್ತಿಯ ಬದುಕಲ್ಲಿ ಅತಿದೊಡ್ಡ ರಾಜಕೀಯ ತಿರುವು ಪಡೆಯಲಿದೆ ಎಂದು ಹೆಚ್ಚಿನ ಜನಕ್ಕೆ ಗೊತ್ತಿರಲಿಲ್ಲ. ಆದರೆ, ಅದು ಸಾಧ್ಯವಾಗಿತ್ತು.

ಅಸಲಿಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. 2003ರ ಚುನಾವಣೆಯಲ್ಲಿ ಅಂದಿನ ಶಾಸಕ ಆರ್.ವಿ ದೇವರಾಜ್ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಚುನಾವಣೆಯಲ್ಲಿ ಗೆದ್ದಿದ್ದ ಕೃಷ್ಣ ಅವರನ್ನು ಕಾಂಗ್ರೆಸ್ ಹೈಕಮಾಂಡ್ 2005ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಾಮರಾಜಪೇಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ 36ರ ಹರೆಯದ ಜಮೀರ್ ಅಹ್ಮದ್ ಕಣಕ್ಕಿಳಿದಿದ್ದರು. ಅವರು ಅಲ್ಲಿಂದ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಜಮೀರ್ ಚಾಮರಾಜಪೇಟೆ ಕ್ಷೇತ್ರದಿಂದ ಈವರೆಗೆ ಒಟ್ಟು ಐದು ಬಾರಿ ಪುನರಾಯ್ಕೆಯಾಗಿದ್ದಾರೆ.

ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ತಮ್ಮ ರಾಜಕೀಯ ಗುರು ಎಂದು ಹೇಳಿಕೊಳ್ಳುವ ಜಮೀರ್ ಅಹ್ಮದ್ ಆರಂಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಹೀಗಾಗಿ 2006ರ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಇವರಿಗೆ ಹಜ್ ಮತ್ತು ವಕ್ಫ್ ಖಾತೆಯ ಸಚಿವ ಸ್ಥಾನ ನೀಡಲಾಗಿತ್ತು.

2008, 2013ರಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದರು. ಆದರೆ, 2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣ ಜೆಡಿಎಸ್‌ನಿಂದ ಜಮೀರ್ ಅವರನ್ನು ಅಮಾನತು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧ ಸಿಡಿದೆದ್ದಿದ್ದ ಜಮೀರ್ ತಮ್ಮ ಇತರೆ ಬೆಂಬಲಿಗೆ ಶಾಸಕರು ಹಾಗೂ ನಾಯಕರ ಜೊತೆಗೂಡಿ ಸಿದ್ದರಾಮಯ್ಯ ನೇತೃತ್ವದಲ್ಲಿ 2016ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅಂದಿನಿಂದ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

2018ರ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದ ಜಮೀರ್ ಅಹ್ಮದ್, ಕಳೆದ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಕರ್ನಾಟಕದಲ್ಲಿ ಬಹುಮತದ ಸರ್ಕಾರ ರಚಿಸಿದ್ದು, ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜಮೀರ್ ಅಹ್ಮದ್ ಅವರಿಗೆ ನಿರೀಕ್ಷೆಯಂತೆಯೇ ಸಚಿವ ಸ್ಥಾನ ದೊರೆತಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ರಾಜಕಾರಣ ಜೊತೆ ಜೊತೆಗೇ ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡು ಸುದ್ದಿಯಾಗುವುದೂ ಸಹ ಜಮೀರ್ ಅವರಿಗೆ ಮಾಮೂಲಿ. ಈ ಹಿಂದೆಯೂ ಸಹ ಜಮೀರ್ ಇಂಗ್ಲಿಷ್ ಭಾಷೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಕನ್ನಡಪರ ಹೋರಾಟಗಾರರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಕ್ಷಮೆ ಕೋರಿದ್ದ ಅವರು, “ನಾನು ಮೊದಲು ಕನ್ನಡಿಗ ನಂತರವೇ ಮುಸ್ಲಿಂ, ಮುಂದಿನ ಬಾರಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ” ಎಂದು ಮಾತು ನೀಡಿದ್ದರು. ಈಗ ಮತ್ತೊಮ್ಮೆ ಇಂಗ್ಲಿಷ್‌ನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವ ಜಮೀರ್ ಪರವಾಗಿ ಮತ್ತು ವಿರುದ್ಧವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ.

