Homeಕರ್ನಾಟಕರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

ಶಿವರಾಜ್‌ ಕುಮಾರ್ ಸೇರಿದಂತೆ ಅನೇಕ ನಟರು ಮತ್ತು ನಿರ್ದೇಶಕರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯದ ಸಿನಿಮಾ ಥಿಯೇಟರ್‌ಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿರುವ ಸ್ಯಾಂಡಲ್‌ವುಡ್‌ನ ಅನೇಕ ನಾಯಕ ನಟರು ಮತ್ತು ನಿರ್ದೇಶಕರು, ರಾಜ್ಯ ಸರ್ಕಾರದ ನಡೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡಿನ ಸರ್ಕಾರ ಅಲ್ಲಿನ ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಈ ಕೂಗು ಕೇಳಿಬರುತ್ತಿದೆ. ಆದರೆ ಕರ್ನಾಟಕದ ಚಿತ್ರಮಂದಿರಗಳಲ್ಲಿ 50% ಪ್ರೇಕ್ಷಕರಿಗೆ ಅವಕಾಶ ಎಂದು ಸರ್ಕಾರ ಹೇಳಿದೆ. ಇದರ ವಿರುದ್ಧ ಶಿವರಾಜ್‌ ಕುಮಾರ್ ಸೇರಿದಂತೆ ಅನೇಕ ನಾಯಕರು ನಿರ್ದೇಶಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಶಿವರಾಜ್‌ ಕುಮಾರ್ ವೀಡಿಯೋವೊಂದನ್ನು ಹಂಚಿಕೊಂಡಿದ್ದು, “ಎಲ್ಲಾ ಕಡೆ 100% ಪ್ರವೇಶ ನೀಡಲಾಗಿದೆ. ಆದರೆ ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ 50%? ಚಿತ್ರಮಂದಿರಕ್ಕೂ 100% ಪ್ರವೇಶ ನೀಡಬೇಕು. ನಾವೆಲ್ಲರೂ ಚಿತ್ರರಂಗದೊಟ್ಟಿಗೆ ಇದ್ದೇವೆ. ಸರ್ಕಾರದ ನಿರ್ಧಾರ ಬದಲಾಗಲೇ ಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ಇದನ್ನೂ ಓದಿ: ಜಗತ್ತಿನ ಸರ್ವಾಧಿಕರಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಪುನಿತ್ ರಾಜ್‌ಕುಮಾರ್ ಟ್ವೀಟ್ ಮಾಡಿ, “ಖಾಸಗೀ ಕಾರ್ಯಕ್ರಮಗಳು, ತೀರ್ಥಕ್ಷೇತ್ರಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ತಾಣಗಳು ಸೇರಿದಂತೆ ಎಲ್ಲವೂ ಸರಾಗವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಚಿತ್ರಮಂದಿರಗಳು ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್, “ಸಿನಿಮಾ ಅನೇಕರಿಗೆ ಮನರಂಜನೆಯಾಗಿದೆ. ಆದರೆ ಅದಕ್ಕಿಂತ ಹೆಚ್ಚಾಗಿ ಅದು ಹಲವರಿಗೆ ಜೀವನಾಧಾರವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಲೆಮರೆಸಿಕೊಂಡಿರುವ ದೀಪ್ ಸಿಧು: ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ!

ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ, “ಇತರ ಎಲ್ಲ ಸಾರ್ವಜನಿಕ ಸ್ಥಳಗಳು ಜನರ ದೊಂಬಿಯಿಂದ ತುಂಬಿತುಳುಕುತ್ತಿದೆ. ಕರ್ನಾಟಕವು ಮತ್ತೊಮ್ಮೆ ಚಿತ್ರಮಂದಿರವನ್ನು 50% ಗೆ ಸೀಮಿತಗೊಳಿಸಿದೆ. ಯಾಕೆ? ಸಿನೆಮಾ ಕ್ಷೇತ್ರ ರಾಜ್ಯಾದ್ಯಂತ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!” ಎಂದು ಪ್ರಶ್ನಿಸಿದ್ದಾರೆ.

ನಿರ್ದೇಶಕರಾದ ಪ್ರೀತಂ ಗುಬ್ಬಿ ಟ್ವೀಟ್ ಮಾಡಿ, “ಮನರಂಜನೆಗೆ ತಡೆ ಬೇಡ. ಸಂಪೂರ್ಣ ಪ್ರವೇಶಕ್ಕೆ ಅನುಮತಿ ನೀಡಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಕೇಂದ್ರ – ರೈತ ಹೋರಾಟದ ಬಗ್ಗೆ ಸಂಸತ್ತಿನಲ್ಲಿ 15 ಗಂಟೆ…

ನಿರ್ದೇಶಕರಾದ ಮನ್ಸೋರೆ, “ಕಾಲೇಜುಗಳು, ದೇವಸ್ಥಾನಗಳು, ಚರ್ಚ್‌ಗಳು, ಮಸೀದಿಗಳು, ಮಾರುಕಟ್ಟೆಗಳು, ಮಾಲ್‌ಗಳು, ಮದುವೆಗಳು, ಇನ್ನಿತರೆ ಸಮಾರಂಭಗಳು… ಜನರು ಮಾಸ್ಕ್ ಹಾಕಿಕೊಂಡು ಹೊರ ಬರುತ್ತಾರೆ. ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಜನಸಂದಣಿಯನ್ನು ನಿಯಂತ್ರಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...