Homeಕರೋನಾ ತಲ್ಲಣಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್ ಕೊರೊನಾ ಲಸಿಗೆಗಳ ಪ್ರಯೋಗಗಳಿಗೆ ಭಾರತದಲ್ಲಿ ಅರ್ಜಿ

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

- Advertisement -
- Advertisement -

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಭಾರತದಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಪ್ರಯೋಗ ನಡೆಸಲು ಭಾರತೀಯ ನಿಯಂತ್ರಕರಿಗೆ ಮುಂದಿನ ಒಂದು ವಾರದೊಳಗೆ ಅರ್ಜಿ ಸಲ್ಲಿಸಲಿದೆ ಎಂದು ತಿಳಿಸಿದೆ.

ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್ ಲಸಿಕೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ್ಲಾ, “ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ತೋರಿಸಿವೆ ಮತ್ತು ಅದರ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ. ನಾವು ಭಾರತೀಯ ನಿಯಂತ್ರಕರಿಗೆ ಪರವಾನಗಿ ಪ್ರಯೋಗಗಳಿಗೆ ವಾರಗಳೊಳಗೆ ಅರ್ಜಿ ಸಲ್ಲಿಸುತ್ತೇವೆ. ಅವರು ನಮಗೆ ಅನುಮತಿ ನೀಡಿದ ಕೂಡಲೇ, ನಾವು ಭಾರತದಲ್ಲಿ ಲಸಿಕೆಗಾಗಿ ಪ್ರಯೋಗಗಳನ್ನು ಪ್ರಾರಂಭಿಸುತ್ತೇವೆ. ಇದಲ್ಲದೆ, ಶೀಘ್ರದಲ್ಲೇ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ಪ್ರಾರಂಭಿಸುತ್ತೇವೆ.” ಎಂದು ಹೇಳಿದ್ದಾರೆ.

ಆಕ್ಸ್‌ಫರ್ಡ್‌ನ ಕೊರೊನಾ ಲಸಿಕೆಯ ಮೊದಲ ಫಲಿತಾಂಶಗಳು ಲಸಿಕೆಯು ಸುರಕ್ಷಿತವೆಂದು ತೋರಿಸಿದ ಕಾರಣ ಕೊರೊನಾ ವಿರುದ್ಧದ ಯುದ್ಧದಲ್ಲಿ ಸೋಮವಾರವನ್ನು ಒಂದು ಪ್ರಮುಖ ದಿನವೆಂದು ಗುರುತಿಸಲಾಗಿದೆ.

ವರ್ಷಾಂತ್ಯಕ್ಕೆ ಲಸಿಕೆ ಸಿದ್ಧವಾಗಬಹುದು ಎಂದು ಸಂಶೋಧಕರು ಸೂಚಿಸುತ್ತಿದ್ದಾರೆ. ಚುಚ್ಚುಮದ್ದಿನಿಂದ ಶೇಕಡಾ 91 ಕ್ಕಿಂತ ಹೆಚ್ಚು ಸ್ವಯಂಸೇವಕರು ಕೊರೊನಾ ವೈರಸ್ ವಿರುದ್ಧ ರೋಗನಿರೋಧಕ ಪ್ರತಿಕ್ರಿಯೆಯನ್ನು ಉಂಟುಮಾಡಿದ್ದಾರೆ ಎಂದು ಫಲಿತಾಂಶಗಳು ತೋರಿಸಿದವು.

ಈ ಪ್ರಯೋಗವು ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ನಡೆಯಿತು. ಪ್ರತಿರಕ್ಷಣಾ (ಇಮ್ಯೂನಿಟೆ) ಪ್ರತಿಕ್ರಿಯೆಗಳು ಕನಿಷ್ಠ 56 ದಿನಗಳವರೆಗೆ ಪ್ರಬಲವಾಗಿದ್ದವು ಎಂದಿದ್ದಾರೆ.

AZD1222 ಎಂದು ಕರೆಯಲ್ಪಡುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಲಸಿಕೆಯನ್ನು ಪ್ರಮುಖ ಔಷಧೀಯ ಸಂಸ್ಥೆ ಅಸ್ಟ್ರಾಜೆನೆಕಾ ತಯಾರಿಸುತ್ತಿದೆ. ಯುಕೆ ಸರ್ಕಾರವು ಈಗಾಗಲೇ 100 ಮಿಲಿಯನ್ ಡೋಸ್‌ಗಳನ್ನು ಆದೇಶಿಸಿದೆ.

ಫಲಿತಾಂಶಗಳ ಪ್ರಕಾರ, ಲಸಿಕೆಯು ಟಿ ಸೆಲ್ ಮತ್ತು ಆಂಟಿಬಾಡಿ ಇಮ್ಯುನಿಟಿಯನ್ನು ಹೆಚ್ಚಿಸಿದೆ. ಈ ಎರಡೂ ವಿಷಯದಲ್ಲಿ ಲಸಿಕೆಯು ಹೆಚ್ಚಿನ ಪ್ರತಿಕ್ರಿಯೆ ನೀಡಿದೆ ಎಂದು ಅಧ್ಯಯನವು ಕಂಡುಹಿಡಿದಿದೆ.

ಟಿ ಕೋಶಗಳ ಇಮ್ಯೂನಿಟಿಯು ಎರಡು ವಾರಗಳ ನಂತರ ಉತ್ತುಂಗಕ್ಕೇರಿತು ನಂತರ 56 ನೇ ದಿನಕ್ಕೆ ಸ್ವಲ್ಪ ಇಳಿಯಿತು ಎಂದು ಅಧ್ಯಯವು ಹೇಳಿದೆ.

ಮತ್ತೊಂದೆಡೆ, ಆಂಟಿಬಾಡಿ ಇಮ್ಯೂನಿಟಿಯು ನಾಲ್ಕು ವಾರಗಳ ನಂತರ ಉತ್ತುಂಗಕ್ಕೇರಿತು ಹಾಗೂ 56 ನೇ ದಿನಗಳವರೆಗೆ ಉಳಿಯಿತು ಎಂದು ಅಧ್ಯಯನ ಹೇಳಿದೆ. ಇದು ಇನ್ನೂ ಹೆಚ್ಚು ಕಾಲ ಉಳಿಯಬಹುದು ಎಂದು ಅದು ಸೂಚಿಸುತ್ತದೆ.


ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...