Homeಮುಖಪುಟಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ :...

ಒಂದು ವರ್ಷದ ನಡುವೆ ಯುಎಸ್‌ನಲ್ಲಿ 90 ಸಾವಿರಕ್ಕೂ ಅಧಿಕ ಅಕ್ರಮ ಭಾರತೀಯ ವಲಸಿಗರ ಬಂಧನ : ವರದಿ

- Advertisement -
- Advertisement -

ಅಪಾಯಕಾರಿ ಪ್ರಯಾಣ ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿರುವವರ ಸಾವಿನ ಸರಣಿಯ ಹೊರತಾಗಿಯೂ, ಅಕ್ರಮವಾಗಿ ಯುಎಸ್‌ಗೆ ಪ್ರವೇಶಿಸಲು ಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ 1 ಲಕ್ಷದಷ್ಟು ಭಾರತೀಯರು ಅಕ್ರಮ ಪ್ರವೇಶಿಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಯುಎಸ್‌ ಆರ್ಥಿಕ ವರ್ಷ-2024ರಲ್ಲಿ ಅಂದರೆ, ಅಕ್ಟೋಬರ್ 1,2023 ರಿಂದ ಸೆಪ್ಟೆಂಬರ್ 30, 2024 ರವರೆಗೆ 29 ಲಕ್ಷ ಅಕ್ರಮ ವಲಸಿಗರು ಮೆಕ್ಸಿಕೋ ಮತ್ತು ಕೆನಡಾ ಮೂಲಕ ದೇಶ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇವರಲ್ಲಿ ಭಾರತೀಯರ ಸಂಖ್ಯೆ 90,415 ಎಂದು ಯುಎಸ್‌ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ (ಯುಎಸ್‌-ಸಿಬಿಪಿ) ಡೇಟಾ ತೋರಿಸಿದೆ.

ಒಟ್ಟು 90,415 ಭಾರತೀಯ ಅಕ್ರಮ ವಲಸಿಗರಲ್ಲಿ ಶೇ. 50ರಷ್ಟು ಜನರು ಗುಜರಾತ್‌ ಮೂಲದವರು ಎಂದು ಅಕ್ರಮ ವಲಸೆಯನ್ನು ಪತ್ತೆ ಹಚ್ಚುವ ಭಾರತೀಯ ಏಜೆನ್ಸಿಗಳ ಮೂಲಗಳು ತಿಳಿಸಿದೆ. ಪ್ರತಿ ಗಂಟೆಗೆ 10 ಭಾರತೀಯರನ್ನು ಬಂಧಿಸಲಾಗಿದೆ ಎಂದೂ ಕೂಡ ಹೇಳಬಹುದು. ಉತ್ತರದಲ್ಲಿ ಕೆನಡಾದೊಂದಿಗಿನ ಯುಎಸ್ ಗಡಿಯಲ್ಲಿ 43,764 ಜನರನ್ನು ಒಂದು ವರ್ಷದ ಅವಧಿಯಲ್ಲಿ ಬಂಧಿಸಲಾಗಿದೆ. ಇದು ಇಲ್ಲಿಯವರೆಗೆ ಈ ಗಡಿಯಲ್ಲಿ ಅತಿ ಹೆಚ್ಚು ಭಾರತೀಯರನ್ನು ಸೆರೆಹಿಡಿದಿರುವುದಾಗಿದೆ.

ಯುಎಸ್‌-ಸಿಬಿಪಿ ಡೇಟಾವು ಕಳೆದ ವರ್ಷಕ್ಕೆ ಹೋಲಿಸಿದರೆ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟು ಅಕ್ರಮ ವಲಸಿಗರು ಮತ್ತು ಭಾರತೀಯರ ಸಂಖ್ಯೆಯಲ್ಲಿ ಕುಸಿತವನ್ನು ತೋರಿಸಿದೆ. ಅಲ್ಲದೆ, ಮೆಕ್ಸಿಕೋ ಮೂಲಕ ಪ್ರವೇಶಿಸುವ ಭಾರತೀಯ ವಲಸಿಗರ ಸಂಖ್ಯೆಯೂ ಕಡಿಮೆಯಾಗಿರುವುದನ್ನು ಹೇಳಿದೆ.

