Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ ಹೆಚ್ಚು...

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ ಹೆಚ್ಚು ನಾಗರಿಕರು

- Advertisement -
- Advertisement -

ರಾಜಸ್ಥಾನದ ಬನ್ಸ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ 2,200ಕ್ಕೂ ಹೆಚ್ಚು ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದರೆ ಚುನಾವಣಾ ಆಯೋಗ ಈವರೆಗೆ ಪ್ರಧಾನಿ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದೆ ಮೌನವನ್ನು ಮುಂದುವರಿಸಿದೆ.

ಮೋದಿಯ ದ್ವೇಷ ಪೂರಿತ ಹೇಳಿಕೆಯು ಭಾರತದ ಮುಸ್ಲಿಮರ ಮೇಲಿನ ಅಪಾಯಕಾರಿ ಮತ್ತು ನೇರ ದಾಳಿ ಎಂದು ಕರೆದ ನಾಗರಿಕರ ಗುಂಪು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ಹೇಳಿದೆ. ಇದು ಸಂವಿಧಾನವನ್ನು ಗೌರವಿಸುವ ಲಕ್ಷಾಂತರ ನಾಗರಿಕರ ಭಾವನೆಗಳಿಗೆ ಘಾಸಿಗೊಳಿಸಿದೆ ಎಂದು ಚುನಾವಣಾ ಆಯೋಗಕ್ಕೆ ಹೇಳಲಾಗಿದೆ.

ರಾಜಸ್ಥಾನದ ಬನ್ಸ್ವಾರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು.

ಈ ಬಗ್ಗೆ ಚುನಾವಣಾ ಆಯೋಗದ ಗಮನವನ್ನು ಸೆಳೆದ ನಾಗರಿಕರ ಗುಂಪು, ಮತಗಳನ್ನು ಹುಡುಕುವ ಪ್ರಯತ್ನದಲ್ಲಿ ಮೋದಿಯವರ ಭಾಷೆ ವಿಶ್ವದಲ್ಲಿ ಪ್ರಜಾಪ್ರಭುತ್ವದ ತಾಯಿ ಎಂದು ಕರೆಯಲ್ಪಡುವ ಭಾರತದ ಘನತೆಗೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಇಂತಹ ದ್ವೇಷ ಭಾಷಣದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗದ ವಿಫಲತೆಯು ಅದರ ವಿಶ್ವಾಸಾರ್ಹತೆ ಮತ್ತು ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದಲ್ಲದೆ ಕಮ್ಯುನಿಸ್ಟ್ ಫಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮೋದಿ ಭಾಷಣದ ವಿರುದ್ಧ ದೆಹಲಿಯ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಎಡಪಕ್ಷಗಳು ಈ ಹಿಂದೆ ತಮ್ಮ ದೂರು ದಾಖಲಿಸಲು ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ದೂರು ಸ್ವೀಕರಿಸಲು ನಿರಾಕರಿಸಿದ ಕಾರಣ ದೂರನ್ನು ದೆಹಲಿ ಪೊಲೀಸ್‌ ಆಯುಕ್ತರಿಗೆ ನೀಡಲಾಗಿದೆ.

21.04.2024ರಂದು ರಾಜಸ್ಥಾನದ ಭನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿ ಮಾಡಿದ ಭಾಷಣದಲ್ಲಿ, ಉದ್ದೇಶಪೂರ್ವಕವಾಗಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಲಾಗಿದೆ. ಪ್ರಧಾನಿ ಮಾಡಿದಂತೆ ದ್ವೇಷ ಭಾಷಣದ ಮೂಲಕ ಮತ ಯಾಚನೆ ಮಾಡುವುದು ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ಸಿಪಿಐ (ಎಂ) ತನ್ನ ಪತ್ರದಲ್ಲಿ ತಿಳಿಸಿತ್ತು.

ಕಾಂಗ್ರೆಸ್‌ ಪಕ್ಷದ ‘ಸಂಪತ್ತು ಮರು ಹಂಚಿಕೆ’ ಭರವಸೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಂ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷ ಕೂಡ ದೂರು ನೀಡಿತ್ತು.

ಇದನ್ನು ಓದಿ: ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...