Homeಕರ್ನಾಟಕಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆ, ತಜ್ಞರ ಜತೆ ಚರ್ಚೆ ಬಳಿಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆ, ತಜ್ಞರ ಜತೆ ಚರ್ಚೆ ಬಳಿಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್‌ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.

ಈ ವರ್ಷ ಆಗಸ್ಟ್‌ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯವಿದೆ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ, ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ಹೇಳಿದರು.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು, ”ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿ,. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಚಂದ್ರು ಮಾತನಾಡಿ, ”ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು ಎಂದು ಹೇಳಿದರು. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...