Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 52, 30, 126 ಹೆಸರುಗಳನ್ನು ಕೈ ಬಿಡಲಾಗಿದೆ. ಈ ಮತದಾರರ ಪೈಕಿ ಹಲವರು ಸಾವನ್ನಪ್ಪಿದ್ದಾರೆ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ ಹಲವರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗ, “ಪ್ರಾಥಮಿಕ ಪರಿಷ್ಕರಣೆ ಪ್ರಕ್ರಿಯೆ ವೇಳೆ 18.66 ಲಕ್ಷ ಮತದಾರರು ಮೃತಪಟ್ಟಿರುವುದು, 26.01 ಲಕ್ಷ ಮತದಾರರು ಶಾಶ್ವತವಾಗಿ ಕ್ಷೇತ್ರಗಳನ್ನು ಬದಲಾಯಿಸಿರುವುದು ಮತ್ತು 7.5 ಲಕ್ಷ ಮತದಾರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದೆ.

ಇದಲ್ಲದೆ, 11,484 ಮತದಾರರನ್ನು ಪತ್ತೆ ಹಚ್ಚಲಾಗದವರು ಎಂದು ಗುರುತಿಸಲಾಗಿದೆ. ಇದು ಬಿಹಾರದ ಒಟ್ಟು ಮತದಾರ ಪೈಕಿ ಶೇಕಡ 6.62ರಷ್ಟು ಎಂದು ಚುನಾವಣಾ ಆಯೋಗ ಹೇಳಿದೆ.

ಜೂನ್ 24ರ ಹೊತ್ತಿಗೆ ಬಿಹಾರದಲ್ಲಿ ಒಟ್ಟು 7.89 ಕೋಟಿ ನೋಂದಾಯಿತ ಮತದಾರರಿದ್ದರು. ಪ್ರಸ್ತುತ 7.16 ಕೋಟಿ (ಶೇ. 90.67) ಮತದಾರರು ಗಣತಿ ನಮೂನೆಗಳನ್ನು (ಇಎಫ್) ಸಲ್ಲಿಸಿದ್ದಾರೆ. ಈ ಪೈಕಿ 7.13 ಕೋಟಿ (ಶೇ. 90.37) ಮತದಾರರ ನಮೂನೆಗಳು ಡಿಜಿಟಲೀಕರಣಗೊಂಡಿವೆ ಎಂದು ಆಯೋಗ ಮಾಹಿತಿ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗಾಗಿ ಸುಮಾರು 1 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು), 4 ಲಕ್ಷ ಸ್ವಯಂಸೇವಕರು ಮತ್ತು 12 ಪ್ರಮುಖ ರಾಜಕೀಯ ಪಕ್ಷಗಳಿಂದ ನಾಮನಿರ್ದೇಶನಗೊಂಡ 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳನ್ನು (ಬಿಎಲ್‌ಎಗಳು) ಬಳಸಿಕೊಳ್ಳಲಾಗಿದೆ. ಈ ತಂಡಗಳಿಗೆ ಗಣತಿ ನಮೂನೆಗಳು ಅಥವಾ ಇಎಫ್‌ಗಳನ್ನು ಸಲ್ಲಿಸದ ಅಥವಾ ಕ್ಷೇತ್ರ ಪರಿಶೀಲನೆಯ ಸಮಯದಲ್ಲಿ ಕಾಣೆಯಾದ ಮತದಾರರನ್ನು ತಲುಪುವ ಕಾರ್ಯವನ್ನು ವಹಿಸಲಾಗಿತ್ತು ಎಂದಿದೆ.

ಇಲ್ಲಿಯವರೆಗೆ, 7.68 ಕೋಟಿ (ಶೇ. 97.30) ಮತದಾರರು ಗಣತಿ ನಮೂನೆ ಸಲ್ಲಿಕೆ ಅಥವಾ ಆನ್-ಗ್ರೌಂಡ್ ಪರಿಶೀಲನೆಯ ಮೂಲಕ ಮತ ಚಲಾಯಿಸಿದ್ದಾರೆ. ಉಳಿದ ಸುಮಾರು 21.35 ಲಕ್ಷ (ಶೇ. 2.70) ಮತದಾರರನ್ನು ಇನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗಿಲ್ಲ, ಅವರ ಇಎಫ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಆಯೋಗ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪಟ್ಟಿಯಿಂದ ಕೈ ಬಿಡಲಾದ 52.30 ಲಕ್ಷ ಮತದಾರರ ವಿವರಗಳನ್ನು ರಾಜ್ಯದ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಸೇರ್ಪಡೆ, ಅಳಿಸುವಿಕೆ ಅಥವಾ ತಿದ್ದುಪಡಿಗಳ ಕುರಿತು ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು ಎಂದಿದೆ.

ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...