ಕೊರೊನಾ ಉಲ್ಬಣವಾಗುತ್ತಿರುವ ಈ ಹೊತ್ತಿನಲ್ಲಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳ ಕೊರತೆಯಿಂದ ಸಾವನ್ನಪ್ಪುತ್ತಿರುವ ಕೊರೊನಾ ರೋಗಿಗಳ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಕೊರೊನಾ ಸೋಂಕಿತರ ಸಾವುಗಳ ಜವಾಬ್ದಾರಿಯನ್ನು ಸರ್ಕಾರವೇ ತೆಗೆದುಕೊಳ್ಳಬೇಕು ಎಂದಿದ್ದಾರೆ. ಭಾರತವು ಕಳೆದ 24 ಗಂಟೆಯಲ್ಲಿ ಮಾರಣಾಂತಿಕ ಕಾಯಿಲೆಗೆ 2,263 ಜನರು ಬಲಿಯಾಗಿದ್ದಾರೆ.
ಕೊರೊನಾ ಸೋಂಕಿತ ರೋಗಿಗೆ ಆಮ್ಲಜನಕದ ಪೂರೈಕೆಯ ಕೊರತೆ ಮತ್ತು ಐಸಿಯು ಹಾಸಿಗೆಗಳ ಕೊರತೆ ಬಹುತೇಕ ಸಾವುಗಳಿಗೆ ಕಾರಣವಾಗುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಬೆಂಕಿ, 13 ಕೊರೊನಾ ರೋಗಿಗಳು ಸಾವು; ಮತ್ತೊಂದು ದುರಂತ
Corona can cause a fall in oxygen level but it’s #OxygenShortage & lack of ICU beds which is causing many deaths.
GOI, this is on you.
— Rahul Gandhi (@RahulGandhi) April 23, 2021
“ಕೊರೊನಾ ಸೋಂಕು ಆಮ್ಲಜನಕ ಮಟ್ಟದ ಕುಸಿತಕ್ಕೆ ಕಾರಣವಾಗಬಹುದು. ಆದರೆ ಆಕ್ಸಿಜನ್ ಪೂರೈಕೆ ಕೊರತೆ ಮತ್ತು ಐಸಿಯು ಹಾಸಿಗೆಗಳ ಕೊರತೆಯಿಂದಾಗಿ ಅನೇಕ ಸಾವುಗಳು ಸಂಭವಿಸುತ್ತಿವೆ. ಇಂತಹ ಸ್ಥಿತಿಗೆ ಕಾರಣವಾದ ಕೇಂದ್ರ ಸರ್ಕಾರ ಇದರ ಹೊಣೆ ನಿಮಗ್ಮ ಮೇಲಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ, ದೇಶದ ಹಲವಾರು ಆಸ್ಪತ್ರೆಗಳು ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಆಮ್ಲಜನಕ ಪೂರೈಕೆ, ಹಾಸಿಗೆಗಳು ಮತ್ತು ಔಷಧಿಗಳ ಬಿಕ್ಕಟ್ಟನ್ನು ಎದುರಿಸುತ್ತಿವೆ.
ಶುಕ್ರವಾರ ಬೆಳಗ್ಗೆ ಆಕ್ಸಿಜನ್ ಕೊರತೆಯಿಂದಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ತೀವ್ರ ಸೋಂಕಿನಿಂದ ಬಳಲುತ್ತಿದ್ದ 25 ಕೊರೊನಾ ರೋಗಿಗಳು ಸಾವನಪ್ಪಿದ್ದಾರೆ ಎಂದು ಅಲ್ಲಿನ ನಿರ್ದೇಶಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 25 ರೋಗಿಗಳು ಮೃತಪಟ್ಟಿದ್ದಾರೆ. ಅವರು ತೀವ್ರ ಸೋಂಕಿನಿಂದ ಬಾಧಿತರಾಗಿದ್ದೇ ಅದಕ್ಕೆ ಕಾರಣ. ಇತ್ತೀಚಿನ ದಿನಗಳಲ್ಲಿ ಇದು ಅತಿ ದೊಡ್ಡ ಸಂಖ್ಯೆ. ಆದರೆ ಆಕ್ಸಿಜನ್ ಪ್ರಮಾಣ ಇನ್ನು ಕೆಲವೇ ಗಂಟೆಗಳಿಗೆ ಮಾತ್ರ ಸಾಕಾಗುವಂತಿದ್ದು ಇನ್ನು 60 ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ, ಕೇಂದ್ರ ಸರ್ಕಾರದ ತುರ್ತು ಮಧ್ಯಪ್ರವೇಶ ಬೇಕಾಗಿದೆ ಎಂದು ಅವರು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ: ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?: ಅಘೋಷಿತ ಲಾಕ್‌ಡೌನ್‌ಗೆ ಸಿದ್ದರಾಮಯ್ಯ ಕಿಡಿ


