Homeಚಳವಳಿರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ - 2019

ರಂಗಾಯಣದ ರಂಗೋತ್ಸವ : ಪಿ.ಲಂಕೇಶರಿಗೆ ರಂಗನಮನ – 2019

- Advertisement -
- Advertisement -

ಪಿ.ಲಂಕೇಶ್ ರವರು ಹಲವು ತಲೆಮಾರುಗಳನ್ನು ಪ್ರಭಾವಿಸಿದ ಭಾರತದ ಅಪ್ಪಟ ಜೀವನಪ್ರೀತಿಯ ಮನುಷ್ಯರಾಗಿದ್ದವರು. ತಮ್ಮ ಎಲ್ಲಾ ರೀತಿಯ ಬರಹಗಳಿಂದ ಅಸಂಖ್ಯಾತ ಓದುಗರನ್ನು ಪ್ರೇರಿಪಿಸಿದ ಮಹಾನ್ ಚೇತನ ಅವರದು. ಕನ್ನಡ ಸಾಹಿತ್ಯ ಲೋಕವಂತೂ ಅವರನ್ನು ಮರೆಯುವ ಮಾತೇ ಇಲ್ಲ. ಗೌರಿ ಲಂಕೇಶ್ ರವರು ಬದುಕಿದ್ದಾಗ ಪ್ರತಿ ವರ್ಷ ಪಿ.ಲಂಕೇಶ್ ರವರ ಜನ್ಮದಿನವಾದ ಮಾರ್ಚ್ 08 ರಂದು ರಾಜ್ಯದ ಯಾವುದಾದರೊಂದು ಜಿಲ್ಲೆಯಲ್ಲಿ ಅತ್ಯುತ್ತಮ ಸಾಹಿತ್ಯಕ-ರಾಜಕೀಯ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಈಗಲೂ ಲಂಕೇಶ್ ರವರ ಸ್ಫೂರ್ತಿ, ಪ್ರಭಾವದ ನೆನಪಿನಲ್ಲಿ ಈ ರೀತಿಯ ಹಲವು ಕಾರ್ಯಕ್ರಮಗಳನ್ನು ಲಂಕೇಶ್ ರವರ ಶಿಷ್ಯಬಳಗ ರಾಜ್ಯದ್ಯಂತ ಹಮ್ಮಿಕೊಳ್ಳುತ್ತಿವೆ.

ಅದೇ ರೀತಿ ಈ ವರ್ಷ ಶಿವಮೊಗ್ಗ ರಂಗಾಯಣದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ‘ರಂಗಾಯಣದ ರಂಗೋತ್ಸವ-ಪಿ.ಲಂಕೇಶರಿಗೆ ರಂಗನಮನ-2019’ ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕದ, ಕನ್ನಡದ ಸಾಕ್ಷಿ ಪ್ರಜೆಯಾಗಿದ್ದ ಕನ್ನಡ ರಂಗಭೂಮಿಗೆ ತಮ್ಮದೇ ಆದ ರೀತಿಯ ಕಾಣಿಕೆ ಸಲ್ಲಿಸಿದ ಪಿ.ಲಂಕೇಶರಿಗೆ, ಸಮಕಾಲೀನವು ವಿಭಿನ್ನವು ಆದ ರಂಗಾಯಣದ ಮೂರು ನಾಟಕಗಳು ಸೇರಿ ಒಟ್ಟು ಐದು ನಾಟಕ ಪ್ರದರ್ಶನಗಳನ್ನು ಅರ್ಪಿಸುವ ಮೂಲಕ ಲಂಕೇಶರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

