Homeಮುಖಪುಟಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ...

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ…

- Advertisement -
- Advertisement -

ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದ ಸ್ತಬ್ಧಚಿತ್ರಗಳನ್ನು ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಿಂದ ಕೆರಳಿರುವ ಎರಡೂ ರಾಜ್ಯಗಳ ವಕ್ತಾರರು ಕೇಂದ್ರದ ಈ ದ್ವೇಷದ ವರ್ತನೆ ಸಲ್ಲ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಎನ್‌ಸಿಪಿಯ ನಾಯಕಿ ಸುಪ್ರಿಯಾ ಸುಳೆ ಅವರು ಮರಾಠಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು “ಗಣರಾಜ್ಯೋತ್ಸವವು ದೇಶದ ಹಬ್ಬವಾಗಿದೆ ಮತ್ತು ಕೇಂದ್ರವು ಎಲ್ಲಾ ರಾಜ್ಯಗಳಿಗೆ ಪ್ರಾತಿನಿಧ್ಯ ನೀಡುವ ನಿರೀಕ್ಷೆಯಿತ್ತು. ಆದರೆ ಸರ್ಕಾರವು ಪೂರ್ವಗ್ರಹಪೀಡಿತ ರೀತಿಯಲ್ಲಿ ವರ್ತಿಸುತ್ತಿದೆ, ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಟೀಕಿಸಿದ್ದಾರೆ.

“ಎರಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ನೀವು ವಿವರಿಸಬೇಕು. ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ ಎಂಬುದನ್ನು ಕಂಡುಹಿಡಿಯಬೇಕು. ಮಹಾರಾಷ್ಟ್ರದ ಹಿಂದಿನ ಸರ್ಕಾರವು ಇದಕ್ಕೆ ಕಾರಣವೇ? ಇಲ್ಲದಿರಬಹುದು. ಆದರೆ ಇದನ್ನು ತನಿಖೆ ಮಾಡಬೇಕಾಗಿದೆ” ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್‌ ಮರಾಠಿ ಸುದ್ದಿ ಚಾನೆಲ್ ಟಿವಿ9 ಗೆ ತಿಳಿಸಿದ್ದಾರೆ.

ಹೊಸ ವರ್ಷದ ದಿನದಂದು, ಕೇಂದ್ರವು ಮೆರವಣಿಗೆಯಲ್ಲಿ ಭಾಗವಹಿಸುವ ರಾಜ್ಯಗಳು ಮತ್ತು ಇಲಾಖೆಗಳ ಪಟ್ಟಿಯನ್ನು ಪ್ರಕಟಿಸಿತ್ತು. ಇದು ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಮೆರವಣಿಗೆಯಲ್ಲಿ 32 ರಾಜ್ಯಗಳಲ್ಲಿ 16 ರಾಜ್ಯಗಳು ಭಾಗವಹಿಸಲಿವೆ ಎಂದು ಘೋಷಿಸಿದ ಸರ್ಕಾರ, “ಸಮಯದ ನಿರ್ಬಂಧ” ದಿಂದಾಗಿ ಈ ಮಿತಿಯನ್ನು ವಿಧಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರದ ಈ ತಾರತಮ್ಯದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ನಡೆದ ಘಟನೆಗಳು ಕಾರಣ. ಶಿವಸೇನೆಯು ಬಿಜೆಪಿಯೊಂದಿಗಿನ ಸಖ್ಯ ತೊರೆದು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಸರ್ಕಾರ ರಚಿಸಿದುದ್ದೆ ಇದಕ್ಕೆ ಕಾರಣ. ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಎನ್‌ಸಿಪಿ ಮತ್ತು ಶಿವಸೇನೆಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಮತ್ತು  ಬಿಜೆಪಿಯ ನಡುವೆ ಸಂಘರ್ಷ ಮೂರು ವರ್ಷಗಳಿಂದಲೂ ನಡೆಯುತ್ತಿದೆ. ಇತ್ತೀಚೆಗೆ ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೊಳಿಸಿದಾಗಿನಿಂದ ಅದು ಮತ್ತಷ್ಟು ಹೆಚ್ಚಾಗಿದೆ.

“ಗಣರಾಜ್ಯೋತ್ಸವದ ಮೆರವಣಿಗೆಗಾಗಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ತಿರಸ್ಕರಿಸುವುದು ತಾರತಮ್ಯವಾಗಿದೆ. ಪಶ್ಚಿಮ ಬಂಗಾಳವು ಕೇಂದ್ರದ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಮತ್ತು ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಯೋಜನೆಗಳನ್ನು ವಿರೋಧಿಸುತ್ತಿದೆ” ಹಾಗಾಗಿ ಮೋದಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತಾ ರಾಯ್ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...