Homeಅಂತರಾಷ್ಟ್ರೀಯ ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

 ಇಸ್ರೇಲ್ ಮೇಲೆ ನಿರ್ಬಂಧಕ್ಕೆ 800ಕ್ಕೂ ಹೆಚ್ಚು ಐರೋಪ್ಯ ಒಕ್ಕೂಟದ ವಕೀಲರು, ನ್ಯಾಯಾಧೀಶರು ಒತ್ತಾಯ

- Advertisement -
- Advertisement -

ಐರೋಪ್ಯ ಒಕ್ಕೂಟದ 800ಕ್ಕೂ ಹೆಚ್ಚು ವಕೀಲರು, ಶಿಕ್ಷಣ ತಜ್ಞರು ಮತ್ತು ಮಾಜಿ ನ್ಯಾಯಾಧೀಶರು ಇಸ್ರೇಲ್ ಸರ್ಕಾರ ಮತ್ತು ಅದರ ಮಂತ್ರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಮತ್ತು ಗಾಜಾದಲ್ಲಿ “ನರಮೇಧವನ್ನು ತಡೆಗಟ್ಟಲು ಮತ್ತು ಅದನ್ನು ಶಿಕ್ಷಿಸಲು” ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಧಾನಿ ಕೀರ್ ಸ್ಟಾರ್ಮರ್‌ಗೆ ಬರೆದ ಪತ್ರವು ಪ್ರಸ್ತುತ ಇಸ್ರೇಲ್‌ನಿಂದ ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಮತ್ತು ಅವರಿಗೆ ಮತ್ತಷ್ಟು ಬೆದರಿಕೆ ಇದೆ ಎಂದು ಪ್ರತಿಪಾದಿಸಿದೆ.

ಗಾಜಾದಲ್ಲಿ ನರಮೇಧವನ್ನು ನಡೆಸಲಾಗುತ್ತಿದೆ ಅಥವಾ ಕನಿಷ್ಠ ಪಕ್ಷ ನರಮೇಧದ ಗಂಭೀರ ಅಪಾಯವಿದೆ ಎಂದು ಇವರು ಹೇಳಿದ್ದಾರೆ. ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧ ಅಪರಾಧಗಳು ಮತ್ತು ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜುಲೈ 2024ರಲ್ಲಿ ಅಂತರರಾಷ್ಟ್ರೀಯ ನ್ಯಾಯಾಲಯ (ICJ) ಇಸ್ರೇಲ್ ಇಡೀ ಗಾಝಾದೆಲ್ಲೆಡೆ ಅಂತರರಾಷ್ಟ್ರೀಯ ಕಾನೂನಿನ ಖಂಡನೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪತ್ತೆಹಚ್ಚಿದೆ. ಪ್ಯಾಲೆಸ್ಟೀನಿಯನ್ ಜನರಿಗೆ ಅವರ ಸ್ವ-ನಿರ್ಣಯದ ಹಕ್ಕನ್ನು ನಿರಾಕರಿಸುವ ಮೂಲಕ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಂಡ ಪ್ರದೇಶವನ್ನು ಕಾನೂನುಬಾಹಿರವಾಗಿ ತನ್ನ ತೆಕ್ಕೆಗೆ ತಗೆದುಕೊಳ್ಳುತ್ತಿದೆ ಎಂದು ವಕೀಲರು ಹೇಳಿದ್ದಾರೆ.

