Homeಮುಖಪುಟಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

ಕನ್ನಡಿಗರು ಸೇರಿದಂತೆ ಭಾರತೀಯ ಯುವಕರನ್ನು ಯುದ್ಧಕ್ಕೆ ಕಳುಹಿಸಿದ ರಷ್ಯಾ: ರಕ್ಷಿಸುವಂತೆ ಓವೈಸಿ ಮನವಿ

- Advertisement -
- Advertisement -

ಉದ್ಯೋಗ ಭರವಸೆಯೊಂದಿಗೆ ಏಜೆಂಟರ ವಂಚನೆಗೆ ಒಳಗಾಗಿ ರಷ್ಯಾಗೆ ತೆರಳಿದ್ದ ಭಾರತೀಯ ಯುವಕರನ್ನು ಉಕ್ರೇನ್ ವಿರುದ್ದದ ಯುದ್ದಕ್ಕೆ ಕಳುಹಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವಂತೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌ ಜೈಶಂಕರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಯುವಕರ ಸಹಾಯಕ್ಕೆ ಧಾವಿಸುವಂತೆ ಓವೈಸಿ ಆಗ್ರಹಿಸಿದ್ದಾರೆ.

ನಿರುದ್ಯೋಗಿ ಯುವಕರನ್ನು ಕಟ್ಟಡಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನೀಡುವ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಲಾಗಿದೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ನಿರ್ವಹಣೆಯ ತರಬೇತಿ ಕೊಟ್ಟು ಬಲವಂತವಾಗಿ ಯುದ್ಧಭೂಮಿಗೆ ಕಳುಹಿಸಲಾಗಿದೆ. ಪ್ರಸ್ತುತ ಯುವಕರು ಉಕ್ರೇನ್ ಗಡಿಯ ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ ಪ್ರದೇಶಗಳಲ್ಲಿ ರಷ್ಯಾದ ಖಾಸಗಿ ಸೇನೆ ವ್ಯಾಗ್ನರ್‌ನ ಭಾಗವಾಗಿ ಸಿಲುಕಿಕೊಂಡಿದ್ದಾರೆ ಎಂದು ಓವೈಸಿ ಹೇಳಿದ್ದಾರೆ.

“ತೆಲಂಗಾಣದ ಇಬ್ಬರು, ಕರ್ನಾಟಕದ ಕಲಬುರಗಿಯ ಮೂವರು, ಕಾಶ್ಮೀರದ ಇಬ್ಬರು ಮತ್ತು ಗುಜರಾತ್ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲ ಯುವಕರ ಕುಟುಂಬಸ್ಥರು ನನ್ನನ್ನು ಭೇಟಿಯಾಗಿ ವಿಷಯ ತಿಳಿಸಿದ ಬಳಿಕ, ನಾನು ಸಚಿವ ಜೈಶಂಕರ್ ಮತ್ತು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ತಿಳಿಸಿದ್ದಾರೆ.

“ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದ ನಿರುದ್ಯೋಗಿ ಯುವಕರಿಗೆ
ಸೆಕ್ಯೂರಿಟಿ ಗಾರ್ಡ್ ಕೆಲಸ ನೀಡುವುದಾಗಿ ಸುಳ್ಳು ಹೇಳಿ ರಷ್ಯಾದ ಏಜೆಂಟರು ಕರೆಸಿಕೊಂಡಿದ್ದಾರೆ. ಬಳಿಕ ಅವರಿಗೆ ಶಸ್ತ್ರಾಸ್ತ್ರ ಕೊಟ್ಟು ಬಲವಂತವಾಗಿ ಯುದ್ಧ ಭೂಮಿಗೆ ಕಳುಹಿಸಲಾಗಿದೆ. ನಾನು ಯುವಕರ ಕುಟುಂಬಸ್ಥರನ್ನು ಭೇಟಿಯಾಗಿದ್ದೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅವರು ನನ್ನಿಂದ ಸಹಾಯ ಕೇಳಿದ್ದರು. ಯುವಕರನ್ನು ಮರಳಿ ಕರೆತರುವಂತೆ ನಾನು ವಿದೇಶಾಂಗ ಸಚಿವರಿಗೆ ಮತ್ತು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಪತ್ರ ಬರೆದಿದ್ದೇನೆ” ಎಂದು ಓವೈಸಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ಏಜೆಂಟ್‌ಗಳಲ್ಲಿ ಒಬ್ಬನಾದ, ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿರುವ ‘ಬಾಬಾ ಬ್ಲಾಗ್ಸ್’ ಎಂಬ ಯೂಟ್ಯೂಬ್ ಚಾನೆಲ್‌ನ ಫೈಝಲ್ ಖಾನ್ ಎಂಬಾತ ಯುವಕರನ್ನು ವಂಚಿಸಿದ್ದಾನೆ. ಪ್ರಸ್ತುತ ಆತ ದುಬೈನಲ್ಲಿದ್ದಾನೆ. ವಿವಿಧ ದೇಶಗಳಲ್ಲಿ ಹೇಗೆ ಉದ್ಯೋಗ ಮತ್ತು ಉದ್ಯೋಗದ ಪರವಾನಿಗೆ ಪಡೆಯುವುದು ಎಂಬುವುದರ ಕುರಿತು ಈತ ವಿಡಿಯೋಗಳನ್ನು ಮಾಡುತ್ತಿರುತ್ತಾನೆ. ಈತನ ಜೊತೆಗೆ ಮುಂಬೈನಿಂದ ಸುಫಿಯಾನ್ ಮತ್ತು ಪೂಜಾ, ರಮೇಶ್ ಮತ್ತು ಮೊಯಿನ್ ರಷ್ಯಾದಲ್ಲಿ ಭಾರತೀಯ ಏಜೆಂಟ್‌ಗಳು ಎಂದು ಓವೈಸಿ ಹೇಳಿದ್ದಾರೆ.