ಜಮೀರ್ ಅಹ್ಮದ್ ಎಷ್ಟೇ ವಿವಾದಗಳಿಗೆ ಈಡಾದರೂ, ಚಾಮರಾಜಪೇಟೆ ಕ್ಷೇತ್ರದ ಮತದಾರರ ಮಟ್ಟಿಗೆ ಮಾತ್ರ ಇವರು ಸಾಕಷ್ಟು ಜನಪ್ರಿಯ ಮತ್ತು ಜನಾನುರಾಗಿ ಎಂದೇ ಹೆಸರುವಾಸಿ. ಅಲ್ಲದೆ, ತಮ್ಮ ವ್ಯಂಗ್ಯಭರಿತ, ಉರ್ದು ಮಿಶ್ರಿತ ವಿಶಿಷ್ಟ ಕನ್ನಡದಲ್ಲಿ ಮಾಡುವ ಭಾಷಣದಿಂದಲೇ ಕರ್ನಾಟಕದಲ್ಲಿ ಚಿರಪರಿಚಿತರು ಮತ್ತು ಮುಸ್ಲಿಂ ಮುಖಂಡರುಗಳ ಪೈಕಿ ಮುಂಚೂಣಿ ಸಾಲಿನಲ್ಲಿ ನಿಲ್ಲುವ ನಾಯಕ.

ಸಿದ್ದರಾಮಯ್ಯ

ಇದರ ನಡುವೆಯೇ 2009ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜಮೀರ್ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪಿ.ಸಿ ಮೋಹನ್ ಅವರ ಎದುರು ಸೋಲು ಅನುಭವಿಸಿದ್ದರು. ಆದರೂ ಸಹ ರಾಜಧಾನಿ ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಭಾರೀ ಪ್ರಾಬಲ್ಯ ಹೊಂದಿದ್ದಾರೆ ಎಂದೇ ಹೇಳಲಾಗುತ್ತದೆ. 2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿರಲಿಲ್ಲ. ಇದರ ಹಿಂದೆ ಜಮೀರ್ ಅಹ್ಮದ್ ಅವರ ತಂತ್ರ ಕಾರಣ ಎಂದು ಹೇಳಲಾಗಿತ್ತು.

ಮತ್ತೊಂದೆಡೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಮೀರ್ ಅಹ್ಮದ್ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ. ಇ.ಡಿ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅವರ ಐಶಾರಾಮಿ ಬಂಗಲೆ ಸಾರ್ವಜನಿಕ ವಲಯದಲ್ಲಿ ಅವರಿಗಿಂತಲೂ ದೊಡ್ಡ ಮಟ್ಟದ ಸದ್ದು ಮಾಡಿತ್ತು ಎಂಬುದು ಉಲ್ಲೇಖಾರ್ಹ.

ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅವರು ಹಲವು ಮುಸ್ಲಿಂ ಸಮುದಾಯದ ಹಿರಿಯ ಶಾಸಕರನ್ನೂ ಹಿಂದಿಕ್ಕಿ ಸಂಪುಟದ ಮೊದಲ ಸಚಿವರ ಪಟ್ಟಿಯಲ್ಲಿಯೇ ಕಾಣಿಸಿಕೊಂಡಿರುವುದು ಕಾಂಗ್ರೆಸ್‌ನ ಒಂದು ಬಣದ ಹುಬ್ಬೇರಿಸಿದೆ ಎಂಬ ಚರ್ಚೆಗಳು ಪ್ರಚಲಿತದಲ್ಲಿವೆ. ಪ್ರಸಕ್ತ ಸಂಪುಟದಲ್ಲಿ ಜಮೀರ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾರ ವ್ಯವಹಾರಗಳ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...