2023ರ ಆರ್ಥಿಕ ವರ್ಷದಲ್ಲಿ ಯುಎಸ್‌ಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಒಟ್ಟಾರೆ ಅಕ್ರಮ ವಲಸಿಗರ ಸಂಖ್ಯೆ 32 ಲಕ್ಷ ಇತ್ತು ಅದು 2024ರಲ್ಲಿ 29 ಲಕ್ಷಕ್ಕೆ ಕುಸಿದಿದೆ. 2023ರಲ್ಲಿ ಬಂಧಿತರಾದ ಒಟ್ಟು ಭಾರತೀಯರ ಸಂಖ್ಯೆ 96,917 ಇತ್ತು. ಅದು 2024ಕ್ಕೆ 94,415ಕ್ಕೆ ಇಳಿದಿದೆ. ಮೆಕ್ಸಿಕೋ ಗಡಿಯ ಸಿಕ್ಕಿಬಿದ್ದ ಭಾರತೀಯರ ಸಂಖ್ಯೆ 41,770 ಆಗಿತ್ತು. 2024ರ ಆರ್ಥಿಕ ವರ್ಷದಲ್ಲಿ ಅದು 25,616ಕ್ಕೆ ಕಡಿಮೆಯಾಗಿದೆ.

ಎರಡು ಪ್ರಮುಖ ಕಾರಣಗಳಿಂದಾಗಿ ಜನರು ಮೆಕ್ಸಿಕೋ ಮೂಲಕ ಕತ್ತೆಗಳನ್ನು ಬಳಸಿ ಯುಎಸ್‌ ಪ್ರವೇಶಿಸುವುದನ್ನು ನಿಲ್ಲಿಸಿದ್ದಾರೆ. ಒಂದು ಮೆಕ್ಸಿಕೋಗೆ ತೆರಳುವ ಮೊದಲು ಅವರನ್ನು ದುಬೈ ಅಥವಾ ಟರ್ಕಿಯಲ್ಲಿ ತಡೆಯಲಾಗುತ್ತಿದೆ. ಯುಎಸ್ ಏಜೆನ್ಸಿಗಳು ಕಳೆದ ಕೆಲವು ವರ್ಷಗಳಿಂದ ಇಲ್ಲಿ ತೀವ್ರ ನಿಗಾ ವಹಿಸುತ್ತಿವೆ.

ಮೂಲವೊಂದು ಹೇಳುವಂತೆ, “ಗುಜರಾತಿಗಳು ಕೂಡ ಮೆಕ್ಸಿಕೋಕ್ಕಿಂತ ಕೆನಡಾವನ್ನು ಆಯ್ಕೆ ಮಾಡಲು ಪ್ರಾರಂಭಿಸಿದ್ದಾರೆ. ಏಕೆಂದರೆ, ಇಲ್ಲಿ ಸುಲಭವಾಗಿ ಟ್ಯಾಕ್ಸಿಯನ್ನು ಬಾಡಿಗೆಗೆ ತೆಗೆದುಕೊಂಡು ಯುಎಸ್‌ಗೆ ದಾಟಬಹುದು. ಇತ್ತೀಚೆಗೆ, ಯುಎಸ್ ಅಧಿಕಾರಿಗಳು ಈ ಗಡಿಯಲ್ಲಿ ನಿಗಾವನ್ನು ಬಿಗಿಗೊಳಿಸಿದ್ದಾರೆ. ಅಕ್ರಮ ವಲಸಿಗರನ್ನು ಕೆನಡಾಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಆದರೂ, ಅಕ್ರಮ ವಲಸಿಗರು ಅದೇ ಮಾರ್ಗದಲ್ಲಿ ಸ್ವಲ್ಪ ಸಮಯದ ನಂತರ ಮತ್ತೆ ಪ್ರವೇಶಿಸಲು ಪ್ರಯತ್ನಿಸುತ್ತಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ವಿವರಿಸಿದೆ.

ಇದನ್ನೂ ಓದಿ : ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...