Homeಮುಖಪುಟಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

ಟೆಲಿಕಾಂ ಕುರಿತ ನಮ್ಮ ತೀರ್ಪು ದುರುಪಯೋಗವಾಗುತ್ತಿದೆ : ಕೇಂದ್ರಕ್ಕೆ ಸುಪ್ರೀಂ ಚಾಟಿ

- Advertisement -
- Advertisement -

ಖಾಸಗಿ ಟೆಲಿಕಾಂ ಕಂಪನಿಗಳು ಕಟ್ಟಬೇಕಿರುವ 4 ಲಕ್ಷ ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳಿಂದ ತುಂಬಿಕೊಡಲು ಮುಂದಾಗಿರುವ ದೂರಸಂಪರ್ಕ ಇಲಾಖೆಯ ಕ್ರಮವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದ್ದು, ತನ್ನ ಹಿಂದಿನ ತೀರ್ಪನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಕಿಡಿಕಾರಿದೆ.

4 ಲಕ್ಷ ಕೋಟಿ ರೂಗಳನ್ನು ಆಯಿಲ್ ಇಂಡಿಯಾ, ದೆಹಲಿ ಮೆಟ್ರೋ ರೈಲು ನಿಗಮ ಮತ್ತು ಪವರ್ ಗ್ರಿಡ್ ಕಾರ್ಪೊರೇಶನ್‌ನಂತಹ ಸಾರ್ವಜನಿಕ ವಲಯದ ಘಟಕಗಳಿಂದ ಕೊಡಬೇಕೆಂದು ಸರ್ಕಾರದ ದೂರಸಂಪರ್ಕ ಇಲಾಖೆ ಕೋರಿರುವುದನ್ನು ಉಲ್ಲೇಖಿಸಿದ ಕೋರ್ಟ್ ಇದನ್ನು ಯಾವುದೇ ಕಾರಣಕ್ಕೂ ಅನುಮತಿಸುವುದಿಲ್ಲ ಎಂದು ಹೇಳಿದೆ.

ಸುಪ್ರೀಂನ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಅಬ್ದುಲ್ ನಜೀರ್ ಮತ್ತು ಎಂ.ಆರ್ ಶಾ ಇದ್ದ ತ್ರಿದಸ್ಯ ಪೀಠವನ್ನು ಪ್ರಕರಣವನ್ನು ವಿಚಾರನೆ ನಡೆಸುತ್ತಿದ್ದು, ಈ ಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ತಿರಸ್ಕಾರ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ತನ್ನ ಈ ನಿರ್ಧಾರವನ್ನು ಮೂರು ದಿನಗಳೊಳಗೆ ಮರುಪರಿಶೀಲಿಸುವಂತೆ ಸರ್ಕಾರವನ್ನು ಕೇಳಿದೆ.

ಈ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ವೊಡಾಫೋನ್ ಐಡಿಯಾ ಸೇರಿದಂತೆ ಹಲವಾರು ದೂರಸಂಪರ್ಕ ಸಂಸ್ಥೆಗಳಿಗೆ 20 ವರ್ಷಗಳಲ್ಲಿ 1.4 ಲಕ್ಷ ಕೋಟಿ ರೂ. ಮೌಲ್ಯದ ಬ್ಯಾಕ್-ಶುಲ್ಕವನ್ನು ಪಾವತಿಸಲು ಅನುಮೋದನೆ ಕೋರಿತ್ತು. ಇದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ದೂರಸಂಪರ್ಕ ಇಲಾಖೆಯ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಬೇಲ್‌ ಔಟ್ ಯೋಜನೆಯನ್ನು ಸರ್ಕಾರ ಹೊರತಂದಿದೆ. ಕಂಪೆನಿಗಳಿಗೆ ಒಂದೇ ಸಮಯದಲ್ಲಿ ಮೊತ್ತವನ್ನು ಪಾವತಿಸುವುದು ಕಷ್ಟಕರವಾಗಿರುತ್ತದೆ. ನ್ಯಾಯಾಲಯವು ಆಕ್ಷೇಪಿಸಿದರೆ ಅದು ಟೆಲಿಕಾಂ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ನೆಟ್‌ವರ್ಕ್ ಮೇಲೆ ಪರಿಣಾಮ ಬೀರುತ್ತದೆ ಮತ್ತು ಗ್ರಾಹಕರು ಅಂತಿಮವಾಗಿ ತೊಂದರೆ ಅನುಭವಿಸುತ್ತಾರೆ. ಸಾರ್ವಜನಿಕ ವಲಯದ ಉದ್ಯಮಗಳಿಂದ ಬಾಕಿ ಹಣವನ್ನು ಏಕೆ ಸಂಗ್ರಹಿಸಲಾಗಿದೆ ಎಂಬುದರ ಕುರಿತು ಸರ್ಕಾರ ಅಫಿಡವಿಟ್ ಸಲ್ಲಿಸಲಿದೆ” ಎಂದು ಅವರು ಹೇಳಿದರು.

“ಭವಿಷ್ಯದ 20 ವರ್ಷಗಳನ್ನು ಯಾರು ನೋಡಿದ್ದಾರೆ?” ಎಂದು ಕಟುವಾಗಿ ಪ್ರತಿಕ್ರಿಯಿಸಿದ ನ್ಯಾಯಾಲಯ, ಆ ಬೇಡಿಕೆಯನ್ನು ನಿರಾಕರಿಸಿದೆ.


ಇದನ್ನೂ ಓದಿ: ಕೂಡಲೇ ಹಣ ಪಾವತಿಸಿ : ಟೆಲಿಕಾಂ ಕಂಪನಿಗಳಿಗೆ ಸುಪ್ರೀಂ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...