Homeಕರ್ನಾಟಕಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್‌ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರೆ ಕೊಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸಿಆರ್‌ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...