ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಗುರುವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದ ಅವರು, ಅಂಕೋಲಾ ತಾಲೂಕಿನ ಬಡಿಗೆರಿ ಗ್ರಾಮದ ತಮ್ಮ ಮನೆಯಲ್ಲಿ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ … Continue reading ಪದ್ಮಶ್ರೀ‌ ಪುರಸ್ಕೃತ ಹೋರಾಟಗಾರ್ತಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ (88) ನಿಧನ