Homeಕರ್ನಾಟಕಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ...

ಬೆಳ್ತಂಗಡಿ | ಶೇ.100 ಫಲಿತಾಂಶದ ಗೀಳು: ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಿಡದ ಪದ್ಮುಂಜ ಸರ್ಕಾರಿ ಶಾಲೆ ಶಿಕ್ಷಕರು; ಆರೋಪ

- Advertisement -
- Advertisement -

ಶೇಕಡ 100 ಫಲಿತಾಂಶ ಸಾಧಿಸಬೇಕು ಎಂಬ ಕಾರಣಕ್ಕೆ, ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವ ಮೂಲಕ ಶಿಕ್ಷಕರು ಮಹಾ ಅನ್ಯಾಯವೆಸಗಿದ ಆರೋಪ ಕೇಳಿ ಬಂದಿದೆ.

ವಿದ್ಯಾರ್ಥಿನಿಯರು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಪರೀಕ್ಷೆ ಬರೆದು ಫೇಲ್ ಆದರೆ ಶಾಲೆಗೆ 100 ಶೇಕಡ ಫಲಿತಾಂಶ ಬರುವುದಿಲ್ಲ ಎಂಬ ಕಾರಣಕ್ಕೆ, ಅವರಿಗೆ ಹಾಲ್ ಟಿಕೆಟ್ ಕೊಡದೆ ಪರೀಕ್ಷೆ ಬರೆಯುವ ಅವಕಾಶ ತಪ್ಪಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯ್ದಿನ್ ಕುಟ್ಟಿ, “ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನಲಾದ ಸುಮಾರು 6 ಮಕ್ಕಳ ಪೋಷಕರನ್ನು ಎರಡು ತಿಂಗಳ ಹಿಂದೆ ಶಾಲೆಗೆ ಕರೆಸಿದ್ದ ಶಿಕ್ಷಕರು “ನಿಮ್ಮ ಮಕ್ಕಳು ಕಲಿಕೆಯಲ್ಲಿ ಹಿಂದೆ ಇದ್ದಾರೆ. ಪರೀಕ್ಷೆ ಬರೆದರೆ ಫೇಲ್ ಆಗುವ ಸಾಧ್ಯತೆ ಇದೆ. ಅವರನ್ನು ಮುಂದಿನ ಏಪ್ರಿಲ್‌ನಲ್ಲಿ ಪರೀಕ್ಷೆಗೆ ಕೂರಿಸುತ್ತೇವೆ” ಎಂದು ಹೇಳಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ವಿದ್ಯಾರ್ಥಿಗಳ ಪೋಷಕರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಆದರೆ, ಇಬ್ಬರನ್ನು ಹೊರತುಪಡಿಸಿ ನಾಲ್ವರು ವಿದ್ಯಾರ್ಥಿಗಳು ಕಡೆ ಕ್ಷಣದಲ್ಲಿ ಪರೀಕ್ಷೆಗೆ ಹಾಜರಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಮಾತ್ರ ಶಿಕ್ಷಕರ ಮಾತು ಕೇಳಿಕೊಂಡು ಪರೀಕ್ಷೆ ಬರೆದಿಲ್ಲ. ಅವರಿಗೆ ಹಾಲ್‌ ಟಿಕೆಟ್ ಕೂಡ ಕೊಟ್ಟಿಲ್ಲ ಎನ್ನಲಾಗ್ತಿದೆ. ಪೋಷಕರು ಹಾಲ್‌ ಟಿಕೆಟ್ ಬಗ್ಗೆ ಕೇಳಿದಾಗ, “ಅದು ಬಂದಿಲ್ಲ” ಎಂಬ ಸಬೂಬು ನೀಡಿದ್ದಾರಂತೆ. ಈ ಮೂಲಕ ವಿದ್ಯಾರ್ಥಿನಿಯರು ಮಹತ್ವದ ಪರೀಕ್ಷೆ ಬರೆಯುವ ಅವಕಾಶವನ್ನು ಶಿಕ್ಷಕರು ತಪ್ಪಿಸಿದ್ದಾರೆ. ಇದು ಘೋರ ಅನ್ಯಾಯ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಖಾಸಗಿ ಶಾಲೆಗಳು ಶೇಕಡ 100 ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಿವೆ. ಸರ್ಕಾರಿ ಶಾಲೆಗಳು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆಯಬೇಕು. ಆದರೆ, ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವೃಂದ 100 ಶೇಕಡ ಫಲಿತಾಂಶದ ಗೀಳಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದಿರುವುದು ಅಕ್ಷಮ್ಯ ಅಪರಾಧವಾಗಿದೆ.

ಇದರ ಬಗ್ಗೆ ಖುದ್ದು ಅವಕಾಶ ವಂಚಿತರಾಗಿರುವ ಹೆಣ್ಣು ಮಕ್ಕಳು ಮಕ್ಕಳ ಹಕ್ಕುಗಳ ಆಯೋಗ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕರಿಗೆ ಪತ್ರ ಬರೆದಿದ್ದಾರೆ. ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ತಪ್ಪಿತಸ್ಥ ಶಿಕ್ಷಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ, ಆ ಮಕ್ಕಳಿಗೆ ಇನ್ನುಳಿದ ಪರೀಕ್ಷೆಗಳನ್ನು ಬರೆಯಲು ಕೂಡಲೇ ವ್ಯವಸ್ಥೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಪರೀಕ್ಷೆ ವಂಚಿತರಾದ ವಿದ್ಯಾರ್ಥಿನಿಯರು ಅಧಿಕಾರಿಗಳಿಗೆ ಬರೆದಿರುವ ಪತ್ರ ನಮಗೆ ದೊರೆತಿದ್ದು, ಅದರಲ್ಲಿ ಇಬ್ಬರೂ ಕೂಡ “ನಮ್ಮ ಅನುಮತಿ ಪಡೆಯದೆ, ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಿಕ್ಷಕರು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ನಮ್ಮನ್ನು ಶಿಕ್ಷಣದಿಂದ ವಂಚಿತರಾಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. “ನಮಗೆ ಈ ಶೈಕ್ಷಣಿಕ ವರ್ಷದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಮತ್ತು ಈ ಬಗ್ಗೆ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನ್ಯಾ. ನಾಗಮೋಹನದಾಸ್ ಆಯೋಗದಿಂದ ಇಂದು ಮಧ್ಯಂತರ ವರದಿ ಸಲ್ಲಿಕೆ

ಪಕ್ಷ ವಿರೋಧಿ ಹೇಳಿಕೆ: ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...