Homeಮುಖಪುಟ700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್...

700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಯನ್ನು ದೆಹಲಿ ಗಡಿಗಳಲ್ಲಿ ರೈತ ಹೋರಾಟ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ (SKM) ಸ್ವಾಗತಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, ’ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮೋದಿ ಸರ್ಕಾರದ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಸ್ವಾಗತಿಸುತ್ತದೆ. ಸಂಸತ್ತಿನ ಕಾರ್ಯವಿಧಾನಗಳ ಮೂಲಕ ಕಾನೂನುಗಳನ್ನು ಹಿಂಪಡೆಯುವ ಘೋಷಣೆಗಾಗಿ ಕಾಯುತ್ತೇವೆ. ಇದು ನಡೆದರೆ ಭಾರತದಲ್ಲಿ ಒಂದು ವರ್ಷದ ರೈತರ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಂತಾಗುತ್ತದೆ’ ಎಂದು ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 2020 ರಲ್ಲಿ ಸುಗ್ರೀವಾಜ್ಞೆಗಳಾಗಿ ಜಾರಿಗೆ ತಂದಿದ್ದ ರೈತ ವಿರೋಧಿ, ಕಾರ್ಪೊರೇಟ್ ಪರವಾದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭಾರತ ಸರ್ಕಾರದ ನಿರ್ಧಾರವನ್ನು ಗುರುನಾನಕ್ ಜಯಂತಿ ದಿನದಂದು ಘೋಷಿಸಿದ್ದಾರೆ. ‘ಈ ಹೋರಾಟದಲ್ಲಿ ಸುಮಾರು 700ಕ್ಕು ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದ ಕೊಲೆಗಳು ಸೇರಿದಂತೆ ಈ ತಪ್ಪಿಸಬಹುದಾಗಿದ್ದ ಸಾವುಗಳಿಗೆ ಕೇಂದ್ರ ಸರ್ಕಾರದ ಹಠಮಾರಿತನವೇ ಕಾರಣ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ.

ರೈತರ ಆಂದೋಲನವು 3 ಕರಾಳ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಕ್ಕಾಗಿ ಮಾತ್ರವಲ್ಲ, ಎಲ್ಲಾ ಕೃಷಿ ಉತ್ಪನ್ನಗಳಿಗೆ ಮತ್ತು ಎಲ್ಲಾ ರೈತರಿಗೆ ಲಾಭದಾಯಕ ಬೆಲೆಗಳ ಶಾಸನಬದ್ಧ ಖಾತರಿಗಾಗಿ ಎಂಬುದನ್ನು ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ಅವರಿಗೆ ನೆನಪಿಸುತ್ತದೆ. ಹಾಗೆಯೇ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ರೈತರ ಈ ಮಹತ್ವದ ಬೇಡಿಕೆ ಇನ್ನೂ ಬಾಕಿ ಇದೆ. ಇಂದಿನ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ, ಶೀಘ್ರದಲ್ಲೇ ತನ್ನ ಸಭೆಯನ್ನು ನಡೆಸಿ ಮುಂದಿನ ನಿರ್ಧಾರಗಳನ್ನು ಪ್ರಕಟಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ರದ್ದಾಗಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾನೂನಿಗೆ ಒತ್ತಾಯಿಸಿ ಸತತ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಮತ್ತು ದೇಶಾದ್ಯಂತ ನಡೆದ ಚಾರಿತ್ರಿಕ ರೈತ ಹೋರಾಟಕ್ಕೆ ಜಯ ಲಭಿಸಿದೆ. ದಿಟ್ಟ ರೈತ ಹೋರಾಟ ಎದುರು ಮಂಡಿಯೂರಿರುವ ನರೇಂದ್ರ ಮೋದಿ ಸರ್ಕಾರ ಕೊನೆಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹೋರಾಟವನ್ನು ಮುನ್ನೆಡಿಸಿದ ನೂರಾರು ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ‘ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ ಮುನ್ನುಗ್ಗುತ್ತಿದೆ’ ಎಂದು ಹೇಳಿದೆ.


ಇದನ್ನೂ ಓದಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...