Homeಮುಖಪುಟ‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

‘ಆದಿತ್ಯನಾಥ್‌’ ಬಗ್ಗೆ ವಿಶೇಷ ವರದಿ ಕೇಳಿದ ಗಂಟೆಗಳೊಳಗೆ ಪ್ರಧಾನ ಸಂಪಾದಕರನ್ನು ವಜಾಗೊಳಿಸಿದ ‘ಔಟ್‌ಲುಕ್’

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌‌ ಅವರು ಇತ್ತೀಚೆಗೆ ನೀಡಿದ್ದ ‘ಅಬ್ಬಾ ಜಾನ್’ ಹೇಳಿಕೆಯ ಕುರಿತು ವಿಶೇಷ ವರದಿ ಕೇಳಿದ್ದ ಔಟ್‌ಲುಕ್‌ ನಿಯತಕಾಲಿಕೆಯ ಪ್ರಧಾನ ಸಂಪಾದಕ ರುಬೆನ್ ಬ್ಯಾನರ್ಜಿ ಅವರನ್ನು, ವರದಿ ಕೇಳಿದ ಎರಡು ಗಂಟೆಯ ಒಳಗೆ ‘ಔಟ್‌ಲುಕ್ ಗ್ರೂಪ್‌’ ಅವರನ್ನು ವಜಾಗೊಳಿಸಿದೆ.

ಅವರು, 33 ದಿನಗಳ ರಜೆಯನ್ನು ಮುಗಿಸಿ ಬುಧವಾರಷ್ಟೆ ಸಂಸ್ಥೆಗೆ ಹಿಂತಿರುಗಿದ್ದು, “ಆದಿತ್ಯನಾಥ್ ಮತ್ತು ಅಬ್ಬಾ ಜಾನ್” ಕುರಿತು ವಿಶೇಷ ವರದಿ ಕೇಳಿ ಹಿರಿಯ ಸಂಪಾದಕರಿಗೆ ಸಂದೇಶ ಕಳುಹಿಸಿದ ಒಂದೆರೆಡು ಗಂಟೆಗಳಲ್ಲೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅವರು ಒಂದು ತಿಂಗಳ ರಜೆಯ ಮೇಲೆ ಹೋಗಿದ್ದರ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ವರದಿ ಮಾಡಿದ್ದ ನ್ಯೂಸ್‌ಲಾಂಡ್ರಿ ಸುದ್ದಿ ಸಂಸ್ಥೆ, “ಒಂದು ತಿಂಗಳ ರಜೆಯನ್ನು ಅವರನ್ನು ಕೆಲಸದಿಂದ ವಜಾಗೊಳಿಸಲೆಂದೇ ನೀಡಲಾಗಿದೆ” ಮೂಲಗಳನ್ನು ಉಲ್ಲೇಖಿಸಿ ಹೇಳಿತ್ತು.

ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ಮೇ ತಿಂಗಳ ಔಟ್‌ಲುಕ್‌ ಸಂಚಿಕೆಯಲ್ಲಿ ಒಕ್ಕೂಟ ಸರ್ಕಾರವನ್ನು ಟೀಕಿಸಿ “ಕಾಣೆಯಾಗಿದ್ದಾರೆ”(Missing) ಎಂಬ ವಿಶೇಷ ವರದಿಯೊಂದನ್ನು ಪ್ರಕಟಿಸಿದ್ದಾಗ, ವರದಿಯ ಬಗ್ಗೆ ಔಟ್‌ಲುಕ್ ಗ್ರೂಪ್‌ ಆಡಳಿತ ಆಕ್ಷೇಪ ವ್ಯಕ್ತಪಡಿಸಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜೊತೆಗೆ ದೇಶವನ್ನೇ ತಲ್ಲಣಗೊಳಿಸಿದ್ದ ‘ಪೆಗಾಸಸ್ ಗೂಢಾಚಾರ’ ಕುರಿತು ಕೂಡಾ ವಿಶೇಷ ವರದಿ ಆಗಬಾರದು ಎಂದು ನಿಯತಕಾಲಿಕೆಯ ಸಂಪಾದಕೀಯ ತಂಡಕ್ಕೆ ಸೂಚನೆ ಬಂದಿತ್ತು ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆದರೆ ಸಂಸ್ಥೆಯು ಅವರು ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಅವರನ್ನು ಸೇವೆಯಿಂದ ವರಜಾಗೊಳಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ಆಗಸ್ಟ್ 12 ರಿಂದ ರಜೆಯ ಮೇಲೆ ಹೋಗಿದ್ದ ತನ್ನನ್ನು ಯಾವುದೇ ಸೂಚನೆ ಇಲ್ಲದೆ ಅವರನ್ನು ವಜಾ ಮಾಡಲಾಗಿದೆ ಎಂದು ರುಬೆನ್‌ ಬ್ಯಾನರ್ಜಿ ಆರೋಪಿಸಿದ್ದಾರೆ ಎಂದು ದಿ ಪ್ರಿಂಟ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಸೆಪ್ಟೆಂಬರ್ 12 ರಂದು ನನ್ನ ರಜೆಯನ್ನು ವಿಸ್ತರಿಸಲು ನಾನು ಕೇಳಿದ್ದೆ. ಇದೀಗ ನಾನು ಚೇತರಿಸಿಕೊಂಡು ಇಂದು ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿಕೊಂಡೆ. ಮತ್ತೆ ಸಂಸ್ಥೆಗೆ ಕೆಲಸಕ್ಕಾಗಿ ಹಾಜರಾಗುವುದು ಶಿಸ್ತಿನ ಉಲ್ಲಂಘನೆ ಹೇಗೆ ಆಗುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರುಬೆನ್ ಬ್ಯಾನರ್ಜಿ ಅವರು 2018 ರಲ್ಲಿ ಔಟ್‌ಲುಕ್‌ಗೆ ಸಂಪಾದಕರಾಗಿ ಸೇರಿದ್ದರು. 2019 ರಲ್ಲಿ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು ಮತ್ತು 2020 ರಲ್ಲಿ ಔಟ್‌ಲುಕ್ ಮನಿ ಮತ್ತು ಔಟ್‌ಲುಕ್ ಹಿಂದಿಯ ಸಂಪಾದಕರಾಗಿಯು ನೇಮಕಗೊಂಡಿದ್ದರು. ಇದಾಗಿ ಅವರು ಈ ವರ್ಷವಷ್ಟೇ ಗ್ರೂಪ್‌ನ ಎಲ್ಲಾ ಮಾಧ್ಯಮಗಳಿಗೂ ಪ್ರಧಾನ ಸಂಪಾದಕರಾಗಿ ಬಡ್ತಿ ಪಡೆದಿದ್ದರು.

ಇದನ್ನೂ ಓದಿ: ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...