Homeಮುಖಪುಟಪಿ ಸಾಯಿನಾಥ್‌ರವರ 'ಪರಿ'ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

- Advertisement -
- Advertisement -

2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿಯು ಪಿ ಸಾಯಿನಾಥ್‌ರವರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಮತ್ತು ಪತ್ರಕರ್ತ ದೀಪಂಕರ್ ಘೋಷ್ ಅವರಿಗೆ ಸಂದಿದೆ.

COVID-19 ಸಾಂಕ್ರಾಮಿಕ ಮತ್ತು ಸಂಬಂಧಿತ ವಿಷಯಗಳ ಪ್ರಸಾರಕ್ಕಾಗಿ ಘೋಷ್ ಮತ್ತು PARI ತಂಡವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರೇಮ್ ಭಾಟಿಯಾ ಮೆಮೋರಿಯಲ್ ಟ್ರಸ್ಟ್‌ನ ಪತ್ರಿಕಾ ಹೇಳಿಕೆ ತಿಳಿಸಿದೆ.

PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಪ್ರಶಸ್ತಿಯನ್ನು ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ನೀಡಲಾಗುತ್ತಿತ್ತು. ಆದರೆ ಈ ಭಾರಿ ಆ ಸಂಪ್ರದಾಯವನ್ನು ಮುರಿದಿದ್ದು “PARI ಒಟ್ಟಾರೆ ಕ್ಷೇತ್ರ ವರದಿಗಾರರು, ಸ್ವಯಂಸೇವಕರು ಮತ್ತು ಅದರ ಸಮರ್ಪಿತ ತಂಡಕ್ಕಾಗಿ” ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರೇಮ್ ಭಾಟಿಯಾ ಟ್ರಸ್ಟ್ ಹೇಳಿದೆ.

ವಲಸೆ ಕಾರ್ಮಿಕರ ಬಗ್ಗೆ, ಸೂಕ್ಷ್ಮವಾಗಿ ಹೆಣೆದುಕೊಂಡಿರುವ ಗ್ರಾಮೀಣ ಭಾರತದ ಆರ್ಥಿಕತೆಯ ಮೇಲೆ, ರೈತರು, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಾರ್ಮಿಕರು, ಕಬ್ಬು ಕತ್ತರಿಸುವವರು, ನೇಕಾರರು, ಆಟಿಕೆ ತಯಾರಕರು, ಇತರ ಕುಶಲಕರ್ಮಿಗಳು, ನೈರ್ಮಲ್ಯ ಕಾರ್ಮಿಕರು, ಸ್ಥಳಾಂತರಗೊಂಡ ಕಾರ್ಮಿಕರು, ಮುಂಬಯಿಯ ಪ್ರಮುಖ ಆಸ್ಪತ್ರೆಗಳ ಹೊರಗಿನ ಫುಟ್‌ಪಾತ್‌ಗಳಲ್ಲಿ ಕಾಯುತ್ತಿರುವ ಗ್ರಾಮೀಣ ಪ್ರದೇಶದ ಕ್ಯಾನ್ಸರ್ ರೋಗಿಗಳು, ಅಲೆಮಾರಿ ಪಾದ್ರಿಗಳು, ದೈನಂದಿನ ಬಾಜಿ ಕಟ್ಟುವವರು, ಜಾನಪದ ಕಲಾವಿದರು, ಮೀನುಗಾರರು, ಕ್ಷೌರಿಕರು, ಇಟ್ಟಿಗೆ ಗೂಡು ಕಾರ್ಮಿಕರು, ಹಾರ್ಮೋನಿಯಂ ರಿಪೇರಿ ಮಾಡುವವರು, ದಲಿತರು ಮತ್ತು ಆದಿವಾಸಿಗಳು… ಹೀಗೆ ವಿವಿಧ ಉದ್ಯೋಗಿಗಳ ಬಗ್ಗೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುತ್ತಾಡಿ ನೂರಾರು ವರದಿಗಳು ಮತ್ತು ವಿಡಿಯೋ ದಾಖಲೆಗಳನ್ನು ಪರಿ ಕಲೆಹಾಕಿದೆ ಎಂದು ಪರಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪಾರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ. ಇದು ಪ್ರಸ್ತುತ ಗ್ರಾಮೀಣ ಭಾರತದ ಮೂಲೆಗೆ ತಳ್ಳಲ್ಪಟ್ಟ ವರದಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತದೆ. ಈಗಾಗಲೇ ಪ್ರಕಟವಾದ ಕಥೆಗಳು, ವರದಿಗಳು, ವೀಡಿಯೊಗಳು ಮತ್ತು ಆಡಿಯೊಗಳ ಡೇಟಾಬೇಸ್ ಅನ್ನು ಸಾಧ್ಯವಾದಷ್ಟು ಮೂಲಗಳಿಂದ ಸಂಗ್ರಹಿಸಲಾಗಿದೆ. PARIಯ ಒಂದು ಕುತೂಹಲಕಾರಿ ಅಂಶವೆಂದರೆ, ಜನರ ದೈನಂದಿನ ಜೀವನದ ಬಗ್ಗೆ ಬರೆಯುತ್ತಿರುವ ಮತ್ತು ನಮ್ಮ ಯೋಜನೆಯ ಮಾನದಂಡಗಳನ್ನು ಪೂರೈಸುವ, ಯೋಜನೆಯ ಆದೇಶವನ್ನು ಅನುಸರಿಸಲು ಸಿದ್ಧರಿರುವ ಯಾರಾದರೂ ವೆಬ್‌ಸೈಟ್‌ಗೆ ಕೊಡುಗೆ ನೀಡಬಹುದು. ಇಲ್ಲಿರುವ ಎಲ್ಲವನ್ನು ಉಚಿತವಾಗಿ ಓದಬಹುದು” ಎಂದು ಪಿ ಸಾಯಿನಾಥ್ ಹೇಳುತ್ತಾರೆ.

ಮತ್ತೊರ್ವ ಪರ್ತಕರ್ತ, ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ದೀಪಂಕರ್ ಘೋಷ್ ಅವರಿಗೂ ಸಹ ಪ್ರೇಮ್ ಭಾಟಿಯಾ ಪ್ರಶಸ್ತಿ ನೀಡಲಾಗಿದೆ.

ಪ್ರಖ್ಯಾತ ಪತ್ರಕರ್ತ ಪ್ರೇಮ್ ಭಾಟಿಯಾ (1911-1995) ಅವರ ನೆನಪಿಗಾಗಿ 1995 ರಲ್ಲಿ ಪ್ರೇಮ್ ಭಾಟಿಯಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ವಸ್ತುನಿಷ್ಠ ವರದಿಗಾರಿಕೆ, ಸತ್ಯದ ನಿರ್ಭೀತ ಅನ್ವೇಷಣೆ ಮತ್ತು ಭಾರತದಲ್ಲಿ ಪತ್ರಿಕೋದ್ಯಮದ ಗುಣಮಟ್ಟವನ್ನು ಸುಧಾರಿಸುವ ಬದ್ಧತೆಯ ಮೌಲ್ಯಗಳನ್ನು ಪ್ರಚುರ ಪಡಿಸುವುದು ಅದರ ಉದ್ದೇಶವಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...