HomeಮುಖಪುಟNDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ,...

NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ!

ಬಿಜೆಪಿ, ಶಿವಸೇನೆ, ಎನ್‌ಸಿಪಿ ಮತ್ತು ಎಲ್‌ಜೆಪಿ ಹೊರತುಪಡಿಸಿ ಉಳಿದ 8 ಪಕ್ಷಗಳು ಕೇವಲ 9 ಲೋಕಸಭಾ ಸ್ಥಾನಗಳನ್ನು ಗೆದ್ದಿವೆ...

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ NDA ಸರ್ಕಾರ ಸೋಲಿಸಲು 26 ವಿರೋಧ ಪಕ್ಷಗಳು ಒಟ್ಟಾಗಿ INDIA ಎಂಬ ನೂತನ ಮೈತ್ರಿಕೂಟ ರಚಿಸಿಕೊಂಡಿವೆ. ಇದರಿಂದ ಎಚ್ಚೆತ್ತುಕೊಂಡಿರುವ ನರೇಂದ್ರ ಮೋದಿಯವರು ತಮ್ಮ NDA ಮೈತ್ರಿಕೂಟಕ್ಕೆ ಹಲವು ಸಣ್ಣ ಪುಟ್ಟ ಪಕ್ಷಗಳನ್ನು ಸೇರಿಸಿಕೊಂಡು ಸಭೆ ನಡೆಸಿದ್ದಾರೆ. ಅಲ್ಲದೇ ತಮ್ಮೊಡನೆ ಒಟ್ಟು 38 ಪಕ್ಷಗಳಿವೆ ಎಂದಿದ್ದಾರೆ. ಆದರೆ NDA ಜೊತೆಗಿರುವ 38 ಪಕ್ಷಗಳಲ್ಲಿ 15 ಪಕ್ಷಗಳು ಕಳೆದ ಬಾರಿ ಒಂದೂ ಲೋಕಸಭಾ ಸ್ಥಾನ ಗೆದ್ದಿಲ್ಲ, 10 ಪಕ್ಷಗಳು ಸ್ಪರ್ಧಿಸಿಯೇ ಇಲ್ಲ! 8 ಪಕ್ಷಗಳು ಮಾತ್ರ ತಲಾ ಒಂದೊಂದು ಲೋಕಸಭಾ ಸ್ಥಾನ ಗೆದ್ದಿವೆ ಅಷ್ಟೇ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇ‍ಷ ವರದಿ ಪ್ರಕಟಿಸಿದೆ.

ಬಿಜೆಪಿ ಹೊರತುಪಡಿಸಿ NDA ಮೈತ್ರಿಕೂಟದಲ್ಲಿ 37 ಪಕ್ಷಗಳಿವೆ. ಅದರಲ್ಲಿ ಹೊಸದಾಗಿ ಸೇರ್ಪಡೆಗೊಂಡ ಎನ್‌ಸಿಪಿ ಅಜಿತ್ ಪವಾರ್ ಬಣ, ಏಕನಾಥ್ ಶಿಂಧೆ ಶಿವಸೇನೆ ಬಣ ಮತ್ತು ಎಲ್‌ಜೆಪಿ ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಈ ಪಕ್ಷಗಳು ಮಾತ್ರವೇ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿವೆ ಬಿಟ್ಟರೆ ಸಭೆಯಲ್ಲಿ ಭಾಗವಹಿಸಿದ್ದ 10 ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಿರಲಿಲ್ಲ. ಉಳಿದ 23 ಪಕ್ಷಗಳು ಸ್ಪರ್ಧಿಸಿದ್ದರೂ ಅವುಗಳಲ್ಲಿ 8 ಪಕ್ಷಗಳು 9 ಸ್ಥಾನಗಳನ್ನಷ್ಟೇ ಗೆದ್ದಿದ್ದವು. 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲಾಗಿರಲಿಲ್ಲ.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವೊಂದೇ 37.69 ಮತ ಪ್ರಮಾಣದೊಂದಿಗೆ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆಗ ಬಿಜೆಪಿ ಮೈತ್ರಿ ಪಕ್ಷವಾಗಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಈಗ ಅದು ಉದ್ಧವ್ ಬಣ ಮತ್ತು ಶಿಂಧೆ ಬಣವಾಗಿ ಎರಡು ಹೋಳಾಗಿದ್ದು ಶಿಂಧೆ ಬಣ ಎನ್‌ಡಿಎ ಜೊತೆಗಿದೆ. ಎಲ್‌ಜೆಪಿ ಪಕ್ಷವು ಎನ್‌ಡಿಎ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ ಬಿಹಾರದಲ್ಲಿ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಆನಂತರ ಅದು ಸಹ ಎರಡು ಹೋಳಾಗಿದೆ. ಎನ್‌ಸಿಪಿ ಪಕ್ಷ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯೊಂದಿಗೆ ಸ್ಪರ್ಧಿಸಿ 5 ಸ್ಥಾನಗಳನ್ನು ಗೆದ್ದಿತ್ತು. ಅದು ಅದು ಎರಡು ಹೋಳಾಗಿದ್ದು ಅಜಿತ್ ಪವಾರ್ ಬಣ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿದೆ. ಈ ಪಕ್ಷಗಳನ್ನು ಬಿಟ್ಟರೆ ಉಳಿದ ಎನ್‌ಡಿಎ ಜೊತೆಗಿರುವ ಪಕ್ಷಗಳ ಸಾಧನೆ ಅಷ್ಟಕಷ್ಟೆ ಎನ್ನುವಂತಿದೆ.

