Homeಮುಖಪುಟಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ...

ಗೋಡ್ಸೆ ಬಗ್ಗೆ ಹೇಳಿಕೆ: ಸಂಸತ್ತಿನ ರಕ್ಷಣಾ ಸಮಿತಿಯಿಂದ ಪ್ರಗ್ಯಾ ಠಾಕೂರ್‌ ಹೊರಕ್ಕೆ…

- Advertisement -
- Advertisement -

ಸಂಸತ್ತಿನಲ್ಲಿ ಗಾಂಧಿ ಹಂತಕ ನಾಥೂರಾಂ ಗೊಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಬಿಜೆಪಿಯ ವಿವಾದಾತ್ಮಕ ಸಂಸದೆ ಪ್ರಗ್ಯಾ ಠಾಕೂರ್‌ರವರನ್ನು ಉಳಿದ ಚಳಿಗಾಲದ ಅಧಿವೇಶನಕ್ಕಾಗಿ ಪಕ್ಷದ ಸಂಸದರ ನಿಯಮಿತ ಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಅಷ್ಟು ಮಾತ್ರವಲ್ಲದೇ ಪ್ರಜ್ಞಾ ಠಾಕೂರ್ ಅವರನ್ನು ಇತ್ತೀಚೆಗೆ ಸೇರಿಸಿಕೊಂಡಿದ್ದ ರಕ್ಷಣಾ ಸಂಸದೀಯ ಸಮಿತಿಯಿಂದಲೂ ಸಹ ಹೊರಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಣಾ ಸಚಿವಾಲಯ ಸಂಸದೀಯ ಸಮಿತಿಗೆ ಸಾಧ್ವಿ ಪ್ರಗ್ಯಾ ಸಿಂಗ್‌ ನೇಮಕ: ಕೇಂದ್ರದ ನಿರ್ಧಾರಕ್ಕೆ ವಿರೋಧ

“ನಿನ್ನೆ ಸಂಸತ್ತಿನಲ್ಲಿ ಅವರು ನೀಡಿದ ಹೇಳಿಕೆ ಖಂಡನೀಯ. ಅಂತಹ ಹೇಳಿಕೆ ಅಥವಾ ಸಿದ್ಧಾಂತವನ್ನು ಬಿಜೆಪಿ ಎಂದಿಗೂ ಬೆಂಬಲಿಸುವುದಿಲ್ಲ ”ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಎಎನ್‌ಐಗೆ ತಿಳಿಸಿದ್ದಾರೆ.

ನಿನ್ನೆ ಸಂಸತ್ತಿನಲ್ಲಿ ಎಸ್‌ಜೆಪಿ ಕಾಯ್ದೆ ತಿದ್ದುಪಡಿ ಕುರಿತ ಚರ್ಚೆಯಲ್ಲಿ ಡಿಎಂಕೆ ಸಂಸದ ಎ.ರಾಜಾ ರವರು ಗಾಂಧೀಜಿಯವರನ್ನು ಗೋಡ್ಸೆ ಕೊಂದಿದ್ದು ಹೇಗೆ ಎಂದು ವಿವರಿಸುತ್ತಿದ್ದರು. ಆಗ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ದೇಶಭಕ್ತ ಗೋಡ್ಸೆಯನ್ನು ನೀವು ಉದಾಹರಣೆಯಾಗಿ ಕೊಡಬಾರದು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: “ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ” : ಪ್ರಗ್ಯಾ ಠಾಕೂರ್

ಇದರಿಂದ ಕುಪಿತರಾದ ಮಧ್ಯಪ್ರದೇಶದ ಸಿಎಂ ಕಮಲ್‌ನಾಥ್‌ರವರು ಪ್ರಗ್ಯಾ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಗಾಂಧಿ ಕೊಂದ ಗೋಡ್ಸೆ ಬಗ್ಗೆ ಬಿಜೆಪಿ ತನ್ನ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು.

ಗಾಂಧಿ ಕೊಂದ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಪ್ರಗ್ಯಾ ಠಾಕೂರ್‌ರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗ ಆಕೆ ಮತ್ತೆ ಮತ್ತೆ ಅದನ್ನೇ ಪುನರುಚ್ಚರಿಸುತ್ತಿದ್ದರೂ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಮಲ್‌ ನಾಥ್‌ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು.

ಇದನ್ನೂ ಓದಿ: ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...