Homeಮುಖಪುಟಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಚಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವು: ಕೇಂದ್ರ ಸರ್ಕಾರ

ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಚಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವು: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ 2018 ರಿಂದ 2023ರ ನಡುವೆ ಸೆಪ್ಟಿಕ್ ಟ್ಯಾಂಕ್ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವಾಗ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದೆ.

ದೇಶದಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಸ್ವಚ್ಚತೆ ವೇಳೆ ಮೃತಪಟ್ಟವರ ಮಾಹಿತಿ ಕೋರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅರೂಪಾ ಪೊದ್ದಾರ್ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠವಾಳೆ ಲಿಖಿತ ಉತ್ತರ ನೀಡಿದ್ದಾರೆ. ಸಚಿವರು ನೀಡಿದ ಅಂಕಿ ಅಂಶಗಳ ಪ್ರಕಾರ, ಸೆಪ್ಟಿಕ್ ಟ್ಯಾಂಕ್ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವಾಗ 2018 ರಲ್ಲಿ 76, 2019 ರಲ್ಲಿ 133, 2020 ರಲ್ಲಿ 35, 2021 ರಲ್ಲಿ 66, 2022 ರಲ್ಲಿ 84 ಮತ್ತು 2023 ರಲ್ಲಿ 49 ಸಾವುಗಳು ಸಂಭವಿಸಿವೆ.

“ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕೆಲಸ ನಿಷೇಧ ಮತ್ತು ಕಾರ್ಮಿಕರ ಪುನರ್ವಸತಿ ಕಾಯಿದೆ, 2013 ರ ಪ್ರಕಾರ, ಮ್ಯಾನುಯಲ್ ಸ್ಕ್ಯಾವೆಂಜಿಂಗ್ ದೇಶದಲ್ಲಿ ನಿಷೇಧಿತ ಚಟುವಟಿಕೆಯಾಗಿದೆ. 29 ನವೆಂಬರ್‌ 2023 ರಂತೆ, ದೇಶದ 766 ಜಿಲ್ಲೆಗಳ ಪೈಕಿ 714 ಜಿಲ್ಲೆಗಳು ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಮುಕ್ತವಾಗಿದೆ” ಎಂದು ಸಚಿವ ಅಠವಾಳೆ ತಿಳಿಸಿದ್ದಾರೆ.

ಅಂಕಿ ಅಂಶಗಳ ಪ್ರಕಾರ, 2023ರಲ್ಲಿ ಸಂಭವಿಸಿದ 49 ಸಾವಿನ ಪ್ರಕರಣಗಳಲ್ಲಿ, ಗರಿಷ್ಠ 10 ರಾಜಸ್ಥಾನದಿಂದ ವರದಿಯಾಗಿದೆ. ನಂತರ ಗುಜರಾತ್‌ನಲ್ಲಿ ಒಂಬತ್ತು, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ ಏಳು, ಪಶ್ಚಿಮ ಬಂಗಾಳದಲ್ಲಿ ಮೂರು, ಬಿಹಾರ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ತಲಾ ಎರಡು, ಪಂಜಾಬ್ ಮತ್ತು ಜಾರ್ಖಂಡ್‌ನಲ್ಲಿ ತಲಾ ಒಂದು ಪ್ರಕರಣ ಸಂಭವಿಸಿದೆ.

ಇದನ್ನೂ ಓದಿ : ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ 10 ಬಿಜೆಪಿ ಸಂಸದರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...