Homeಕರ್ನಾಟಕ‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ ಎಂದು ಉಪನ್ಯಾಸಕರು ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಶುಕ್ರವಾರ ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶ ಹೊರಡಿಸಿದೆ. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ‘ಅಳಿಯ ಅಲ್ಲ, ಮಗಳ ಗಂಡ’ ಎಂಬಂತಿದ್ದು, ಇದರಿಂದ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರವನ್ನೂ ಮಾಡಿದ್ದರು. ಹೀಗಾಗಿ ಒತ್ತಡಕ್ಕೆ ಸಿಲುಕಿದ್ದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಹೆಚ್ಚಳ ಮಾಡುವುದಾಗಿ ಇಂದು ಘೋಷಿಸಿದೆ.

ಇದನ್ನೂ ಓದಿ:ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಸರ್ಕಾರದ ಆದೇಶದಂತೆ, “ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.”

“5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.”

“ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು” ಎಂದು ಆದೇಶ ತಿಳಿಸುತ್ತದೆ.

ಮುಂದುವರಿದು, “ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು” ಎಂದು ತಿಳಿಸಲಾಗಿದೆ.

“ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು” ಎಂದು ಆದೇಶ ಹೇಳುತ್ತದೆ.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಬಗ್ಗೆ ಸರ್ಕಾರದ ಆದೇಶ | ನಾನುಗೌರಿ.ಕಾಂ by naanugauri on Scribd

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ಅತಿಥಿ ಉಪನ್ಯಾಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು, ಆದರೆ ಸರ್ಕಾರ ಈ ಬಗ್ಗೆ ಯಾವುದೆ ಮಾತು ಆಡಿಲ್ಲ ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ” ಎಂದು ಹೇಳಿದ್ದಾರೆ.

“ಈಗ 14 ಸಾವಿರಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಕಸರು ಇದ್ದಾರೆ. ಅವರಿಗೆಲ್ಲ ವಾರಕ್ಕೆ ಎಂಟು ಗಂಟೆಗಳ ವರ್ಕ್ ಇತ್ತು. ಸರ್ಕಾರದ ಹೊಸ ಆದೇಶದಲ್ಲಿ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರ ಅರ್ಥ ಇನ್ನೊಬ್ಬರ ವರ್ಕ್‌ ಅನ್ನು ಕಿತ್ತು, ಮತ್ತೊಬ್ಬರಿಗೆ ಕೊಡುವುದಾಗಿದೆ” ಎಂದು ಡಾ. ಸಂದೀಪ್ ಹೇಳಿದ್ದಾರೆ.

“ಒಟ್ಟಿನಲ್ಲಿ ಸರ್ಕಾರದ ಹೊಸ ಆದೇಶದಿಂದಾಗಿ, ನಿರುದ್ಯೋಗ ಹೆಚ್ಚಳ ಆಗುತ್ತದೆ. ಮುಖ್ಯವಾಗಿ ಈ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆಯುವಂತಹ ಹುನ್ನಾರ ಕೂಡಾ ಇದೆ. ಈ ಆದೇಶದಿಂದಾಗಿ ಹೊಸದಾಗಿ ನೇಮಕಾತಿ ಆಗಿರುವ ಅತಿಥಿ ಉಪನ್ಯಾಸಕರಿಗೆ ಒಂದಿಷ್ಟೂ ಉಪಯೋಗ ಆಗುವುದಿಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಡಾ. ಸಂದೀಪ್‌ ಹೇಳಿದ್ದಾರೆ.

ಇದನ್ನೂ ಓದಿ:ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...