ಯುದ್ಧ ಭೂಮಿಗೆ ತಮ್ಮನ್ನು ಹೇಗೆ ತಳ್ಳಲಾಯಿತು ಎಂದು ಯುವಕರು ವಿಡಿಯೋ ಕಳುಹಿಸಿದ್ದಾರೆ. ಅವರಲ್ಲಿ ಒಬ್ಬ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಯುವಕರು ಹೇಳಿದ್ದಾಗಿ ಓವೈಸಿ ಮಾಹಿತಿ ನೀಡಿದ್ದಾರೆ.

ರಷ್ಯಾದಲ್ಲಿ ಸಿಲುಕಿದವರಲ್ಲಿ ಹೈದರಾಬಾದ್‌ನ ನಾಂಪಲ್ಲಿಯ ಮೊಹಮ್ಮದ್ ಅಫ್ಸಾನ್ ಕೂಡ ಒಬ್ಬರು, ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಫ್ಸಾನ್ ಪತ್ನಿ ಅಸ್ಮಾ ಶಿರೀನ್, ತನ್ನ ಪತಿಯನ್ನು ರಕ್ಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಷ್ಯಾದ ರಕ್ಷಣಾ ಸಚಿವಾಲಯದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಅಧಿಕಾರಿಯೊಬ್ಬರು ದೃಢಪಡಿಸಿದಂತೆ, ಕಳೆದ ಒಂದು ವರ್ಷದಲ್ಲಿ ತನ್ನ ಮಾಸ್ಕೋ ನೇಮಕಾತಿ ಕೇಂದ್ರದಲ್ಲಿ ರಷ್ಯಾದ ಸೇನೆಯು ಸುಮಾರು 100 ಭಾರತೀಯರನ್ನು ನೇಮಿಸಿಕೊಂಡಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವಾರು ದೇಶಗಳ ಜನರನ್ನು ಕಳೆದ ಒಂದೂವರೆ ವರ್ಷಗಳಿಂದ ರಷ್ಯಾದ ಸೇನೆಯು ನೇಮಿಸಿಕೊಳ್ಳುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭಗೊಂಡು ಎರಡು ವರ್ಷಗಳಾಗುತ್ತಾ ಬಂದಿದೆ. ಉಭಯ ರಾಷ್ಟ್ರಗಳ ನಡುವೆ ಮಾತುಕತೆಗಳು ನಿಂತು ಹೋಗಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುದೀರ್ಘ ಸಂಘರ್ಷಕ್ಕೆ ಸಿದ್ಧರಾಗಿದ್ದಾರೆ. ತಮ್ಮ ಭೂ ಪ್ರದೇಶಗಳನ್ನು ಮರಳಿ ಪಡೆಯಲು ಉಕ್ರೇನ್ ಮುಂದಾಗಲಿರುವ ಕಾರಣ 2024ರಲ್ಲಿ ಯುದ್ಧ ತೀವ್ರಗೊಳ್ಳಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. ಉಕ್ರೇನ್‌ ಬೇಷರತ್ ಆಗಿ ಶರಣಾಗುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಪಟ್ಟು ಹಿಡಿದಿದೆ.

ಇದನ್ನೂ ಓದಿ : ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...