HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...