Homeಮುಖಪುಟಶಾಸಕ ರಾಜಾ ಸಿಂಗ್ ಅಮಾನತು ರದ್ದುಗೊಳಿಸಿದ್ದಕ್ಕೆ ಬಿಜೆಪಿ ವಿರುದ್ಧ ಓವೈಸಿ ವಾಗ್ದಾಳಿ

ಶಾಸಕ ರಾಜಾ ಸಿಂಗ್ ಅಮಾನತು ರದ್ದುಗೊಳಿಸಿದ್ದಕ್ಕೆ ಬಿಜೆಪಿ ವಿರುದ್ಧ ಓವೈಸಿ ವಾಗ್ದಾಳಿ

- Advertisement -
- Advertisement -

ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿದ್ದಕ್ಕಾಗಿ ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಉವೈಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಟಿ ರಾಜಾ ಸಿಂಗ್ ಅವರನ್ನು ಕಳೆದ ವರ್ಷ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು. ಆದರೆ ಇದೀಗ ಅಮಾನತು ಹಿಂಪಡೆದು, ಅವರಿಗೆ ನವೆಂಬರ್ 30ರ ಚುನಾವಣೆಗೆ ಪಕ್ಷದ ಟಿಕೆಟ್ ನೀಡಿದೆ. ಈ ವಿಚಾರವಾಗಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ನರೇಂದ್ರ ಮೋದಿ ಅವರು ತಮ್ಮ ಆತ್ಮೀಯ ಫ್ರಿಂಜ್ ಎಲಿಮೆಂಟ್‌ನ್ನು ಪುರಸ್ಕರಿಸಿದ್ದಾರೆ. ನೂಪುರ್ ಶರ್ಮಾ ಅವರು ಪ್ರಧಾನಿಯವರಿಂದ ಆಶೀರ್ವಾದ ಪಡೆಯುತ್ತಾರೆ ಎಂಬುದು ಖಚಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಿಜೆಪಿಯಲ್ಲಿ ದ್ವೇಷದ ಮಾತುಗಳು ಭಡ್ತಿಗೆ ಅತ್ಯಂತ ವೇಗವಾದ ಮಾರ್ಗವಾಗಿದೆ. ಮೋದಿಯ ಬಿಜೆಪಿಯಲ್ಲಿ ಭಡ್ತಿಗೆ ದ್ವೇಷ ಭಾಷಣವು ಅತ್ಯಂತ ವೇಗವಾದ ಮಾರ್ಗವಾಗಿದೆ” ಎಂದು ಉವೈಸಿ ಟ್ವೀಟ್‌ ಮಾಡಿದ್ದಾರೆ.

”ತೆಲಂಗಾಣ ವಿಧಾನಸಭೆಯಲ್ಲಿ ಹೈದರಾಬಾದ್‌ನ ಗೋಶಾಮಹಲ್‌ನ ಶಾಸಕ ರಾಜಾ ಸಿಂಗ್ ಅವರ ಅಮಾನತು ರದ್ದುಗೊಳಿಸಿದ ಬಿಜೆಪಿ ನಾಯಕತ್ವವು, ಪಕ್ಷವು ಈ ಹಿಂದೆ ನೀಡಿದ್ದ ಶೋಕಾಸ್ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ನೀಡಿದ ವಿವರಣೆಯನ್ನು ಪರಿಗಣಿಸಿದೆ” ಎಂದು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ರವಿವಾರ ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ, ರಾಜಾ ಸಿಂಗ್ ಅವರು “ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದ್” ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನಂತರ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ಬಳಿಕ ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ತೆಲಂಗಾಣ ಹೈಕೋರ್ಟ್ ನವೆಂಬರ್ 2022ರಲ್ಲಿ ಅವರ ವಿರುದ್ಧದ ಪಿಡಿ ಕಾಯ್ದೆಯನ್ನು ರದ್ದುಗೊಳಿಸಿ ಅವರಿಗೆ ಜಾಮೀನು ನೀಡಿತ್ತು.

ತಮ್ಮ ಅಮಾನತು ಹಿಂಪಡೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಘಟಕದ ಮುಖ್ಯಸ್ಥ ಕಿಶನ್ ರೆಡ್ಡಿ ಮತ್ತು ಇತರ ರಾಜ್ಯ ನಾಯಕರಿಗೆ ರಾಜಾ ಸಿಂಗ್ ಅವರು ವೀಡಿಯೊ ಸಂದೇಶದಲ್ಲಿ ಧನ್ಯವಾದ ತಿಳಿಸಿದ್ದಾರೆ.

ನವೆಂಬರ್ 30ರ ಚುನಾವಣೆಗೆ ತಮ್ಮ ಗೋಶಾಮಹಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿದ ಪಕ್ಷದ ನಾಯಕತ್ವಕ್ಕೆ ರಾಜಾ ಸಿಂಗ್ ಧನ್ಯವಾದ ಅರ್ಪಿಸಿದರು.

ಇದನ್ನೂ ಓದಿ: ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ: ಬಿಜೆಪಿ MLCಯ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...