Homeಮುಖಪುಟಪಹಲ್ಗಾಮ್ ದಾಳಿ: ಪುಣೆ ಗ್ರಾಮಗಳಿಂದ 'ಸ್ಥಳೀಯರಲ್ಲದ' ಮುಸ್ಲಿಮರಿಗೆ ನಮಾಜ್  ನಿರ್ಬಂಧ

ಪಹಲ್ಗಾಮ್ ದಾಳಿ: ಪುಣೆ ಗ್ರಾಮಗಳಿಂದ ‘ಸ್ಥಳೀಯರಲ್ಲದ’ ಮುಸ್ಲಿಮರಿಗೆ ನಮಾಜ್  ನಿರ್ಬಂಧ

- Advertisement -
- Advertisement -

ಪುಣೆ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನಿಷ್ಠ 26 ಜೀವಗಳನ್ನು ಬಲಿ ತೆಗೆದುಕೊಂಡು ಹಲವಾರು ಮಂದಿ ಗಾಯಗೊಂಡ ಘಟನೆಯ ನಂತರ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಲವಾರು ಗ್ರಾಮ ಪಂಚಾಯತ್‌ಗಳು ‘ಹೊರಗಿನ’ ಮುಸ್ಲಿಮರು ಗ್ರಾಮದ ಮಸೀದಿಗಳಲ್ಲಿ ನಮಾಜ್ ಮಾಡುವುದನ್ನು ನಿರ್ಬಂಧಿಸುವ ನಿರ್ಣಯಗಳನ್ನು ಅಂಗೀಕರಿಸಿವೆ.

ಮುಲ್ಶಿ ತಹಸಿಲ್‌ನ ಘೋಟವಾಡೆ, ಪಿರಂಗುಟ್, ವಾಡ್ಕಿ ಮತ್ತು ಲಾವಾಲೆ ಮುಂತಾದ ಗ್ರಾಮಗಳು ಸಾರ್ವಜನಿಕ ಸೂಚನೆಗಳನ್ನು ನೀಡಿವೆ ಮತ್ತು ಗ್ರಾಮದ ಮಸೀದಿಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳುವ ಬ್ಯಾನರ್‌ಗಳನ್ನು ಹಾಕಿವೆ. ಆಯಾ ಗ್ರಾಮ ಪಂಚಾಯತ್‌ಗಳು ಅಂಗೀಕರಿಸಿದ ನಿರ್ಣಯಗಳು ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಹೆಚ್ಚಿದ ಜನದಟ್ಟಣೆಯಿಂದಾಗಿ “ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿ”ಯನ್ನು ಉಲ್ಲೇಖಿಸುತ್ತವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪಿರಂಗುಟ್‌ನ ಪೊಲೀಸ್ ಅಧಿಕಾರಿ ಪಾಟೀಲ್ ಪ್ರಕಾಶ್ ಪಾವಲೆ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. “ಶುಕ್ರವಾರದಂದು ಹೊರಗಿನವರ ಸಂಖ್ಯೆ ಹೆಚ್ಚಾಗುತ್ತದೆ, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲುಗಳನ್ನು ಒಡ್ಡಬಹುದು. ಆದ್ದರಿಂದ, ಸ್ಥಳೀಯ ಗ್ರಾಮಸ್ಥರಿಗೆ ಮಾತ್ರ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಲಾಗುವುದು” ಎಂಬ ಗ್ರಾಮ ಪಂಚಾಯತ್ ಗಳ ನಿರ್ಣಯಗಳನ್ನು ಅವರು ದೃಢಪಡಿಸಿದರು.

ಇಲ್ಲಿಯವರೆಗೆ ಯಾವುದೇ ಪೊಲೀಸ್ ದೂರುಗಳು ದಾಖಲಾಗಿಲ್ಲವಾದರೂ, ಈ ನಿರ್ಧಾರವು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರಲ್ಲಿ ದುಃಖವನ್ನುಂಟುಮಾಡಿದೆ.

“ನಾವು ಭಯಭೀತರಾಗಿದ್ದೇವೆ. ಗ್ರಾಮದ ಮಸೀದಿಯು ದೇವಾಲಯದ ಪಕ್ಕದಲ್ಲಿರುವ ಕಾರಣ ನಾವು ಈಗಾಗಲೇ ಅಲ್ಲಿಗೆ ಹೋಗುವುದನ್ನು ನಿಲ್ಲಿಸಿದ್ದೇವೆ. ನಾವು ಗ್ರಾಮದ ಹೊರಗಿನ ಶೆಡ್‌ನಲ್ಲಿ ಪ್ರಾರ್ಥಿಸುತ್ತೇವೆ. ಪಹಲ್ಗಾಮ್ ದಾಳಿಯ ನಂತರ ಭಯ ಹೆಚ್ಚುತ್ತಿದೆ” ಎಂದು ಲಾವಾಲೆ ನಿವಾಸಿ ಶೈಸ್ತಖಾನ್ ಇನಾಮದಾರ್ ಹೇಳಿದರು.

