Homeಮುಖಪುಟಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿರಕ್ಕೂ ಹೆಚ್ಚು ಐ.ಟಿ, ಇ.ಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ. ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ” ಎಂದಿದ್ದಾರೆ.

ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿ ಪಕ್ಷದ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಹೈಕಮಾಂಡ್‌ಗೂ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ” ಎಂದು ಹೇಳಿದ್ದಾರೆ.

“ಬಿಜೆಪಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ. ಜನ ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ಇದರಿಂದ ಬಿಜೆಪಿಗರು ಬೆದರಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

“ಕಾಂಗ್ರೆಸ್‌ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಧುಗಿರಿ: ಕೆ.ಎನ್. ರಾಜಣ್ಣ, ವೀರಭದ್ರಯ್ಯ ನಡುವಿನ ಹಣಾಹಣಿಗೆ ಬಿಜೆಪಿ ಎಂಟ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...