ಸಾಮಾಜಿಕ ಜಾಲತಾಣದಲ್ಲಿ ಹಿನ್ನಡೆ ಉಂಟಾದ ಹಿನ್ನೆಲೆಯಲ್ಲಿ ಈ ವರ್ಷದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಶೀರ್ಷಿಕೆ ಪ್ರಾಯೋಜಕತ್ವದಿಂದ ವಿವೋ ಹೊರಬಿದ್ದಿದೆ.
ವಿವೋ 2018 ರಲ್ಲಿ ಐದು ವರ್ಷಗಳ ಒಪ್ಪಂದಕ್ಕೆ 2,199 ಕೋಟಿ ರೂ. ಪಾವತಿಸಿತ್ತು. ಎಲ್ಲಾ ಪ್ರಾಯೋಜಕರನ್ನು ಉಳಿಸಿಕೊಳ್ಳಲಾಗುತ್ತಿದೆ ಎಂದು ಬಿಸಿಸಿಐ ಭಾನುವಾರ ಪ್ರಕಟಿಸಿತ್ತು, ಆದರೆ ಲಡಾಖ್‌ನಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವೋ ಹೊರಬಿದ್ದಿದೆ.
2020 ರ ಪಂದ್ಯಾಟವನ್ನು ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ಯುಎಇ ಯಲ್ಲಿ ಆಡಲಾಗುವುದು ಎಂದು ಭಾರತೀಯ ಕ್ರಿಕೆಟ್ ಮಂಡಳಿ ಭಾನುವಾರ ಪ್ರಕಟಿಸಿತ್ತು.
ಐಪಿಎಲ್ ಆಡಳಿತ ಮಂಡಳಿ ಸದಸ್ಯ ಐಪಿಎಲ್ 2020 ಕ್ಕೆ ಎಲ್ಲ ಪ್ರಾಯೋಜಕರನ್ನು ಉಳಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾಗಿ ಪಿಟಿಐ ವರದಿ ಮಾಡಿತ್ತು.
ಐಪಿಎಲ್ 2020 ಯುಎಇಯ ದುಬೈ, ಶಾರ್ಜಾ ಮತ್ತು ಅಬುಧಾಬಿ ಹೀಗೆ ಮೂರು ಸ್ಥಳಗಳಲ್ಲಿ ನಡೆಯಲಿದೆ, ಇದಕ್ಕೆ ಸರ್ಕಾರ ಅನುಮೋದನೆ ನೀಡಿತ್ತು.
“ವಿವೋ ಐಪಿಎಲ್ 2020 ಆವೃತ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ತೀರ್ಮಾನಿಸಲು ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿ (ಐಪಿಎಲ್ ಜಿಸಿ) ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಸೇರಿತು. ಭಾರತದಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಜಿಸಿ ಪಂದ್ಯಾವಳಿಯನ್ನು ಯುಎಇ ಯಲ್ಲಿ ನಡೆಸಲು ನಿರ್ಧರಿಸಿತು. ಇದಕ್ಕಾಗಿ ಭಾರತ ಸರ್ಕಾರದಿಂದ ಅಗತ್ಯವಾದ ಅನುಮತಿಗಳಿಗೆ ಪಡೆಯಲಾಗುವುದು” ಎಂದು ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
“ಐಪಿಎಲ್ 2020 ಸೆಪ್ಟೆಂಬರ್ 19 ರಿಂದ ನಡೆಯಲಿದೆ ಮತ್ತು ಫೈನಲ್ ಪಂದ್ಯವು ನವೆಂಬರ್ 10, 2020 ರಂದು ನಡೆಯಲಿದೆ. 53 ದಿನಗಳ ಪಂದ್ಯಾವಳಿಯಲ್ಲಿ ಮಧ್ಯಾಹ್ನದ ಪಂದ್ಯಗಳು 15:30 IST ರಿಂದ ಪ್ರಾರಂಭವಾಗಲಿದ್ದು, ಸಂಜೆಯ ಪಂದ್ಯಗಳು 19:30 IST ಕ್ಕೆ ಪ್ರಾರಂಭವಾಗುತ್ತವೆ.”
ಓದಿ: VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’


