Homeಕರ್ನಾಟಕವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

- Advertisement -
- Advertisement -

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 14, ಶುಕ್ರವಾರದಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ  ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ನಂತರ ಮಾಗಡಿ ತಾಲೂಕಿನ ಚಿಕ್ಕಯ್ಯ ಎಂಬುವವರನ್ನು ವಿವಾಹವಾದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ  ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಾಲುಮರದ ತಿಮ್ಮಕ್ಕ ಅವರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. 

ಸಾಲು ಮರದ ತಿಮ್ಮಕ್ಕ ಅವರ ಸಾವಿಗೆ ಸಂತಾಪ ಸೂಚಿಸಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. 

ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು’ ಎಂದು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...