Homeಕರೋನಾ ತಲ್ಲಣಆಮ್ಲಜನಕದ ಕೊರತೆ ಗೋವಾ ವೈದ್ಯಕೀಯ ಕಾಲೇಜ್‌ನಲ್ಲಿ ಒಟ್ಟು 74 ರೋಗಿಗಳ ಸಾವು

ಆಮ್ಲಜನಕದ ಕೊರತೆ ಗೋವಾ ವೈದ್ಯಕೀಯ ಕಾಲೇಜ್‌ನಲ್ಲಿ ಒಟ್ಟು 74 ರೋಗಿಗಳ ಸಾವು

- Advertisement -
- Advertisement -

ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಒಟ್ಟು 74 ರೋಗಿಗಳು ಸಾವನ್ನಪ್ಪಿದ್ದಾರೆ. ಇದು ರಾಜ್ಯದ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವಾಗಿದ್ದು, ಮೃತರೆಲ್ಲರೂ ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಬೆಳಿಗ್ಗೆ 2 ರಿಂದ 6 ರವರೆಗೆ 26 ಮಂದಿ, ಬುಧವಾರ 20 ಮಂದಿ ಮತ್ತು ಗುರುವಾರ ಬೆಳಿಗ್ಗೆ 15 ಸಾವುಗಳು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿವೆ.

ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಅದರ ಪೂರೈಕೆಯ ನಡುವಿನ ಅಂತರವು ಕೆಲವು ಸಮಸ್ಯೆಗಳಿಗೆ ಕಾರಣವಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶ: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ, ಮಾಸಿಕ 5000 ರೂ. ಪಿಂಚಣಿ

ಜೊತೆಗೆ ರಾಜ್ಯದಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಒತ್ತಿ ಹೇಳಿದ್ದರು. ಆಮ್ಲಜನಕದ ಸುಗಮ ಪೂರೈಕೆಗಾಗಿ ವಾರ್ಡ್ ಮಟ್ಟದ ವ್ಯವಸ್ಥೆಯನ್ನು ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ವೈದ್ಯಕೀಯ ಆಮ್ಲಜನಕದ ಪೂರೈಕೆಯಲ್ಲಿ ಕೊರತೆಯಿದೆ ಎಂದಿದ್ದರು.

ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿರುವಂತೆ, ಮೇ 1 ಮತ್ತು 10 ರ ನಡುವೆ ಗೋವಾವು ಮಹಾರಾಷ್ಟ್ರದ ಕೊಲ್ಹಾಪುರದಿಂದ ನಿಗದಿಪಡಿಸಿದ 110 ಮೆಟ್ರಿಕ್ ಟನ್‌ಗಳಲ್ಲಿ ಕೇವಲ 66.74 ಮೆಟ್ರಿಕ್ ಟನ್‌ಗಳನ್ನು ಮಾತ್ರ ಪಡೆದುಕೊಂಡಿದೆ ಎಂದು ಪ್ರಧಾನ ಕಾರ್ಯದರ್ಶಿ ಪಿಕೆ ಗೋಯೆಲ್ ಅವರು ಕೇಂದ್ರ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತ, ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೊರೊನಾ ಸೋಂಕಿತ ರೋಗಿಗಳಿಂದ ತುಂಬಿದ್ದು, ಹೊಸ ರೋಗಿಗಳಿಗೆ ಸ್ಥಳವಿಲ್ಲ ಎಂದು ತಿಳಿಸಿದೆ.


ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...