Homeಮುಖಪುಟಪ.ಬಂಗಾಳ: ವೀಲ್‌ ಚೇರ್‌ನಲ್ಲಿಯೇ ರೋಡ್‌ ಶೋ ನಡೆಸಲಿರುವ ಮಮತಾ ಬ್ಯಾನರ್ಜಿ

ಪ.ಬಂಗಾಳ: ವೀಲ್‌ ಚೇರ್‌ನಲ್ಲಿಯೇ ರೋಡ್‌ ಶೋ ನಡೆಸಲಿರುವ ಮಮತಾ ಬ್ಯಾನರ್ಜಿ

- Advertisement -

ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದಾಗ ಗಾಯಗೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ ವೀಲ್ ಚೇರ್‌ನಲ್ಲಿಯೇ ಕೂತು ಚುನಾವಣಾ ಮೆರವಣಿಗೆಯಲ್ಲಿ ರೋಡ್‌ ಶೋ ನಡೆಸಲು ಮುಂದಾಗಿದ್ದಾರೆ.

ಇಂದು (ಮಾ.14) ಗಾಂಧಿ ಪ್ರತಿಮೆಯಿಂದ ಹಜ್ರಾಕ್ಕೆ ವೀಲ್‌ ಚೇರ್‌ನಲ್ಲಿಯೇ ರೋಡ್ ಶೋ ನಡೆಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲಗಳು ತಿಳಿಸಿವೆ. ನಂತರ ಮಧ್ಯಾಹ್ನ ಹಜ್ರಾದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವಾರದ ಆರಂಭದಲ್ಲಿ ಗಾಯಗೊಂಡಿದ್ದ ಮಮತಾ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಮಾರ್ಚ್ 12 ರಂದು ಮುಖ್ಯಮಂತ್ರಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್ ವ್ಯಂಗ್ಯ

ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿತ್ತು.

ಚಿಕಿತ್ಸೆ ಪಡೆಯುತ್ತಿರುವಾಗಲೇ ಹೇಳಿಕೆ ನೀಡಿದ್ದ ಮಮತಾ ಬ್ಯಾನರ್ಜಿ, ಬೆಂಬಲಿಗರಲ್ಲಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಅಲ್ಲದೆ ಒಂದೆರಡು ದಿನಗಳಲ್ಲಿ ಪ್ರಚಾರಕ್ಕೆ ಹಿಂತಿರುಗಲಿದ್ದು, ಅಗತ್ಯವಿದ್ದರೆ ವೀಲ್ ಚೇರ್ ಬಳಕೆ ಮಾಡುವುದಾಗಿ ಘೋಷಿಸಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ದಾಳಿ ಸಂಭವಿಸಿದೆ ಎನ್ನಲಾಗಿದೆ. ಕೆಲವು ಅಪರಿಚಿತ ಜನರು ಮಮತಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯು ಟಿಎಂಸಿ ಹಾಗೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿಗೆ ಕಾರಣವಾಗಿತ್ತು.


ಇದನ್ನೂ ಓದಿ: ನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? – ರಾಹುಲ್…

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ | Naanu Gauri

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ...

0
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು...
Wordpress Social Share Plugin powered by Ultimatelysocial