Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...