Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದೇನು?

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದೇನು?

- Advertisement -
- Advertisement -

ಮಂಗಳವಾರ (ಏ.22) ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಯ ಪ್ರಾಥಮಿಕ ತನಿಖೆಯಲ್ಲಿ, ಕನಿಷ್ಠ ನಾಲ್ವರು ಭಯೋತ್ಪಾದಕರು ಮಾರುವೇಷದಲ್ಲಿ ಬೈಸರನ್ ಹುಲ್ಲುಗಾವಲಿಗೆ ಬಂದು ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ಗಳು ಮತ್ತು ಎಕೆ-47ಗಳಿಂದ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ indianexpress.com ವರದಿ ಮಾಡಿದೆ.

ಮಂಗಳವಾರ ಸಂಜೆಯವರೆಗೆ ಘಟನಾ ಸ್ಥಳದಿಂದ ಸುಮಾರು 50-70 ಬಳಸಿದ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾದೆ ಎಂದು ವರದಿ ತಿಳಿಸಿದೆ.

ಕೇಂದ್ರ ಸರ್ಕಾರದ ಘಟನೆಯ ತನಿಖೆಯನ್ನು ಜಮ್ಮು ಕಾಶ್ಮೀರ ಪೊಲೀಸರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಲು ಯೋಜಿಸಿದೆ ಎಂದಿದೆ.

“ದಾಳಿಯ ಬಲಿಪಶುಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ನಾಲ್ವರು ಭಯೋತ್ಪಾದಕರು ಮಾರುವೇಷದಲ್ಲಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಇಬ್ಬರು ವಿದೇಶಿ ಪ್ರಜೆಗಳಿದ್ದ ಶಂಕೆಯಿದೆ.”

“ಹುಲ್ಲುಗಾವಲು ತಲುಪಿದ ಬಳಿಕ, ಭಯೋತ್ಪಾದಕರು ಮೊದಲು ಪ್ರವಾಸಿಗರನ್ನು ಬಂದೂಕು ತೋರಿಸಿ ಒತ್ತೆಯಾಳಾಗಿ ಇಟ್ಟುಕೊಂಡರು. ನಂತರ ಎಲ್ಲಾ ಮಹಿಳೆಯರು ಮತ್ತು ಮಕ್ಕಳನ್ನು ದೂರವಿರಲು ಕೇಳಿಕೊಂಡರು. ನಂತರ ಪುರುಷರ ಗುರುತು ವಿಚಾರಿಸಿದ ಅವರಿಗೆ ಹತ್ತಿರದಿಂದ ಗುಂಡಿಕ್ಕಿದರು. ನಂತರ ಅವರು ಮನಸ್ಸೋ ಇಚ್ಚೆ ಗುಂಡು ಹಾರಿಸಿದರು” ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ತಿಳಿಸಿದೆ.

“ಕೆಲ ಪ್ರವಾಸಿಗರನ್ನು ಕೊಲ್ಲುವ ಮೊದಲು ಅವರಿಗೆ ವಸ್ತ್ರ ಕಳಚುವಂತೆ ಹೇಳಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಪೊಲೀಸರು ಈ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಸುಮಾರು 20-25 ನಿಮಿಷಗಳ ಕಾಲ ನಡೆದಿದೆ” ಎಂದಿದೆ.

“ಇಬ್ಬರು ಭಯೋತ್ಪಾದಕರು ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ಗಳನ್ನು ಹೊಂದಿದ್ದರೆ, ಇನ್ನಿಬ್ಬರು ಎಕೆ-47 ಗಳನ್ನು ಹೊಂದಿದ್ದರು. ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳೀಯ ನಿವಾಸಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ನಡೆಸಲು ಸಹಕರಿಸಿದವರು ಯಾರಾದರು ಇದ್ದಾರಾ? ಎಂದು ಕಂಡುಹಿಡಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ದಾಳಿಯ ನಂತರ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ” ಎಂದು ವರದಿ ಹೇಳಿದೆ.

“ಪ್ರಾಥಮಿಕವಾಗಿ ನೋಡಿದರೆ, ಭಯೋತ್ಪಾದಕರು ಕಿಶ್ತ್ವಾರ್‌ ದಾಟಿ ಕೊಕರ್ನಾಗ್ ಮೂಲಕ ಬೈಸರನ್ ತಲುಪಿದ್ದು ಸ್ಥಳೀಯರ ಸಹಾಯದಿಂದ ಎಂದು ತೋರುತ್ತದೆ. ಕೆಲವು ದಿನಗಳ ಹಿಂದೆ ಗುಪ್ತಚರ ಸಂಸ್ಥೆಗಳು ಭಯೋತ್ಪಾದಕ ಗುಂಪು ‘ಸ್ಥಳೀಯರಲ್ಲದವರ’ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಮತ್ತು ಐಇಡಿ ದಾಳಿಯ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿತ್ತು. ಆದರೆ, ವಿವರಗಳು ಸ್ಪಷ್ಟವಾಗಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ತಿಳಿಸಿದೆ.

ಪಹಲ್ಗಾಮ್ ದಾಳಿಗೆ ಗುಪ್ತಚರ ವೈಫಲ್ಯ ಕಾರಣ: ಘಟನೆ ಖಂಡಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...