ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ಬೀದಿಗಿಳಿದ ಖಾಸಗಿ ಶಾಲೆಯ ಸಾವಿರಾರು ಶಿಕ್ಷಕರು, ಸಿಬ್ಬಂದಿಗಳು
PC: TNM

ಶಾಲಾ ಶುಲ್ಕವನ್ನು ಶೇ. 30 ರಷ್ಟು ಕಡಿತಗೊಳಿಸಬೇಕು ಎಂದು ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾವಿರಾರು ಖಾಸಗಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಬೆಂಗಳೂರಿನಲ್ಲಿ ಇಂದು (ಫೆ.23) ಬೃಹತ್ ಪ್ರತಿಭಟನೆ ನಡೆಸಿದರು.

‘ಕರ್ನಾಟಕದ ಖಾಸಗಿ ಅನುದಾನರಹಿತ ಶಾಲಾ ನಿರ್ವಹಣೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಸಮನ್ವಯ ಸಮಿತಿ’ (KPMTCC) ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಖಾಸಗಿ ಶಾಲೆಗಳ ಸಾವಿರಾರು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಮೆರವಣಿಗೆ ನಡೆಸಿದರು.

ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಲಾಗಿದ್ದರೂ, ಶುಲ್ಕ ಕಡಿತದಿಂದ ಶಾಲಾ ಆಡಳಿತವು ತಮ್ಮ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

ಮೆಜೆಸ್ಟಿಕ್‌ನ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಶಿಕ್ಷಕರು ಒಟ್ಟುಗೂಡಿದ ನಂತರ ಸ್ವಾತಂತ್ರ್ಯ ಉದ್ಯಾನವನಕ್ಕೆ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: ‘ನಾಯಕರೇ, ರೈತರನ್ನು ದಾರಿ ತಪ್ಪಿಸುವ ಐಡಿಯಾ ಕೊಡಿ’: ಬಿಜೆಪಿ ಕಾರ್ಯಕರ್ತರ ಆಗ್ರಹ!

“ನಾನು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಬೇಕಾದ ಎಲ್ಲಾ ಕೆಲಸಗಳನ್ನು ಮಾಡುತ್ತಿದ್ದೇನೆ. ವೀಡಿಯೊಗಳನ್ನು ತಯಾರಿಸುವ ಮೂಲಕ ಮನೆಯಿಂದಲೇ ಪಾಠ ಕೇಳುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇವೆ. ಆದರೂ ನಾವು ಕೇವಲ ಅರ್ಧದಷ್ಟು ಸಂಬಳವನ್ನು ಸಂಬಳ ಮಾತ್ರ ಪಡೆಯುತ್ತಿದ್ದೇವೆ. ಇದು ಯಾವ ನ್ಯಾಯ? ಕೆಲವು ಪೋಷಕರು ತಮ್ಮ ಮನೆಗಳಿಗೆ ಬಂದು ವಿದ್ಯಾರ್ಥಿಗಳಿಗೆ ಕಲಿಸುವಂತೆ ವಿನಂತಿಸಿಕೊಂಡಿದ್ದಾರೆ. ನಮಗೂ ಮನೆ-ಮಕ್ಕಳು ಇವೆ. ಸಂಬಳವಿಲ್ಲದೆ ಹೇಗೆ ಕೆಲಸ ಮಾಡುವುದು?” ಎಂದು ಮೈಸೂರಿನ DAV ಪಬ್ಲಿಕ್ ಸ್ಕೂಲ್‌ನ ಶಿಕ್ಷಕಿ ಶ್ರೀಗಲಿಕಾ ಹೇಳಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ಬೆಂಗಳೂರಿನ ನ್ಯೂ ಹಾರಿಝೋನ್ ಪ್ರೌಢ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಬ್ಬ ಶಿಕ್ಷಕಿ ಶ್ವೇತಾ ಮಾತನಾಡಿ, “ಸರ್ಕಾರ ಪ್ರಸ್ತಾಪಿಸಿದ 30% ಶುಲ್ಕ ಕಡಿತವನ್ನು ವಿರೋಧಿಸಿ ನಾವು ಇಲ್ಲಿಗೆ ಬಂದಿದ್ದೇವೆ. ರಾಷ್ಟ್ರದ ಭವಿಷ್ಯಕ್ಕಾಗಿ ಸಾಂಕ್ರಾಮಿಕ ರೋಗದ ಸಮಯದಲ್ಲಿಯೂ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಅನ್ಯಾಯವಾಗಿದೆ” ಎಂದು ಹೇಳಿದ್ದಾರೆ.

ಈ ಕುರಿತು ಈಗಾಗಲೇ ಕೆಲವು ಖಾಸಗಿ ಶಾಲೆಗಳ ವ್ಯವಸ್ಥಾಪಕರು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯೋಗವು ಈ ತಿಂಗಳ ಆರಂಭದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಿ ಶುಲ್ಕ ಕಡಿತವನ್ನು 15% ಗೆ ಸೀಮಿತಗೊಳಿಸಬೇಕೆಂದು ಕೋರಿತ್ತು.

ಜನವರಿ 30 ರಂದು ಸರ್ಕಾರ ಹೊರಡಿಸಿದ ಆದೇಶವು, ಖಾಸಗಿ ಶಾಲೆಗಳು ಬೋಧನಾ ಶುಲ್ಕವನ್ನು 70% ಗಿಂತ ಹೆಚ್ಚು ಸಂಗ್ರಹಿಸಬಾರದು ಎಂದು ನಿರ್ಬಂಧಿಸಿತ್ತು. ಜೊತೆಗೆ ಶಾಲೆಗಳು ಅಭಿವೃದ್ಧಿ ಶುಲ್ಕ, ಗ್ರಂಥಾಲಯ ಶುಲ್ಕ ಮುಂತಾದ ಯಾವುದೇ ಶುಲ್ಕವನ್ನು ಸಂಗ್ರಹಿಸಬಾರದು ಎಂದು ಹೇಳಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here