Homeಅಂತರಾಷ್ಟ್ರೀಯರಾಜಧಾನಿ ಕೈವ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ದೇಹಗಳು ಪತ್ತೆ: ಉಕ್ರೇನ್

ರಾಜಧಾನಿ ಕೈವ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ದೇಹಗಳು ಪತ್ತೆ: ಉಕ್ರೇನ್

- Advertisement -
- Advertisement -

ಉಕ್ರೇನ್‌ ರಾಜಧಾನಿ ಕೈವ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಇದುವರೆಗೂ 1,222 ಶವಗಳು ಪತ್ತೆಯಾಗಿವೆ ಎಂದು ದೇಶದ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನ ಸಾವುನೋವುಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ.

ಸಾವಿರಾರು ಯುದ್ಧ ಅಪರಾಧಗಳಿಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ರಷ್ಯಾದ ಪ್ರಮುಖ 500 ಅಧಿಕಾರಿಗಳ ವಿರುದ್ದದ ಅಪರಾಧವನ್ನು ದೇಶವು ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಿಗ್ಗೆ ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಈಶಾನ್ಯ ಖಾರ್ಕಿವ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಒಲೆಗ್ ಸಿನೆಗೌಬೊವ್ ಹೇಳಿದ್ದಾರೆ. ಅಧಿಕಾರಿಗಳು ಪ್ರಕಾರ, ನಗರದ ಆಗ್ನೇಯ ಭಾಗದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಒಂದು ಮಗು ಸೇರಿದಂತೆ 10 ನಾಗರಿಕರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಶ್ಯಾ-ಉಕ್ರೇನ್ ಯುದ್ದ; ಬಾರತದ ಮೆಡಿಕಲ್ ಶಿಕ್ಶಣ ವ್ಯವಸ್ತೆಯ ಕತೆ-ವ್ಯತೆ

“ಯುದ್ದವನ್ನು ಗೆಲ್ಲಲ್ಲು ಸಾಧ್ಯವಿರದ ಕಾರಣಕ್ಕೆ ರಷ್ಯಾ ಸೈನ್ಯವು ನಾಗರಿಕರ ಮೇಲೆ ಯುದ್ಧವನ್ನು ಮುಂದುವರೆಸಿದೆ” ಎಂದು ಸಿನೆಗೌಬೊವ್ ಟೆಲಿಗ್ರಾಮ್‌ನಲ್ಲಿ ಹೇಳಿದ್ದಾರೆ.

ಒಂದು ಮಿಲಿಯನ್ ನಿವಾಸಿಗಳಿರುವ ದೊಡ್ಡ ಕೈಗಾರಿಕಾ ನಗರವಾದ ಡ್ನಿಪ್ರೊದಲ್ಲಿ, ರಷ್ಯಾದ ಕ್ಷಿಪಣಿಗಳು ಸ್ಥಳೀಯ ವಿಮಾನ ನಿಲ್ದಾಣವನ್ನು ನಾಶಪಡಿಸಿತು, ಇದು ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಕಾರಣವಾಯಿತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯು ಮಾರ್ಚ್ 15 ರಂದು ನಡೆದಿತ್ತು.

ಅಧ್ಯಕ್ಷ ಝೆಲೆನ್ಸ್ಕಿ ಮತ್ತೊಮ್ಮೆ ನಾಗರಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ನಡೆದ ಮಾತುಕತೆಯ ನಂತರ, “ಯುದ್ಧಾಪರಾಧಗಳ ಎಲ್ಲಾ ಅಪರಾಧಿಗಳನ್ನು ಗುರುತಿಸಬೇಕು ಮತ್ತು ಶಿಕ್ಷಿಸಬೇಕು ಎಂದು ಒಪ್ಪಿಕೊಂಡರು” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು,  ಶಾಂತಿಗಾಗಿ ದಾರಿ ಮಾಡಿಕೊಡಲು ಈಸ್ಟರ್ ಕದನ ವಿರಾಮಕ್ಕೆ ಕರೆ ನೀಡಿದ್ದು, ಯುದ್ಧವನ್ನು ಖಂಡಿಸಿದ್ದಾರೆ.

ಡೊನೆಟ್ಸ್ಕ್ ಪ್ರದೇಶದ ಗವರ್ನರ್ ಪಾವ್ಲೊ ಕಿರಿಲೆಂಕೊ ಅವರು ನೀಡಿದ ಪರಿಷ್ಕೃತ ಲೆಕ್ಕಾಚಾರದ ಪ್ರಕಾರ, ಉಕ್ರೇನ್‌ನ ಪೂರ್ವದಲ್ಲಿ ಸಾವಿನ ಸಂಖ್ಯೆಯು ಏರಿದ್ದು, ಅಲ್ಲಿ ಶುಕ್ರವಾರ ನಡೆದ ಕ್ಷಿಪಣಿ ದಾಳಿಯಲ್ಲಿ ಕ್ರಾಮಾಟೋರ್ಸ್ಕ್ ನಗರದ ರೈಲ್ವೆ ನಿಲ್ದಾಣದಲ್ಲಿದ್ದ 57 ಜನರು ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...