Homeಮುಖಪುಟಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

ಕ್ಷಮೆ ಕೇಳಲು ನಾನು ’ರಾಹುಲ್‌ ಸಾವರ್ಕರ್‌’ ಅಲ್ಲ ಹೇಳಿಕೆ: ಮಹಾರಾಷ್ಟ್ರದ ಮೈತ್ರಿಯಲ್ಲಿ ಬಿರುಕು ಮೂಡಿಸುವುದೇ?

- Advertisement -
- Advertisement -

ನನ್ನ ಹೆಸರು ರಾಹುಲ್‌ ಸಾವರ್ಕರ್‌ ಅಲ್ಲ, ಬದಲಾಗಿ ರಾಹುಲ್‌ ಗಾಂಧಿ. ಸತ್ಯವನ್ನು ಹೇಳಿದ್ದಕ್ಕಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಶನಿವಾರ ರಾಹುಲ್‌ ಗಾಂಧಿ ಘೋಷಿಸಿ ಪಕ್ಷದ ಕಾರ್ಯಕರ್ತರಿಂದ ಭಾರೀ ಮೆಚ್ಚುಗೆ ಪಡೆದಿದ್ದರು. ಇದೀಗ ಆ ವಿಷಯವು ಮಹರಾಷ್ಟ್ರದಲ್ಲಿ ಪರ ವಿರೋಧದ ಚರ್ಚೆಗೆ ನಾಂದಿ ಹಾಡಿದೆ.

ಮಹಾರಾಷ್ಟ್ರದ ಕಾಂಗ್ರೆಸ್‌ನ ನೂತನ ಮಿತ್ರಪಕ್ಷ ಶಿವಸೇನೆಯು, ತಮ್ಮ ಪಕ್ಷವು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರೂ ಅವರನ್ನು ಗೌರವಿಸಿಸುತ್ತದೆ. ಅದೇ ರೀತಿ ಕಾಂಗ್ರೆಸ್ ಸಹ ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು ಎಂದು ಹೇಳಿದೆ.

ನಾವು ಪಂಡಿತ್ ನೆಹರು ಮತ್ತು ಮಹಾತ್ಮ ಗಾಂಧಿಯನ್ನು ಗೌರವಿಸುತ್ತೇವೆ. “ನೀವು ವೀರ್ ಸಾವರ್ಕರ್ ಅವರನ್ನು ಅವಮಾನಿಸಬಾರದು. ಸಂವೇದನಾಶೀಲರಾದ ಯಾರಿಗೂ ಹೆಚ್ಚಿನ ವಿವರಣೆಯ ಅಗತ್ಯವಿಲ್ಲ” ಎಂದು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್‌ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ವೀರ್ ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ದೇವರಲ್ಲ, ರಾಷ್ಟ್ರಕ್ಕೂ ಕೂಡ. ಅವರ ಹೆಸರು ರಾಷ್ಟ್ರೀಯ ಹೆಮ್ಮೆ ಮತ್ತು ಸ್ವಾಭಿಮಾನದಿಂದ ಕೂಡಿದೆ. ನೆಹರೂ ಮತ್ತು ಗಾಂಧಿಯವರಂತೆ ಅವರು ಸ್ವಾತಂತ್ರ್ಯ ಸಾಧಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅಂತಹ ಎಲ್ಲ ದೇವರುಗಳನ್ನು ಗೌರವಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಸಾವರ್ಕರ್ ವಿಷಯವು ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ (ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ) ಮೈತ್ರಿಕೂಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಎನ್‌ಸಿಪಿ ಅಜಿತ್ ಪವಾರ್ “ಉದ್ಧವ್ ಜಿ, ಸೋನಿಯಾ ಜಿ, ಮತ್ತು ಪವಾರ್ ಸಾಹೆಬ್ ಪ್ರಬುದ್ಧ ಜನರು. ಅವರು ಅದನ್ನು ನಿಭಾಯಿಸುತ್ತಾರೆ ಎಂದು ಉತ್ತರಿಸಿದ್ದಾರೆ.

ಇದಕ್ಕೂ ಮೊದಲು ಸಿಎಬಿಯನ್ನು ಶಿವಸೇನೆ ವಿರೋಧಿಸಿತ್ತು. ಆದರೆ ಲೋಕಸಭೆಯಲ್ಲಿ ಆಶ್ಚರ್‍ಯಕರವಾಗಿ ಅದರ ಪರ ಮತ ಹಾಕಿತ್ತು. ಶಿವಸೇನೆಯ ಈ ನಿಲುವಿನಿಂದ ಸಿಟ್ಟಿಗೆದ್ದ ರಾಹುಲ್‌ ಗಾಂಧಿ “ಸಿಎಬಿ ಭಾರತೀಯ ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಅದನ್ನು ಬೆಂಬಲಿಸುವ ಎಲ್ಲರೂ ನಮ್ಮ ರಾಷ್ಟ್ರದ ಅಡಿಪಾಯದ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಟ್ವೀಟ್‌ ಮಾಡಿದ್ದರು. ತದನಂತರ ಶಿವಸೇನೆ ರಾಜ್ಯಸಭೆಯಲ್ಲಿ ಸಿಎಬಿಯನ್ನು ವಿರೋಧಿಸಿ ಪದತ್ಯಾಗ ಮಾಡಿತ್ತು.

ಇನ್ನು ರಾಹುಲ್‌ ಗಾಂಧಿ “ಮೋದಿಯವರು ಮೇಕ್‌ ಇನ್‌ ಇಂಡಿಯಾ ಎಂದು ಘೋಷಣೆ ನೀಡಿದ್ದರು. ಆದರೀಗ ರೇಪ್‌ ಇನ್‌ ಇಂಡಿಯಾ” ಆಗಿದೆ ಎಂದು ಟೀಕಿಸಿದ್ದರು. ಈ ಹೇಳಿಕೆಗೆ ರಾಹುಲ್‌ ಕ್ಷಮೆಯಾಚಿಸಬೇಕೆಂದು ಬಿಜೆಪಿಯು ಪಟ್ಟು ಹಿಡಿದಿತ್ತು. ಉಭಯ ಸದನಗಳಲ್ಲಿ ಈ ಬಗ್ಗೆ ಪ್ರತಿಭಟನೆಗಳು ದಾಖಲಾಗಿದ್ದವು.

ಇದಕ್ಕೆ ಪ್ರತಿಕ್ರಿಯೆಯಾಗಿ “ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರೂ ಹಾಗೆ ಮಾಡುವುದಿಲ್ಲ. ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶಕ್ಕೆ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು ಶನಿವಾರ ಮಧ್ಯಾಹ್ನ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಡೆದ ಪಕ್ಷದ ಮೆಗಾ ರ್‍ಯಾಲಿಯಲ್ಲಿ ರಾಹುಲ್‌ ಗಾಂಧಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...