ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದಿರುವುದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಏ.23) ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಎರಡೂವರೆ ಗಂಟೆಗಳ ಸಭೆಯ ನಂತರ, ಪಾಕಿಸ್ತಾನದೊಂದಿಗಿನ ಸಂಬಂಧ ಕಡಿತಗೊಳಿಸುವ ನಿರ್ಧಾರ ಹೊರಬಿದ್ದಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಿಸಿಎಸ್ ಸಭೆಯ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
“ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ 1960ರಲ್ಲಿ ಭಾರತ-ಪಾಕಿಸ್ತಾನ ಸಹಿ ಹಾಕಿರುವ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಭಾರತ-ಪಾಕಿಸ್ತಾನ ನಡುವಿನ ಅಟ್ಟಾರಿ ಗಡಿಯನ್ನು ಬಂದ್ ಮಾಡಲಾಗುವುದು. ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾಗುವ ಸಾರ್ಕ್ ವೀಸಾ ಸೌಲಭ್ಯ ರದ್ದುಗೊಳಿಸಲಾಗಿದೆ. ಪಾಕಿಸ್ತಾನದ ಭಾರತೀಯ ರಾಯಭಾರ ಕಚೇರಿಯಿಂದ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು. ಪಾಕಿಸ್ತಾನದ ಮಿಲಿಟರಿ ರಾಜತಾಂತ್ರಿಕರಿಗೆ ಭಾರತದಿಂದ ಹೊರ ನಡೆಯಲು ಸೂಚನೆ ನೀಡಲಾಗುವುದು. ಸಾರ್ಕ್ ವೀಸಾ ವಿನಾಯಿತಿ ಸೌಲಭ್ಯದ ಮೇಲೆ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು ನೀಡಲಾಗಿದೆ” ಎಂದು ವಿಕ್ರಮ್ ಮಿಸ್ರಿ ವಿವರಿಸಿದ್ದಾರೆ.
ಸಿಂಧೂ ಜಲ ಒಪ್ಪಂದ ರದ್ದು
1960ರ ಸೆಪ್ಟೆಂಬರ್ 19ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಫೀಲ್ಡ್ ಮಾರ್ಷಲ್ ಅಯೂಬ್ ಖಾನ್ ನಡುವೆ ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದವು, ಪಶ್ಚಿಮದ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್‌ಗಳನ್ನು ಪಾಕಿಸ್ತಾನಕ್ಕೆ ಮತ್ತು ಪೂರ್ವದ ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್‌ಗಳನ್ನು ಭಾರತಕ್ಕೆ ಹಂಚಿಕೆ ಮಾಡಿತ್ತು. ಈ ಒಪ್ಪಂದವನ್ನು ರದ್ದುಗೊಳಿಸಲು ಭಾರತ ತೀರ್ಮಾನಿಸಿದೆ.
ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯಲು ಗಡುವು
ರಾಜತಾಂತ್ರಿಕ ಮತ್ತು ಭದ್ರತಾ ಕ್ರಮಗಳ ಭಾಗವಾಗಿ, ಭಾರತವು ಪಾಕಿಸ್ತಾನಿ ರಾಜತಾಂತ್ರಿಕರು ದೇಶ ತೊರೆಯಲು ಆದೇಶಿಸಿದೆ. ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಲಾಗಿದೆ. ಅವರು ಭಾರತ ತೊರೆಯಲು ಒಂದು ವಾರದ ಕಾಲವಕಾಶವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ.
ಭಾರತವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತನ್ನ ಮಿಲಿಟರಿ ಸಲಹೆಗಾರರನ್ನು ವಾಪಸ್ ಕರೆಸಿಕೊಳ್ಳಲಿದೆ. ಸಾರ್ಕ್ ವೀಸಾ ಹೊಂದಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಭಾರತ ತೊರೆಯಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಇನ್ನು ಮುಂದೆ ಅವಕಾಶವಿರುವುದಿಲ್ಲ. ಈಗಾಗಲೇ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ SVES ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಮಿಸ್ರಿ ಘೋಷಿಸಿದ್ದಾರೆ.
ಏಕೈಕ ಭೂ ಮಾರ್ಗ ಬಂದ್
ಭಾರತ ಮತ್ತು ಪಾಕಿಸ್ತಾನ ನಡುವಿನ ಏಕೈಕ ಭೂ ಮಾರ್ಗ ವಾಘಾ-ಅಟ್ಟಾರಿ ಗಡಿಯನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. “ಅಟ್ಟಾರಿ ಸಮಗ್ರ ಚೆಕ್‌ಪೋಸ್ಟ್’ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವುದು. ಅನುಮತಿ ಪಡೆದು ಗಡಿ ದಾಟಿದವರು ಮೇ 1, 2025ರ ಮೊದಲು ವಾಘಾ-ಅಟ್ಟಾರಿ ಮಾರ್ಗದ ಮೂಲಕ ಹಿಂತಿರುಗಬಹುದು ಎಂದು ಮಿಸ್ರಿ ತಿಳಿಸಿದ್ದಾರೆ.
ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದ ಬಳಿಯ ಪ್ರವಾಸಿತಾಣ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ.
2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ರೆಸಿಸ್ಟೆನ್ಸ್ ಫ್ರಂಟ್ (TRF)ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ



Crying wolf does not help either?
Possibly, it was ignored as a hoax?
And now heads are going to roll?