ಗಾಜಾದ ಪ್ಯಾಲೆಸ್ಟೀನಿಯನ್ ಜನರ ಸರ್ವನಾಶವನ್ನು ತಪ್ಪಿಸಲು ಈಗ ತುರ್ತು ಮತ್ತು ನಿರ್ಣಾಯಕ ಕ್ರಮದ ಅಗತ್ಯವಿದೆ ಎಂದು ಸ್ಟಾರ್ಮರ್ ಅವರನ್ನು ಅದು ಒತ್ತಾಯಿಸಿದೆ. ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಇತ್ತೀಚಿನ ಕಾಮೆಂಟ್‌ಗಳನ್ನು ಪತ್ರವು ಉಲ್ಲೇಖಿಸಿದೆ. ಅವರು, ಗಾಜಾಪಟ್ಟಿಯ ಎಲ್ಲಾ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ಹಮಾಸ್ ನಾಶವಾಗುವವರೆಗೆ ವಶಪಡಿಸಿಕೊಳ್ಳುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಇಸ್ರೇಲ್ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ಐರೋಪ್ಯ ಒಕ್ಕೂಟವು ಕಳೆದ ವಾರ ಇಸ್ರೇಲ್‌ನೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ಸ್ಥಗಿತಗೊಳಿಸಿತು. ಈ ಪತ್ರವು ಇಸ್ರೇಲ್‌ನ ಮೇ 2025ರ ಯೋಜನೆಯನ್ನು ಕೇಂದ್ರೀಕರಿಸುತ್ತದೆ. ಇದರ ಅನುಷ್ಠಾನವು ಈ ವರ್ಷದ ಮೇ 16ರಂದು ಪ್ರಾರಂಭವಾಯಿತು. ಈ ಯೋಜನೆಯು ಇಸ್ರೇಲಿನಿಂದ ಗಾಜಾಪಟ್ಟಿಯನ್ನು ವಶಪಡಿಸಿಕೊಳ್ಳುವುದು ಮತ್ತು ಪ್ರದೇಶಗಳನ್ನು ಹಿಡಿದಿಟ್ಟುಕೊಳ್ಳುವ ಗುರಿಯನ್ನು ಹೊಂದಿರುವ ವಿಸ್ತೃತ ಮಿಲಿಟರಿ ಕಾರ್ಯಾಚರಣೆಗಳನ್ನು ಒಳಗೊಂಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಗಾಜಾದ ಜನಸಂಖ್ಯೆಯನ್ನು ಅಲ್ಲಿಂದ ಬೇರೆಡೆಗೆ ಬಲವಂತವಾಗಿ ಸ್ಥಳಾಂತರಿಸುವುದು ಕೂಡ ಸೇರಿದೆ.

ಐಡಿಎಫ್ ವಕ್ತಾರರು ಈ ದಾಳಿಯು ಗಾಜಾಪಟ್ಟಿಯ ಬಹುಪಾಲು ಜನಸಂಖ್ಯೆಯನ್ನು ಬೇರೆಡೆ ಸ್ಥಳಾಂತರಿಸುವ ಉದ್ದೇಶವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಮಂತ್ರಿಗಳು ಗಾಜಾವನ್ನು ಸಂಪೂರ್ಣವಾಗಿ ನಾಶಪಡಿಸಲಾಗುವುದು ಮತ್ತು ಅಲ್ಲಿನ ಜನರನ್ನು ದಕ್ಷಿಣದ ಮಾನವೀಯ ವಲಯಕ್ಕೆ ಕಳುಹಿಸಲಾಗುವುದು ಎಂದು ಹೇಳುತ್ತಿದ್ದಾರೆ. ಅಲ್ಲಿಂದ ಅವರು “ಮೂರನೇ ದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೋಗಲು ಪ್ರಾರಂಭಿಸುತ್ತಾರೆ” ಎಂದು ಕೂಡ ಹೇಳಿದ್ದಾರೆ.

