Homeಮುಖಪುಟಪಹಲ್ಗಾಮ್ ದಾಳಿಕೋರರಿಗೆ 'ಊಹೆಗೂ ಮೀರಿದ' ಶಿಕ್ಷೆ: ಚುನಾವಣೆಗೆ ಸಜ್ಜಾದ ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಪಹಲ್ಗಾಮ್ ದಾಳಿಕೋರರಿಗೆ ‘ಊಹೆಗೂ ಮೀರಿದ’ ಶಿಕ್ಷೆ: ಚುನಾವಣೆಗೆ ಸಜ್ಜಾದ ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

- Advertisement -
- Advertisement -

ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗೆ ಕಾರಣರಾದ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಚ್ಚರಿಸಿದ್ದಾರೆ. ಅವರು ಮುಂದೆ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಹೇಳಿದ್ದು, ಭಯೋತ್ಪಾದಕನ್ನು ಗುರುತಿಸಿ, ಪತ್ತೆಹಚ್ಚಿ, ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಕೋರರಿಗೆ

ಬಿಹಾರದ ಮಧುಬನಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಆಯೋಜಿಸಲಾದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, “ಭಾರತವು ಪ್ರತಿಯೊಬ್ಬ ಭಯೋತ್ಪಾದಕ, ಅವರ ನಿರ್ವಾಹಕರು ಮತ್ತು ಅವರ ಬೆಂಬಲಿಗರನ್ನು ಗುರುತಿಸಿ, ಟ್ರ್ಯಾಕ್ ಮಾಡಿ ಶಿಕ್ಷಿಸುತ್ತದೆ. ನಾವು (ಭಾರತ) ಅವರನ್ನು ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಅವರಿಗೆ ಅವರ ಕಲ್ಪನೆಗೂ ಮೀರಿ ಶಿಕ್ಷೆಯಾಗುತ್ತದೆ.” ಎಂದು ಮೋದಿ ಹೇಳಿದ್ದಾರೆ.

ಭಯೋತ್ಪಾದಕರ ದಾಳಿಯು ದೇಶದ 140 ಕೋಟಿ ಜನರ ಉತ್ಸಾಹವನ್ನು ಕುಗ್ಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. “ಭಯೋತ್ಪಾದನೆಯಿಂದ ಭಾರತದ ಆತ್ಮವು ಎಂದಿಗೂ ಮುರಿಯುವುದಿಲ್ಲ. ಘಟನೆಯಲ್ಲಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬಗಳಿಗೆ ನ್ಯಾಯ ಒದಗಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು” ಎಂದು ಅವರು ಹೇಳಿದ್ದಾರೆ.

ಭಯೋತ್ಪಾದಕರು ಮತ್ತು ಪಿತೂರಿಗಾರರನ್ನು ಅವರ ಘೋರ ಕೃತ್ಯಕ್ಕಾಗಿ ನ್ಯಾಯದ ಕಟಕಟೆಗೆ ತರುವ ದೃಢಸಂಕಲ್ಪದಲ್ಲಿ ಇಡೀ ರಾಷ್ಟ್ರ ದೃಢವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಮಾನವೀಯತೆಯಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ” ಎಂದು ಅವರು ಹೇಳಿದ್ದು, ಬಿಕ್ಕಟ್ಟಿನ ಸಮಯದಲ್ಲಿ ಭಾರತದೊಂದಿಗೆ ನಿಂತ ವಿವಿಧ ದೇಶಗಳ ಜನರು ಮತ್ತು ಅವರ ನಾಯಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.

ಭಾರತದ 140 ಕೋಟಿ ಜನರ ಚೈತನ್ಯವು ಭಯೋತ್ಪಾದನೆಯ ಬೆನ್ನೆಲುಬನ್ನು ಮುರಿಯುತ್ತದೆ ಎಂದು ಅವರು ಹೇಳಿದ್ದಾರೆ. “ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳುವ ಸಮಯ ಇದು” ಎಂದು ಅವರು ಪ್ರತಿಪಾದಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ದಾಳಿಯನ್ನು ಇಡೀ ರಾಷ್ಟ್ರದ ಮೇಲಿನ ದಾಳಿ ಎಂದು ಅವರು ಬಣ್ಣಿಸಿದ್ದು, ಇದು ಅಪರಾಧಿಗಳಿಗೆ ಸೂಕ್ತ ಉತ್ತರವನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಕೋರರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...