ಇದೇ ಮಾರ್ಚ್ 27 ರಿಂದ 31 ರವರೆಗೆ ನಡೆಯುವ ಈ ರಂಗನಮನ ಕಾರ್ಯಕ್ರಮದಲ್ಲಿ ಅರವಿಂದ ಮಾಲಗತ್ತಿಯವರ ಗೌರ್ಮೆಂಟ್ ಬ್ರಾಹ್ಮಣ, ಬಾದಲ್ ಸರ್ಕಾರ್ ರವರ ಮೆರವಣಿಗೆ, ಜಾಯ್ ಮೈಸ್ನಾಂ ರವರ ಇದಕ್ಕೆ ಕೊನೆ ಎಂದು? ವಾಮನ ರಾಯರವರ ಸಂದೇಹ ಸಾಮ್ರಾಜ್ಯ ಮತ್ತು ಶ್ರೀನಿವಾಸ ವೈದ್ಯರ ಬರಹಗಳನ್ನಾಧರಿಸಿದ ಪಾರ್ಶ್ವ ಸಂಗೀತ ನಾಟಕಗಳು ಪ್ರತಿದಿನ ಸಂಜೆ ಪ್ರದರ್ಶನಗೊಳ್ಳಲ್ಲಿವೆ. ಈ ರಂಗೋತ್ಸವ ನಡೆಯಲು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಡಾ. ಎಂ ಗಣೇಶ್ ರವರ ಶ್ರಮ ಎದ್ದು ಕಾಣುತ್ತಿದೆ.

“ಸಾಲದಲ್ಲಿ ಹುಟ್ಟಿ ಸಾಲದಲ್ಲೇ ಸಾಯುತ್ತಾನೆ” ಎಂಬ ಮಾತು ಈ ವಸುಧೆಯ ಮೇಲೆ ಭಾರತೀಯ ರೈತನಿಗಲ್ಲದೇ ಇನ್ನಾರಿಗೆ ಅನ್ವಯಿಸೀತು?  ರೈತರ ಅರಿವಿಗೆ ಬಾರದೆಯೇ ಅವರನ್ನಾವರಿಸುವ ಸಾಲದ ಸುಳಿ, ಅದರಿಂದ ಹೊರಬರಲಾರದೇ ಒದ್ದಾಡುತ್ತಿರುವಾಗಲೇ ಅವನೊಡನೆ ಕಣ್ಣಾಮುಚ್ಚಾಲೆಯಾಡುವ ಮಳೆ, ಮುನಿಸಿಕೊಳ್ಳುವ ಪ್ರಕೃತಿ, ನೀರಿನ ನೀರಿಕ್ಷೆಯಲ್ಲಿಯೇ ಮುರುಟುವ ಬೆಳೆಗಳು ಒಂದೇ ಎರಡೇ? ಅನ್ನಕ್ಕೂ ಗತಿಯಿಲ್ಲದೇ ತನ್ನ ಬದುಕನ್ನು ಕೊನೆಯಾಗಿಸಿಕೊಳ್ಳುತ್ತಾನೆ ರೈತ! .
ಈ ರೈತರ ಆತ್ಮಹತ್ಯೆಯಂತಹ ಕಠು ಸತ್ಯದ ಭೀಕರತೆಯನ್ನು ಉತ್ಕಟ ಭಾವಾಭಿನಯಗಳ ಅಸಂಗತ ಘಟನಾವಳಿಗಳ ಮೂಲಕ ತಮ್ಮ ಮುಂದೆ ಶಿವಮೊಗ್ಗ ರಂಗಾಯಣದ ಕಲಾವಿದರು ಅಭಿನಯಿಸಲಿದ್ದಾರೆ. ಮಾತುಗಳು ಮುಖ್ಯವಾಗದೆ ಬೌದ್ಧಿಕ ದೈಹಿಕ ಅಭಿನಯದಲ್ಲಿ ಪ್ರೇಕ್ಷಕನನ್ನು ಚಿಂತನೆಗೆ ಪ್ರಚೋದಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರಾದ ಮಣಿಪುರದ ಜಾಯ್ ಮೈಸ್ನಾಂ ರವರು.

ಈ ರೀತಿ ಸಮಾಜಮುಖಿ ಚಿಂತನೆಗಳುಳ್ಳ ನಾಟಕಗಳು ಪಿ.ಲಂಕೇಶ್ ರವರ ನೆನಪಿನಲ್ಲಿ ಪ್ರದರ್ಶನಗೊಳ್ಳುತ್ತಿರುವ ಆಶಾದಾಯಕ ಬೆಳವಣಿಗೆ. ಇಂತಹ ಪ್ರಯೋಗಗಳು ಹೆಚ್ಚಾಗಲಿ ಎಂಬುದು ನಮ್ಮ ಆಶಯ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...