Homeಕರೋನಾ ತಲ್ಲಣಆಕ್ಸಿಜನ್‌ ಕೊರತೆ: ಪಂಜಾಬ್‌ನ ಖಾಸಗಿ ಆಸ್ಪತ್ರೆಯಲ್ಲಿ 6 ರೋಗಿಗಳ ಸಾವು

ಆಕ್ಸಿಜನ್‌ ಕೊರತೆ: ಪಂಜಾಬ್‌ನ ಖಾಸಗಿ ಆಸ್ಪತ್ರೆಯಲ್ಲಿ 6 ರೋಗಿಗಳ ಸಾವು

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಪಂಜಾಬ್‌‌ನ ಖಾಸಗಿ ಆಸ್ಪತ್ರೆಯಲ್ಲಿ ಐವರು ಕೊರೊನಾ ಸೋಂಕಿತರು ಸೇರಿದಂತೆ ಒಟ್ಟು ಆರು ರೋಗಿಗಳು ಮೃತಪಟ್ಟಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಅಮೃತಸರದ ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಆರು ಜನರು ಗಂಭೀರ ರೋಗಿಗಳಾದ್ದರು. ಆರು ಜನರಲ್ಲಿ ಮೂವರು ಅಮೃತಸರದವರು, ಇಬ್ಬರು ಗುರುದಾಸ್‌ಪುರದವರು ಮತ್ತು ಒಬ್ಬರು ತರಣ್ ತಾರ್ನ್‌ಗೆ ಸೇರಿದವರಾಗಿದ್ದಾರೆ. ಅವರೆಲ್ಲರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಗುರುವಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಆಮ್ಲಜನಕದ ಕೊರತೆ ಇದೆ, ರೋಗಿಗಳ ಕುಟುಂಬಸ್ಥರೆ ಅದರ ವ್ಯವಸ್ಥೆ ಮಾಡಬೇಕು ಎಂದು ಎಂದು ಆಸ್ಪತ್ರೆಯ ಸಿಬ್ಬಂದಿ ನಿನ್ನೆ ರಾತ್ರಿ ತಿಳಿಸಿದ್ದಾರೆ ಎಂದು ಸಂತ್ರಸ್ತರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಆಮ್ಲಜನಕ ಸಿಲಿಂಡರ್‌ಗಳ ಕೊರತೆಯ ಬಗ್ಗೆ ನಿನ್ನೆಯೆ ಅಮೃತಸರ ಜಿಲ್ಲಾಡಳಿತಕ್ಕೆ ತಿಳಿಸಿದ್ದು, ಆದರೆ ಯಾರೂ ತಮ್ಮ ಮಾತನ್ನು ಆಲಿಸಲಿಲ್ಲ ಎಂದು ಆಸ್ಪತ್ರೆಯು ಜಿಲ್ಲಾಡಳಿತವನ್ನು ದೂಷಿಸಿದೆ.

ವೈದ್ಯಕೀಯ ಆಮ್ಲಜನಕ ಸಿಲಿಂಡರ್‌ಗಳನ್ನು ಭರ್ತಿ ಮಾಡುವುದನ್ನು ವಿಳಂಬ ಮಾಡದಂತೆ ಅವರು ಜಿಲ್ಲಾಡಳಿತವನ್ನು ಪದೇ ಪದೇ ಕೋರಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆದರೆ ಆಮ್ಲಜನಕವನ್ನು ಪೂರೈಸುವ ಆದ್ಯತೆಯು ಸರ್ಕಾರಿ ಆಸ್ಪತ್ರೆಗಳಿಗೆ ಮಾತ್ರ, ಅದರ ನಂತರವೇ ಖಾಸಗಿ ಆಸ್ಪತ್ರೆಗಳ ಬೇಡಿಕೆ ಈಡೇರುತ್ತದೆ ಎಂದು ಅವರಿಗೆ ತಿಳಿಸಲಾಗಿದೆ ಎಂದು TNIE ವರದಿ ಮಾಡಿದೆ.

ನೀಲಕಂಠ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸುನಿಲ್ ದೇವಗನ್ ಮಾತನಾಡಿ, “ಆಮ್ಲಜನಕದ ಕೊರತೆಯ ಬಗ್ಗೆ ಹೇಳಿ ರೋಗಿಗಳ ಕುಟುಂಬಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ನಾವು ವಿನಂತಿಸಿದ್ದೇವೆ ಆದರೆ ಕುಟುಂಬಗಳು ಒಪ್ಪಲಿಲ್ಲ. ಜಿಲ್ಲಾಡಳಿತವು ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆಯನ್ನು ಮಾಡುತ್ತಿದೆ, ಇದು ಖಾಸಗಿ ಆಸ್ಪತ್ರೆಗಳಲ್ಲಿನ ಕೊರತೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...