Homeಮುಖಪುಟವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಓವೈಸಿ

- Advertisement -
- Advertisement -

ನಿರೀಕ್ಷೆಯಂತೆ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆ ವಿಚಾರ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೆದ್ ಬೆನ್ನಲ್ಲೇ, ಎಐಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಕೂಡ ಮಸೂದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

“ಮಸೂದೆಯು ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಧಾರ್ಮಿಕ ಆಚರಣೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಲಿದೆ” ಎಂದು ಇಬ್ಬರೂ ನಾಯಕರು ಆರೋಪಿಸಿದ್ದಾರೆ.

ಇಬ್ಬರೂ ನಾಯಕರೂ ವಕೀಲ ಅನಸ್ ತನ್ವೀರ್ ಮೂಲಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ವಿವಾದಿತ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕಾರಗೊಂಡಿದೆ. ರಾಷ್ಟ್ರಪತಿ ಅಂಕಿತ ಬೀಳಲು ಬಾಕಿಯಿದೆ.

ಮಸೂದೆಯನ್ನು ಪರಿಶೀಲಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸದಸ್ಯ ಜಾವೆದ್, “ಮಸೂದೆಯ ತಿದ್ದುಪಡಿಗಳು ಸಂವಿಧಾನದ 14, 25, 26, 29 ಮತ್ತು 300ಎ ವಿಧಿಗಳನ್ನು ಉಲ್ಲಂಘಿಸುತ್ತವೆ. ಈ ವಿಧಿಗಳು ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಆಸ್ತಿಗೆ ಸಂಬಂಧಿಸಿವೆ. ಮಸೂದೆಯು ಧಾರ್ಮಿಕ ಆಚರಣೆಯ ಅವಧಿಯನ್ನು ಆಧರಿಸಿದ ಅನಿಯಂತ್ರಿತ ನಿರ್ಬಂಧಗಳನ್ನು ಹೇರುತ್ತದೆ. ಇದು ಇತ್ತೀಚೆಗೆ ಮತಾಂತರಗೊಂಡವರು ವಕ್ಫ್ ಅಡಿಯಲ್ಲಿ ಆಸ್ತಿ ಅರ್ಪಿಸುವುದನ್ನು ತಡೆಯುತ್ತದೆ. ಈ ನೀತಿಯು ಇಸ್ಲಾಮಿಕ್ ಕಾನೂನಿಗೆ ವಿರುದ್ದವಾಗಿದೆ” ಎಂದು ವಾದಿಸಿದ್ದಾರೆ.

“ತಿದ್ದುಪಡಿ ಮಸೂದೆಯು ವಕ್ಫ್‌ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ಸೇರಿಸಲು ಅವಕಾಶ ನೀಡುತ್ತದೆ. ಇದು ಸಮರ್ಥನೀಯವಲ್ಲ. ಹಿಂದೂ, ಸಿಖ್ ಸೇರಿದಂತೆ ಇತರ ಯಾವುದೇ ಧರ್ಮಗಳ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಇಂತಹ ನಿಯಮಗಳಿಲ್ಲ” ಎಂದು ಜಾವೆದ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜಾವೆದ್, “ಇನ್ನೂ ಹಲವು ಮಂದಿ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ದ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಹಲವು ಪಕ್ಷಗಳು ಅರ್ಜಿ ಸಲ್ಲಿಸಲಿವೆ. ಸಂಸತ್ತಿನಲ್ಲಿ, ವಿರೋಧ ಪಕ್ಷದ ಪ್ರತಿಯೊಬ್ಬರೂ ಇದು ಸಂವಿಧಾನಬಾಹಿರ ಎಂದು ಹೇಳಿದ್ದಾರೆ. ನೀವು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಹೇಗೆ ಸಾಧ್ಯ? ನಿಮಗೆ ಬಹುಮತ ಇದ್ದ ಮಾತ್ರಕ್ಕೆ ನೀವು ಬಯಸಿದ್ದನ್ನು ಅಂಗೀಕರಿಸಬಹುದು ಎಂದಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡ ಈ ಮಸೂದೆಯನ್ನು ಮುಸ್ಲಿಂ ಸಮುದಾಯದ ಹಕ್ಕುಗಳ ‘ಲಜ್ಜೆಗೆಟ್ಟ ಉಲ್ಲಂಘನೆ’ ಎಂದು ಕರೆದಿದ್ದಾರೆ.

ಸಂಸತ್ತಿನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ, ಅವರು ಮಸೂದೆಯ ಪ್ರತಿಯನ್ನು ಹರಿದು, ತಮ್ಮ ಕೃತ್ಯವನ್ನು ದಕ್ಷಿಣ ಆಫ್ರಿಕಾದ ಮಹಾತ್ಮ ಗಾಂಧಿಯವರ ನಾಗರಿಕ ಅಸಹಕಾರಕ್ಕೆ ಹೋಲಿಸಿದ್ದಾರೆ. “ಗಾಂಧಿಯಂತೆ, ನಾನು ಕೂಡ ಈ ಕಾನೂನನ್ನು ಹರಿದು ಹಾಕುತ್ತಿದ್ದೇನೆ. ಇದು ಸಂವಿಧಾನಬಾಹಿರ. ಬಿಜೆಪಿ ದೇವಾಲಯಗಳು ಮತ್ತು ಮಸೀದಿಗಳ ಹೆಸರಿನಲ್ಲಿ ಈ ದೇಶದಲ್ಲಿ ವಿಭಜನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಹೇಳಿದ್ದಾರೆ.

ಚರ್ಚೆಯ ಸಮಯದಲ್ಲಿ, ತಾನು ಪ್ರಸ್ತಾಪಿಸಿದ 10 ತಿದ್ದುಪಡಿಗಳನ್ನು ಪರಿಗಣಿಸುವಂತೆ ಓವೈಸಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮಸೂದೆಯು ಮುಸ್ಲಿಂ ಹಕ್ಕುಗಳನ್ನು ಮೊಟಕುಗೊಳಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಚ್-ರಾಜ್‌ಬೋಂಗ್ಶಿ ಸಮುದಾಯದ 28 ಸಾವಿರ ಪ್ರಕರಣ ವಾಪಾಸ್: ಅಸ್ಸಾಂ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...