Homeಚಳವಳಿಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ - ವಿಡಿಯೋ ನೋಡಿ

ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳ ವಿರುದ್ಧ ರಾಜ್ಯಾದ್ಯಂತ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ ಆರಂಭಿಸಿದ್ದಾರೆ. ಇಂದು ಮುಂಜಾನೆ 7 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತರ ಹೋರಾಟಕ್ಕೆ ಕಾರ್ಮಿಕ, ಪ್ರಗತಿಪರ, ಕನ್ನಡಪರ, ಯುವ, ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಧುಮುಕಿವೆ.

ಬೆಂಗಳೂರಿನ ಟೌನ್ ಹಾಲ್ ಎದುರು ಭಾರೀ ಹೋರಾಟ ಆರಂಭವಾಗಿದ್ದು, ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು ಜಮಾವಣೆಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಮುಗಿಲು ಮುಟ್ಟಿವೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೀದಿಯಲ್ಲೇ ಮಲಗಿ, ಉರುಳುಸೇವೆ ಮಾಡುವ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಬಡಗಲಪುರ ನಾಗೇಂದ್ರ, ಸರೋವರ್ ಬೆಂಕಿಕೆರೆ, ಹರೀಶ್ ಕುಮಾರ್ ಬಿ ಮುಂತಾದವರು ನೇತೃತ್ವ ವಹಿಸಿದ್ದಾರೆ.

ಇಂದು ಮುಂಜಾನೆ 4 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ಕರ್ನಾಟಕ ರಣಧೀರ ಪಡೆ ಕಾರ್ಯಕರ್ತರು ಬಸ್‌ಗಳನ್ನು ತಡೆದು ಬಂದ್ ಆರಂಭಿಸಿದರು. 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಸ್‌ನಲ್ಲಿ ಅವರನ್ನು ಕರೆದೊಯ್ಯುತ್ತಿರವಾಗ ಮತ್ತಷ್ಟು ಕನ್ನಡಪರ ಸಂಘಟನೆ ಕಾರ್ಯಕರ್ತರು ಬಂದು ಅದೇ ಬಸ್‌ ತಡೆದು ಪ್ರತಿಭಟನೆ ತೀವ್ರಗೊಳಿಸಿದರು.

ಆರಂಭವಾಯ್ತು ಕರ್ನಾಟಕ ಬಂದ್, ರೈತರ ಗುಡುಗು… ಟೌನ್ ಹಾಲ್ ಬೆಂಗಳೂರು

Posted by Naanu Gauri on Sunday, September 27, 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿ ಸಮೀಪವಿರುವ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಎದುರು ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಂದ್‌ಗೆ ಚಾಲನೆ ನೀಡಿ ಪ್ರತಿಭಟನೆ ದಾಖಲಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ ನಾರಾಯಣಗೌಡ ಪ್ರತಿಭಟನೆಯಲ್ಲಿದ್ದರು.

ಇಂದು ಮುಂಜಾನೆಯೇ ನಾಯಂಡನಹಳ್ಳಿ ಬಳಿ ಪ್ರತಿಭಟನೆ ನಡೆಸಿದ ರೈತರು ಮತ್ತು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಹೋರಾಟ ಹತ್ತಿಕ್ಕುವ ಪೊಲೀಸರ್ ವರ್ತನೆಗೆ ರೈತರು ಕಿಡಿಕಾರಿದ್ದಾರೆ.

ಹೋರಾಟನಿರತ ಕಾರ್ಯಕರ್ತರನ್ನು ಸ್ವಲ್ಪವೂ ಮಾನವೀಯತೆಯಿಲ್ಲದೇ ಥಳಿಸಿದ ಪೋಲೀಸರು..

Posted by Karnataka janashakthi ಕರ್ನಾಟಕ ಜನಶಕ್ತಿ on Sunday, September 27, 2020

ಸಿಂಧನೂರಿನಲ್ಲಿ ಇಂದು ಬೆಳಿಗ್ಗೆಯೇ ಪ್ರತಿಭಟನೆ ಆರಂಭವಾಗಿದ್ದು, ಹೋರಾಟ ತೀವ್ರಗೊಂಡಿದೆ.

ದೇಶಾದ್ಯಂತ ರೈತರು ಪ್ರತಿಭಟಿಸುತ್ತಿರುವುದೇಕೆ? ವಿಡಿಯೋ ನೋಡಿ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...