Homeಮುಖಪುಟಫೀನಿಕ್ಸ್ ಮಾರ್ಕೆಟಿಂಗ್‌ಗೆ 15.6 ಕೋಟಿ ರೂ. ಪಾವತಿಸಲು ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ಗೆ ಕೋರ್ಟ್ ಆದೇಶ

ಫೀನಿಕ್ಸ್ ಮಾರ್ಕೆಟಿಂಗ್‌ಗೆ 15.6 ಕೋಟಿ ರೂ. ಪಾವತಿಸಲು ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ಗೆ ಕೋರ್ಟ್ ಆದೇಶ

- Advertisement -
- Advertisement -

ಬೆಂಗಳೂರಿನ ವಾಣಿಜ್ಯ ನ್ಯಾಯಾಲಯವು ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ (ಯುಬಿಎಲ್) ತನ್ನ ಹಿಂದಿನ ಕ್ಯಾರಿ ಮತ್ತು ಫಾರ್ವರ್ಡ್ (ಸಿ & ಎಫ್) ಏಜೆಂಟ್ ಫೀನಿಕ್ಸ್ ಮಾರ್ಕೆಟಿಂಗ್‌ಗೆ ರೂ. 15.62 ಕೋಟಿ ಪಾವತಿಸುವಂತೆ ನಿರ್ದೇಶಿಸಿದೆ.

ಯುಬಿಎಲ್ ಏಜೆನ್ಸಿ ವಿರುದ್ಧ ಹೂಡಿದ್ದ ರೂ. 8.57 ಕೋಟಿ ವಸೂಲಾತಿ ಮೊಕದ್ದಮೆಯನ್ನು ವಜಾಗೊಳಿಸಿದ ನಂತರ ಈ ಆದೇಶ ನೀಡಿದೆ.

ದೆಹಲಿ ಮತ್ತು ಹರಿಯಾಣ ಪ್ರದೇಶಗಳನ್ನು ಒಳಗೊಂಡ ದೀರ್ಘಕಾಲದ ವಿತರಣಾ ಸಂಬಂಧದಿಂದ ಉದ್ಭವಿಸಿದ ಒಪ್ಪಂದದ ವಿವಾದದಲ್ಲಿ ಏಪ್ರಿಲ್ 24 ರಂದು ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶೆ ಸುಮಂಗಲಾ ಎಸ್ ಬಸವಣ್ಣೂರ್ ತೀರ್ಪು ನೀಡಿದ್ದರು ಎಂದು barandbench.com ವರದಿ ಮಾಡಿದೆ.

ಮಾರುಕಟ್ಟೆಯಿಂದ ಸಂಗ್ರಹಿಸಿದ ಮಾರಾಟದ ಹಣವನ್ನು ಫೀನಿಕ್ಸ್ ರವಾನಿಸಲು ವಿಫಲವಾಗಿದೆ ಮತ್ತು 2008 ಮತ್ತು 2015 ರ ನಡುವೆ ಮಾಡಿಕೊಂಡ “ಡೆಲ್ ಕ್ರೆಡೆರೆ” ಮತ್ತು “ಪ್ಯೂರ್ ಏಜೆಂಟ್” ಒಪ್ಪಂದಗಳ ಅಡಿಯಲ್ಲಿ ಹೊಣೆಗಾರನಾಗಿದೆ ಎಂದು ಯುಬಿಎಲ್ ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ಫೀನಿಕ್ಸ್ ರೂ.15.62 ಕೋಟಿ ಮೊತ್ತದ ಪ್ರತಿವಾದವನ್ನು ಸಲ್ಲಿಸಿತ್ತು. ಇದರಲ್ಲಿ ರೂ.11.35 ಕೋಟಿ ಬಾಕಿ ಕಮಿಷನ್‌, ಮರುಪಾವತಿಗಳು ಮತ್ತು ಮರುಪಾವತಿಸಬಹುದಾದ ಭದ್ರತಾ ಠೇವಣಿಗಳು ಹಾಗೂ ರೂ.4.26 ಕೋಟಿ ಬಡ್ಡಿ ಸೇರಿವೆ. ನ್ಯಾಯಾಲಯವು ಫೀನಿಕ್ಸ್‌ನ ವಾದವನ್ನು ಸಂಪೂರ್ಣವಾಗಿ ಎತ್ತಿಹಿಡಿದಿದೆ.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...