ಪ್ರಧಾನ ಮಂತ್ರಿ ನೆತನ್ಯಾಹು ಅವರು ಇಸ್ರೇಲ್ ಗಾಜಾದಲ್ಲಿ ಮನೆಗಳನ್ನು ನಾಶಪಡಿಸುತ್ತಿದೆ. ಆದ್ದರಿಂದ ಪ್ಯಾಲೆಸ್ಟೀನಿಯನ್ನರು ಮತ್ತೆ ಗಾಜಾಕ್ಕೆ ಹಿಂತಿರುಗಲು ಅಲ್ಲಿ ಅವರಿಗೆ ಮನೆಗಳು ಇಲ್ಲ ಮತ್ತು ಸ್ಪಷ್ಟವಾಗಿ ಹೇಳುವುದಾದರೆ ಗಾಜಾ ಜನರು ಪಟ್ಟಿಯ ಹೊರಗೆ ವಲಸೆ ಹೋಗಲು ಆಯ್ಕೆ ಮಾಡಿಕೊಳ್ಳುವುದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಮೇ 16ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಗಾಜಾದ ಜನರು ಶಾಶ್ವತವಾಗಿ ಗಾಜಾವನ್ನು ತೊರೆಯುವುದಕ್ಕೆ ಒತ್ತಾಯಿಸುವುದನ್ನು ಅಂತರರಾಷ್ಟ್ರೀಯ ಕಾನೂನಿನ ಧಿಕ್ಕರಿಸುವುದಾಗಿದೆ ಮತ್ತು ಅದು ಜನಾಂಗೀಯ ಶುದ್ಧೀಕರಣಕ್ಕೆ ಸಮಾನ ಎಂದು ಬಣ್ಣಿಸಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನಡೆಸಿದ ಯುದ್ಧವು ಕನಿಷ್ಠ 54,056 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದೆ ಮತ್ತು 123,129 ಜನರು ಗಾಯಗೊಂಡಿದ್ದಾರೆ. ಸರ್ಕಾರಿ ಮಾಧ್ಯಮ ಕಚೇರಿ ತನ್ನ ಸಾವಿನ ಸಂಖ್ಯೆಯನ್ನು 61,700 ಕ್ಕೂ ಹೆಚ್ಚು ಎಂದು ಹೇಳಿದೆ. ಅವಶೇಷಗಳಡಿ ಸಿಲುಕಿ ಕಾಣೆಯಾದ ಸಾವಿರಾರು ಜನರು ಸತ್ತಿದ್ದಾರೆಂದು ಭಾವಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ಯುಎನ್‌ಒಸಿಎಚ್‌ಎ ಪರಿಸ್ಥಿತಿಯನ್ನು “ಕರುಣೆಯಿಲ್ಲದ ಯುದ್ಧ” ಎಂದು ಬಣ್ಣಿಸಿದೆ. ಮೇ 2025ರ ವರದಿಯು ಇಡೀ ಗಾಜಾ ಜನಸಂಖ್ಯೆಯು ಹೆಚ್ಚಿನ ಆಹಾರ ಅಭದ್ರತೆಯನ್ನು ಎದುರಿಸುತ್ತಿದೆ, ಅರ್ಧ ಮಿಲಿಯನ್ ಜನರು (ಐದರಲ್ಲಿ ಒಬ್ಬರು) ಹಸಿವನ್ನು ಎದುರಿಸುತ್ತಿದ್ದಾರೆ ಎಂದು ಕಂಡುಹಿಡಿದಿದೆ.

ನರಮೇಧವನ್ನು ತಡೆಗಟ್ಟಲು ಮತ್ತು ಇಸ್ರೇಲಿಗೆ ಶಿಕ್ಷೆ ವಿಧಿಸಲು ಮತ್ತು ಅಂತರಾಷ್ಟ್ರೀಯ ಕಾನೂನಿನ ಮಾನದಂಡಗಳ ಉಲ್ಲಂಘನೆಯನ್ನು ಕೊನೆಗೊಳಿಸಲು ಯುಕೆ ಕಾನೂನುಬದ್ಧವಾಗಿ ಎಲ್ಲಾ ಸಮಂಜಸ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕಾನೂನು ತಜ್ಞರು ಒತ್ತಿ ಹೇಳಿದ್ದಾರೆ. ಇಲ್ಲಿಯವರೆಗಿನ ಯುಕೆ ಕ್ರಮಗಳು ಈ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ಅವರು ವಾದಿಸುತ್ತಾರೆ.