ಪಿರಂಗುಟ್‌ನ ಸುನ್ನಿ ಮಸೀದಿ ಟ್ರಸ್ಟ್‌ನ ಅಧ್ಯಕ್ಷ ನಬಿಲಾಲ್ ಶೇಖ್, ಈ ನಿರ್ಣಯವು ಧಾರ್ಮಿಕ ಜೀವನ ಮತ್ತು ದೀರ್ಘಕಾಲೀನ ಸಾಮಾಜಿಕ ಸಂಬಂಧಗಳನ್ನು ಅಡ್ಡಿಪಡಿಸುತ್ತದೆ ಎಂದು ಹೇಳಿದರು. “ಇದು ತಾಲ್ಲೂಕಿನಲ್ಲಿ ಅತಿದೊಡ್ಡ ಮಸೀದಿ. ಪ್ರದೇಶದಾದ್ಯಂತದ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಗಾಗಿ ಇಲ್ಲಿಗೆ ಬರುತ್ತಾರೆ. ಹೊಸ ನಿರ್ಬಂಧವು ಸಂಬಂಧಿಕರು ಮತ್ತು ಇತರರನ್ನು ಭೇಟಿ ಮಾಡಲು ಕಷ್ಟಕರವಾಗಿಸುತ್ತದೆ” ಎಂದು ಅವರು ಹೇಳಿದರು.

ಅವರು ಪ್ರದೇಶದ ಕೋಮು ಸಾಮರಸ್ಯದ ಇತಿಹಾಸವನ್ನು ಸಹ ತೋರಿಸಿದರು ಮತ್ತು “ನಾವು ಯಾವಾಗಲೂ ಗಣಪತಿ ಮೆರವಣಿಗೆಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ನಮ್ಮ ಹಿಂದೂ ನೆರೆಹೊರೆಯವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಭಾಗವಹಿಸಿದ್ದೇವೆ” ಎಂದು ಅವರು ಹೇಳಿದರು.

ಆದಾಗ್ಯೂ, ಈ ಎಲ್ಲಾ ಬದಲಾವಣೆಯಿಂದ ತಾನು ನಲುಗಿದ್ದೇನೆ ಎಂದು ಶೇಖ್ ಹೇಳಿದರು. “ನನ್ನ 76 ವರ್ಷಗಳಲ್ಲಿ ನಾನು ಇಲ್ಲಿ ಇಂತಹ ಧ್ರುವೀಕರಣವನ್ನು ಎಂದಿಗೂ ನೋಡಿಲ್ಲ. ನಮ್ಮ ಮಸೀದಿ ನನ್ನ ಅಜ್ಜನ ಕಾಲಕ್ಕೂ ಮೊದಲಿನಿಂದಲೂ ಅಸ್ತಿತ್ವದಲ್ಲಿದೆ” ಎಂದಿದ್ದಾರೆ.

ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅನಿಲ್ ವಿಭೂತೆ ಮಾತನಾಡಿ, ಧಾರ್ಮಿಕ ಸಮುದಾಯಗಳಲ್ಲಿ ಒಮ್ಮತದೊಂದಿಗೆ ಗ್ರಾಮ ಪಂಚಾಯತ್ ಗಳು ಈ ನಿರ್ಣಯವನ್ನು ಅಂಗೀಕರಿಸಿವೆ ಎಂದು ಹೇಳಿದರು. “ಇಲ್ಲಿಯವರೆಗೆ ಮುಸ್ಲಿಂ ನಿವಾಸಿಗಳಿಂದ ಯಾವುದೇ ಔಪಚಾರಿಕ ದೂರುಗಳು ಬಂದಿಲ್ಲ ಮತ್ತು ಯಾವುದೇ ಪೊಲೀಸ್ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಅವರು ಹೇಳಿದರು.

ಉತ್ತರ ಪ್ರದೇಶ| ಲೈಂಗಿಕ ದೌರ್ಜನ್ಯ ವಿರೋಧಿಸಿದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅಮಾನುಷ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...