10 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ

ಶಿರೋಮಣಿ ಅಕಾಲಿದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಜನ ಸುರಾಜ್ಯ ಶಕ್ತಿ ಪಕ್ಷ, ಕುಕಿ ಪೀಪಲ್ಸ್ ಅಲೈಯನ್ಸ್, ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಹರಿಯಾಣ ಲೋಕಿತ್ ಪಾರ್ಟಿ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಮತ್ತು ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಪಕ್ಷಗಳು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

8 ಪಕ್ಷಗಳಿಗೆ 9 ಸೀಟು

ಅಪ್ನಾ ದಳ (ಸೋನಿಲಾಲ್), ಎಜೆಎಸ್‌ಯು, ಎಐಎಡಿಎಂಕೆ, ಮಿಜೋ ನ್ಯಾಷನಲ್ ಫ್ರಂಟ್, ನಾಗಾ ಪೀಪಲ್ಸ್ ಫ್ರಂಟ್, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷಗಳು ಸೇರಿ 9 ಸ್ಥಾನಗಳನ್ನು ಗೆದ್ದಿದ್ದವು. ಅಪ್ನಾ ದಳ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದಿ ಬಿಟ್ಟರೆ ಉಳಿದ ಪಕ್ಷಗಳು ತಲಾ ಒಂದೊಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದವು.

Photo Courtesy: Indian express

ಒಂದೂ ಸ್ಥಾನ ಗೆಲ್ಲಲಾದ 15 ಪಕ್ಷಗಳು!

ಸದ್ಯ ಎನ್‌ಡಿಎ ಜೊತೆ ಗುರುತಿಸಿಕೊಂಡಿರುವ 15 ಪಕ್ಷಗಳು ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಅವುಗಳೆಂದರೆ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್, ಅಸೋಮ್ ಗಣ ಪರಿಷತ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ, ಪಟ್ಟಾಲಿ ಮಕ್ಕಳ್ ಕಚ್ಚಿ, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ, ಭಾರತ್ ಧರ್ಮ ಜನಸೇನಾ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ), ಜನಸೇನಾ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಕ್ಷ, ರಾಷ್ಟ್ರೀಯ ಸಮಾಜ ಪಕ್ಷ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ತಮಿಳ್ ಮಾನಿಲಾ ಕಾಂಗ್ರೆಸ್ (ಮೂಪನಾರ್), ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ, (ಲಿಬರಲ್) ಗಳಾಗಿವೆ.

ಇದನ್ನೂ ಓದಿ: ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...