ಪತ್ರವು ಗಾಜಾದಲ್ಲಿ ಇಸ್ರೇಲ್ ಇರುವಿಕೆಯ ಕಾನೂನುಬಾಹಿರತೆಯನ್ನು ಸಹ ತಿಳಿಸುತ್ತದೆ. ಇಸ್ರೇಲ್‌ನ ನೀತಿಗಳು ಮತ್ತು ಪದ್ಧತಿಗಳು ಬಲವಂತದ ಮೂಲಕ ಭೂಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧದ ನಿಷೇಧ ಮತ್ತು ಪ್ಯಾಲೆಸ್ಟೀನಿಯನ್ ಸ್ವ-ನಿರ್ಣಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ICJ ಅಭಿಪ್ರಾಯಿಸಿದೆ. ಪ್ಯಾಲೆಸ್ಟೀನಿಯನ್ನರ ಮೇಲೆ ವಿಧಿಸಲಾದ ನಿರ್ಬಂಧಗಳು ಜನಾಂಗೀಯ ತಾರತಮ್ಯ ಮತ್ತು ಜನಾಂಗೀಯ ಪ್ರತ್ಯೇಕತೆ ಮತ್ತು ವರ್ಣಭೇದ ನೀತಿಯ ನಿಷೇಧದ ಉಲ್ಲಂಘನೆಯಾಗಿದೆ ಎಂದು ICJ ಕಂಡುಹಿಡಿದಿದೆ. ಇಸ್ರೇಲ್ “ಸಾಧ್ಯವಾದಷ್ಟು ಬೇಗ” ಗಾಜಾದಿಂದ ಹಿಂದೆ ಸರಿಯಬೇಕು ಎಂದು ICJ ತೀರ್ಮಾನಿಸಿದೆ.

ನರಮೇಧ, ಬಲವಂತದ ಸ್ಥಳಾಂತರ ಮತ್ತು ಪ್ಯಾಲೆಸ್ಟೀನಿಯನ್ನರ ವಿರುದ್ಧ ಸಾಮೂಹಿಕ ಶಿಕ್ಷೆಯ ಕೃತ್ಯಗಳು ಹಾಗೂ ಆಕ್ರಮಿತ ಪ್ರದೇಶವನ್ನು ಮತ್ತಷ್ಟು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೆಚ್ಚುತ್ತಿರುವ ಪುರಾವೆಗಳಿವೆ ಎಂದು ಹೇಳುವ ಮೂಲಕ ಪತ್ರವು ಮುಕ್ತಾಯಗೊಳ್ಳುತ್ತದೆ. ಗಾಜಾದ ಪ್ಯಾಲೆಸ್ಟೀನಿಯನ್ ಜನಸಂಖ್ಯೆಯ ನಾಶವನ್ನು ತಪ್ಪಿಸಲು ನಿರ್ಣಾಯಕ ಕ್ರಮದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳುತ್ತಾರೆ. ವಿಶ್ವಸಂಸ್ಥೆಯ ತಜ್ಞರನ್ನು ಪ್ರತಿಧ್ವನಿಸುತ್ತಾ ರಾಜ್ಯಗಳು ಈಗಲೇ ಕಾರ್ಯನಿರ್ವಹಿಸಬೇಕು ಅಥವಾ ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ ಜನಸಂಖ್ಯೆ ನಿರ್ನಾಮವಾಗುವುದನ್ನು ತಡೆಯಬೇಕು ಎಂದು ಅವರು ಎಚ್ಚರಿಸಿದ್ದಾರೆ.

ದಲಿತ ವೃದ್ಧನ ಜೀವಂತ ದಹನ: ‘ಗುಜರಾತ್ ದಲಿತರಿಗೆ ನರಕವಾಗುತ್ತಿದೆ’ ಎಂದ ಶಾಸಕ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...