Homeಮುಖಪುಟನ್ಯಾಯಾಂಗದ ಸಮಗ್ರತೆಗೆ ಧಕ್ಕೆ: 600ಕ್ಕೂ ಹೆಚ್ಚು ವಕೀಲರಿಂದ ಸಿಜೆಐಗೆ ಪತ್ರ

ನ್ಯಾಯಾಂಗದ ಸಮಗ್ರತೆಗೆ ಧಕ್ಕೆ: 600ಕ್ಕೂ ಹೆಚ್ಚು ವಕೀಲರಿಂದ ಸಿಜೆಐಗೆ ಪತ್ರ

- Advertisement -
- Advertisement -

ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿ  600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಪಟ್ಟಭದ್ರ ಹಿತಾಸಕ್ತಿಗಳನ್ನು ಹೊಂದಿರುವ ಗುಂಪು ನ್ಯಾಯಾಂಗದ ಮೇಲೆ ಒತ್ತಡ ಹೇರಲು, ನ್ಯಾಯಾಂಗ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಮತ್ತು ಕ್ಷುಲ್ಲಕ ತರ್ಕದ ಆಧಾರದ ಮೇಲೆ ನ್ಯಾಯಾಲಯಗಳನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.

ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ ದೇಶದ ವಿವಿಧ ಭಾಗಗಳ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು ನ್ಯಾಯಾಂಗದ ಸಮಗ್ರತೆಗೆ ಧಕ್ಕೆಯುಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದಲ್ಲದ ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವಂತಹ ಗುಂಪು ನ್ಯಾಯಾಂಗ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರುವುದು, ನ್ಯಾಯಾಲಯದ ತೀರ್ಪುಗಳ ಮೇಲೆ ಪ್ರಭಾವ ಬೀರಲು ಮತ್ತು ಆಧಾರರಹಿತ ಆರೋಪಗಳ ಮೂಲಕ ನ್ಯಾಯಾಂಗದ ಖ್ಯಾತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಕೀಲರು ಖಂಡಿಸಿದ್ದಾರೆ.

ಪತ್ರದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಜಕೀಯ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಈ ತಂತ್ರಗಳು ವಿಶೇಷವಾಗಿ ಸ್ಪಷ್ಟವಾಗಿ ಕಂಡುಬರುತ್ತವೆ, ಈ ಪ್ರಕರಣಗಳಲ್ಲಿ ನ್ಯಾಯಾಂಗವನ್ನು ಅಪಖ್ಯಾತಿ ಮಾಡುವ ಪ್ರಯತ್ನಗಳು ಹೆಚ್ಚು ಸ್ಪಷ್ಟವಾಗಿ ಕಂಡುಬರುತ್ತವೆ. ನ್ಯಾಯಾಲಯಗಳ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ನಿರೂಪಣೆಗಳನ್ನು ಮಾಡಲಾಗುತ್ತದೆ. ಇಂತಹ ನಿರೂಪಣೆಗಳು ನ್ಯಾಯಾಂಗದ ಫಲಿತಾಂಶಗಳ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಉದ್ದೇಶವನ್ನು ಹೊಂದಿವೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

ಅವರು ನಮ್ಮ ನ್ಯಾಯಾಲಯಗಳನ್ನು ಕಾನೂನಿನ ನಿಯಮವಿಲ್ಲದ ದೇಶಗಳಿಗೆ ಹೋಲಿಸುವ ಮಟ್ಟಕ್ಕೆ ಇಳಿದಿದ್ದಾರೆ. ಇವು ಕೇವಲ ಟೀಕೆಗಳಲ್ಲ, ಅವು ನಮ್ಮ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಹಾಳುಮಾಡಲು ಮತ್ತು ನಮ್ಮ ಕಾನೂನುಗಳ ನ್ಯಾಯೋಚಿತ ಅನ್ವಯಕ್ಕೆ ಬೆದರಿಕೆಯನ್ನುಂಟುಮಾಡುವ ನೇರ ದಾಳಿಗಳಾಗಿವೆ ಎಂದು ಹೇಳಿದ್ದಾರೆ.

ರಾಜಕಾರಣಿಗಳು ತಮ್ಮ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾನೂನು ವಿಷಯಗಳ ಮೇಲೆ ನಿಲುವುಗಳನ್ನು ಬದಲಾಯಿಸುವ, ಆ ಮೂಲಕ ಕಾನೂನು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಹಾಳು ಮಾಡುವ ರಾಜಕೀಯ ವಿದ್ಯಮಾನದ ಬಗ್ಗೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ರಾಜಕಾರಣಿಗಳು ಯಾರನ್ನಾದರೂ ಭ್ರಷ್ಟಾಚಾರದ ಆರೋಪ ಮಾಡಿ ನಂತರ ನ್ಯಾಯಾಲಯದಲ್ಲಿ ಅವರನ್ನು ಸಮರ್ಥಿಸಿಕೊಳ್ಳುವುದನ್ನು ನೋಡುವುದು ವಿಚಿತ್ರವಾಗಿದೆ. ನ್ಯಾಯಾಲಯದ ತೀರ್ಪು ಅವರು ನಿರೀಕ್ಷಿಸಿದಂತೆ ಹೊರ ಬರದಿದ್ದರೆ ಅವರು ನ್ಯಾಯಾಲಯದ ಒಳಗೆ ಮತ್ತು ಮಾಧ್ಯಮಗಳ ಮೂಲಕ ತ್ವರಿತವಾಗಿ ನ್ಯಾಯಾಲಯಗಳನ್ನು ಟೀಕಿಸುತ್ತಾರೆ. ಈ ದ್ವಿಮುಖ ನಡವಳಿಕೆಯು ನಮ್ಮ ಕಾನೂನು ವ್ಯವಸ್ಥೆಯ ಬಗ್ಗೆ ಸಾಮಾನ್ಯ ವ್ಯಕ್ತಿಗೆ ಇರಬೇಕಾದ ಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಕೆಲವರು ತಮ್ಮ ಪ್ರಕರಣಗಳಲ್ಲಿ ನ್ಯಾಯಾಧೀಶರು ಯಾರೆಂಬುದರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಮತ್ತು ನಿರ್ದಿಷ್ಟ ರೀತಿಯಲ್ಲಿ ತೀರ್ಪು ನೀಡಲು ನ್ಯಾಯಾಧೀಶರ ಮೇಲೆ ಒತ್ತಡ ಹೇರಲು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಗಳನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ರಾಷ್ಟ್ರವು ಚುನಾವಣೆಗೆ ಹೋಗಲು ಸಿದ್ಧವಾಗಿದೆ.  ಬಾಹ್ಯ ಒತ್ತಡಗಳಿಂದ ನ್ಯಾಯಾಂಗವನ್ನು ರಕ್ಷಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಕೀಲರು ಸಿಜೆಐಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಇದನ್ನು ಓದಿ: ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...